
ಧಾರವಾಡ,ಏ.೧೫: ಡಾ. ಬಿ. ಆರ್. ಅಂಬೇಡ್ಕರ್ ಅವರು ಸಂವಿಧಾನ ರಚನೆ ಮೂಲಕ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ ಹಾಕಿಕೊಟ್ಟವರು ಹಾಗೂ ಅವರು ಎದುರಿಸಿದ ಕ?À್ಟಗಳು ಅಪಾರವಾಗಿದ್ದು, ಸಮಾಜದ ಅನ್ಯಾಯ ಮತ್ತು ಅಸಮಾನತೆ ನಡುವೆಯೇ ಅವರು ಉನ್ನತ ಶಿಕ್ಷಣ ಪಡೆದು, ಹಲವು ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ ಭಾರತದ ಸಂವಿಧಾನವನ್ನು ರಚಿಸಿದ್ದಾರೆ ಎಂದು ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋ?À ಎಸ್.ಲಾಡ್ ಅವರು ಹೇಳಿದರು.
ಅವರು ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ.ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸಂಯುಕ್ತವಾಗಿ ಆಯೋಜಿಸಿದ್ದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.
ಸಂವಿಧಾನವನ್ನು ರಚಿಸಲು ಸುಮಾರು ೨ ವ?Àð ೧೧ ತಿಂಗಳು ೧೮ ದಿನಗಳ ಕಾಲ ನಿರಂತರ ಚರ್ಚೆ ನಡೆಸಿ ಈ ಮಹತ್ವದ ಗ್ರಂಥವನ್ನು ರೂಪಿಸಲಾಗಿದೆ. ಭಾರತದಲ್ಲಿ ಹಿಂದಿನಿAದಲೂ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆ ಇದ್ದ ಸಂದರ್ಭದಲ್ಲಿ, ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ಅಂಬೇಡ್ಕರ್ ಅವರು ಹೋರಾಡಿ, ಎಲ್ಲ ವರ್ಗಗಳಿಗೂ ಸಮಾನ ಹಕ್ಕುಗಳನ್ನು ಒದಗಿಸುವ ವ್ಯವಸ್ಥೆಯನ್ನು ನಿರ್ಮಿಸಿದರು. ಸಂವಿಧಾನವು ಕೇವಲ ಒಂದು ವರ್ಗಕ್ಕೆ ಸೀಮಿತವಲ್ಲದೆ, ಎಲ್ಲಾ ನಾಗರಿಕರ ಹಿತಕ್ಕಾಗಿ ರೂಪಿತವಾಗಿದೆ ಎಂದು ಅವರು ಹೇಳಿದರು.
ಮೀಸಲಾತಿ ವ್ಯವಸ್ಥೆಯು ಸಾಮಾಜಿಕ ನ್ಯಾಯ ಸಾಧಿಸಲು ಅಗತ್ಯವಾಗಿದ್ದು, ಇದು ಭಾರತದಲ್ಲ?ೆ್ಟÃ ಅಲ್ಲದೆ ಅನೇಕ ದೇಶಗಳಲ್ಲಿ ವಿವಿಧ ರೂಪಗಳಲ್ಲಿ ಜಾರಿಯಲ್ಲಿದೆ. ಸಮಾಜದಲ್ಲಿ ಹಿಂದುಳಿದ ವರ್ಗಗಳಿಗೆ ಅವಕಾಶ ಕಲ್ಪಿಸುವುದು ಇದರ ಮುಖ್ಯ ಉದ್ದೇಶ ಎಂದು ಅವರು ಹೇಳಿದರು.
ಹೆಣ್ಣುಮಕ್ಕಳ ಹಕ್ಕುಗಳ ವಿ?Àಯದಲ್ಲಿ ಅಂಬೇಡ್ಕರ್ ಅವರ ಕೊಡುಗೆ ಅತ್ಯಂತ ಮಹತ್ವದ್ದಾಗಿದೆ. ಮಹಿಳೆಯರಿಗೆ ಆಸ್ತಿ ಹಕ್ಕು, ಮರು ವಿವಾಹ ಹಕ್ಕು ಹಾಗೂ ಸಮಾನ ಅವಕಾಶಗಳನ್ನು ನೀಡುವಲ್ಲಿ ಅವರ ಪಾತ್ರವನ್ನು ಸ್ಮರಿಸಬೇಕಾಗಿದೆ ಎಂದು ಸವಮಚಿವ ಸಂತೋ?À ಲಾಡ್ ಅವರು ತಿಳಿಸಿದರು.
ಇಂದಿನ ಯುವಕರು ಅಂಬೇಡ್ಕರ್ ಅವರ ವಿಚಾರಗಳನ್ನು ಸರಿಯಾಗಿ ಅರಿತುಕೊಂಡು, ಸಂವಿಧಾನದ ಮೌಲ್ಯಗಳನ್ನು ಸಮಾಜದಲ್ಲಿ ಪ್ರಚಾರ ಮಾಡುವ ಜವಾಬ್ದಾರಿ ಹೊತ್ತುಕೊಳ್ಳಬೇಕು. ಸಮಾನತೆ, ನ್ಯಾಯ ಮತ್ತು ಸಹಬಾಳ್ವೆಯ ಆಶಯಗಳನ್ನು ಅಳವಡಿಸಿಕೊಂಡಾಗ ಮಾತ್ರ ದೇಶದಲ್ಲಿ ಸಾಮರಸ್ಯ, ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.






















