Home ಜಿಲ್ಲೆ ಕಲಬುರಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಡಾ.ಅಪ್ಪ ಕೊಡುಗೆ ಅಪಾರ

ಕಲ್ಯಾಣ ಕರ್ನಾಟಕ ಭಾಗಕ್ಕೆ ಡಾ.ಅಪ್ಪ ಕೊಡುಗೆ ಅಪಾರ

ಕಲಬುರಗಿ : ಪೂಜ್ಯ ಡಾ.ಶರಣಬಸವಪ್ಪ ಅಪ್ಪ ಅವರು ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿ ಶೈಕ್ಷಣಿಕವಾಗಿ ಈ ಭಾಗವನ್ನು ಹೆಮ್ಮರಗೊಳಿಸಿದ್ದಾರೆ ಎಂದು ಹಿರಿಯ ಪ್ರಾಧ್ಯಾಪಕಿ ಡಾ.ಪುಟ್ಟಮಣಿ ದೇವಿದಾಸ ಹೇಳಿದರು.
ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ಶನಿವಾರ ಪೂಜ್ಯ ಡಾ.ಶರಣಬಸವಪ್ಪ ಅಪ್ಪ ಅವರ 92ನೇ ಜನ್ಮ ದಿನಾಚಾರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಪೂಜ್ಯರು ಅಕ್ಷರ, ಅನ್ನ ದಾಸೋಹಕ್ಕೆ ಬಹಳ ಪ್ರಾಮುಖ್ಯತೆ ನೀಡಿದ್ದರು, ಮಕ್ಕಳ ಏಳ್ಗೆಗಾಗಿ ನಿರಂತರವಾಗಿ ಚಿಂತಿಸುತ್ತಿದ್ದರು ಎಂದು ಹೇಳಿದರು.
ನಂತರ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸಿದ್ಧಲಿಂಗರೆಡ್ಡಿ ಮಾತನಾಡಿ, ಪೂಜ್ಯ ಅಪ್ಪ ಅವರು ಶೈಕ್ಷಣಿಕ, ಸಾಹಿತ್ಯ, ಸಾಂಸ್ಕøತಿ, ಧಾರ್ಮಿಕ ಹೀಗೆ ಎಲ್ಲಾ ಕ್ಷೇತ್ರದಲ್ಲಿ ಕೊಡುಗೆ ನೀಡಿ, ಈ ಭಾಗವನ್ನು ವಿಶ್ವದ ಭೂಪಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ ಎಂದು ಹೇಳಿದರು.
ಕೃಪಾಸಾಗರ ಗೊಬ್ಬುರ್ ನಿರೂಪಿಸಿ, ವಂದಿಸಿದರು. ಮಹಾವಿದ್ಯಾಲಯದ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಯವರು ಮತ್ತು ವಿದ್ಯಾರ್ಥಿನಿಯರು ಇದ್ದರು.