ಕಲಬುರಗಿ: ವಿಜ್ಞಾನಿಯಾಗಿ, ರಾಷ್ಟ್ರಪತಿಯಾಗಿಯಾಗಿ, ತತ್ವಜ್ಞಾನಿಯಾಗಿ, ಶಿಕ್ಷಣ ತಜ್ಞರಾಗಿ, ಕ್ಷಿಪಣಿಯ ರೂವಾರಿಯಾಗಿ, ಧೀಮಂತ ಧುರಿಣರಾಗಿ, ಯುವ ಜನತೆಯ ದಾರಿದೀಪವಾಗಿ, ರಾಷ್ಟ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿರುವ ಡಾ.ಎ.ಪಿ.ಜೆ.ಅಬ್ದುಲ್ ಕಲಾಂರ ಕೊಡುಗೆ ಪಾರವಾಗಿದೆ ಎಂದು ಉಪನ್ಯಾಸಕ ಎಚ್.ಬಿ.ಪಾಟೀಲ್ ಹೇಳಿದರು.
ನಗರದ ಖಾದ್ರಿ ಚೌಕ್‍ನಲ್ಲಿನ ‘ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಗುರುವಾರ ಜರುಗಿದ ‘ಡಾ.ಎ.ಪಿ.ಜೆ.ಅಬ್ದುಲ್ ಕಲಾಂರ 95ನೇ ಜನ್ಮದಿನ-ವಿಶ್ವ ವಿದ್ಯಾರ್ಥಿಗಳ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್ ಮಾತನಾಡಿ, ಕಲಾಂ ಅವರಂತಹ ಮೇರು ವ್ಯಕ್ತಿತ್ವ ಹೊಂದಿದವರು ವಿರಳ. ಅವರಲ್ಲಿರುವ ದೇಶದ ಅಭಿವೃದ್ಧಿಯ ತುಡಿತ ನಮ್ಮೆಲ್ಲರಿಗೆ ಸದಾ ಮಾದರಿಯಾಗಿದೆ. ವಿದ್ಯಾರ್ಥಿಗಳ ಬಗ್ಗೆಯಿದ್ದ ಅವರ ಕಾಳಜಿಯಿಂದ ಅವರ ಜನ್ಮದಿನವನ್ನು ‘ವಿಶ್ವ ವಿದ್ಯಾರ್ಥಿಗಳ ದಿನಾಚರಣೆ’ಯನ್ನಾಗಿ ಆಚರಿಸುವ ಮೂಲಕ ಇಡೀ ವಿದ್ಯಾರ್ಥಿ ಸಮುದಾಯಕ್ಕೂ ಕೂಡಾ ಗೌರವ ನೀಡಿದಂತಾಗಲು ಕಲಾಂ ಅವರೇ ಕಾರಣರಾಗಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಸಂಸ್ಥೆಯ ಸಿಬ್ಬಂದಿ ಮುಸ್ಕಾನ್ ಶೇಖ್, ರುಕ್ಸಾನಾ ಪಟೇಲ್ ಪೂಜಾ ಕೋಲಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.




















