
ಜೀವರ್ಗಿ : ಡಾ. ಬಾಬಾಸಾಹೇಬ್ ಅಂಬೇಡ್ಕರ್ ತುಳಿತಕ್ಕೊಳಗಾದ ಎಲ್ಲ ಸಮುದಾಯದವರನ್ನು ಮೇಲಕ್ಕೆ ಎತ್ತಿದ ವ್ಯಕ್ತಿ. ಕ್ರಿಮಿಕೀಟಗಳಿಗೂ ಜೀವಿಸುವ ಹಕ್ಕಿದೆ. ಪ್ರಾಣಿಗಳ ಮೇಲೆ ದಯ ತೋರಬೇಕು ಎಂದು ಸಂವಿಧಾನದ ಮೂಲಕ ಹೇಳಿದರು. ಅವರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಶಾಂತಾ ಬಿ ಅಸ್ಟಿಗೆ ಹೇಳಿದರು.
ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಹಿರಿಯ ಪ್ರಾಧ್ಯಾಪಕರಾದ ಡಾ. ರಾಬಿಯಾ ಬೇಗಂ ಅವರು ಮಾತನಾಡಿ ಡಾ. ಅಂಬೇಡ್ಕರ್ ಅವರನ್ನು ಭಾರತಿಯರು ಚೆನ್ನಾಗಿ ಅರ್ಥ ಮಾಡಿಕೊಂಡಿಲ್ಲ. ಭಾರತೀಯರು ಅವರ ವ್ಯಕ್ತಿತ್ವವನ್ನು ಅರ್ಥಮಾಡಿಕೊಳ್ಳಬೇಕು. ಇಂದು ವಿಶ್ವದಲ್ಲಿ ಶಾಂತಿಯ ಕೊರತೆ ಇದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಾಣಿಜ್ಯ ಸ್ನಾತಕೋತ್ತರ ವಿಭಾಗದ ಸಂಯೋಜಕ ಡಾ. ಶಿವಕುಮಾರ್ ಬಿ, ಅತಿಥಿ ಉಪನ್ಯಾಸಕ ಡಾ. ನಾಗನಗೌಡ ಮಾತನಾಡಿದರು. ವೇದಿಕೆಯಲ್ಲಿ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ
ಎನ್ ಜಿ ಶ್ರೀಧರ್. ಐಕ್ಯುಏಸಿ ಸಂಯೋಜಕ ಡಾ. ಸಂದೀಪ್ ತಿವಾರಿ, ನಿರ್ವಹಣಾಶಾಸ್ತ್ರ ವಿಭಾಗದ ಅಧ್ಯಾಪಕ ಹೊನ್ನೂರಸ್ವಾಮಿ ಇದ್ದರು.ಎನ್ ಎಸ್ ಎಸ್ ಘಟಕದ ಸಂಚಾಲಕ ಡಾ. ಶರಣಪ್ಪ ಗುಂಡಗುರ್ತಿ ಸ್ವಾಗತಿಸಿದರೆ, ಸಾಂಸ್ಕøತಿಕ ಸಮಿತಿ ಸಂಚಾಲಕ ಡಾ.ಖಾಜಾವಲಿ ಈಚನಾಳ ನಿರೂಪಿಸಿದರು. ಹಿಂದಿ ವಿಭಾಗದ ಮುಖ್ಯಸ್ಥ ಕುಪೇಂದ್ರ ವಂದಿಸಿದರು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಅಧ್ಯಾಪಕರು, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.























