
ಕಲಬುರಗಿ:ಜೂ: 23: ಪ್ರತಿವರ್ಷದಂತೆ ಈ ವರ್ಷವೂ ಕೂಡ ವಿಜೃಂಭಣೆಯಿಂದ ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಜಯಂತಿಯನ್ನು ಆಚರಿಸಲು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸೋಮವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜು. 2 ರಂದು ರಂದು ಕನ್ನಡ ಭವನದಲ್ಲಿ ಮುಂಜಾನೆ 11 ಗಂಟೆಗೆ ನಡೆಯುವ ಕಾರ್ಯಕ್ರಮಕ್ಕೆ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು
ಎಲ್ಲ ಸರಕಾರಿ ಅರೆಸರಕಾರಿ ಕಚೇರಿಗಳಲ್ಲಿ ಬೆಳಿಗ್ಗೆ 9 ಗಂಟೆಗೆ ಆಚರಿಸಬೇಕು ಮತ್ತು ಸರಕಾರಿ ಶಾಲಾ ಕಾಲೇಜುಗಳಲ್ಲಿ ಹಾಗೂ ಅನುದಾನ ಶಾಲಾ ಕಾಲೇಜುಗಳಲ್ಲಿ ತಾಲ್ಲೂಕ ಮತ್ತು ಜಿಲ್ಲಾಪಂಚಾಯತಗಳಲ್ಲಿ ಕಡ್ಡಾಯವಾಗಿ ಜಯಂತಿಯನ್ನು ಆಚರಿಸಲು ತಿಳಿಸಿದರು.
ಭಾವಚಿತ್ರಕ್ಕೆ ಮಾಲಾರ್ಪಣೆ ಹೂದಾನಿಗಳಿಂದ ಅಲಂಕರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕುಡಿಯುವ ನೀರು ಹಾಗೂ ಸ್ವಚ್ಛತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಮಾತನಾಡಿ,ನಾಡಗೀತೆ ಸಂಗೀತ ಕಾರ್ಯಕ್ರಮ ಹಾಗೂ ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಲಾಗುವುದು ಎಂದರು.
ಈ ಕುರಿತು ಕಾರ್ಯಕ್ರಮದಲ್ಲಿ ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಅಂಗವಾಗಿ ನುರಿತ ಉಪನ್ಯಾಸಕರನ್ನು ನೇಮಿಸಲಾಗುವುದು ಎಂದು ಹೇಳಿದರು ಹಾಗೂ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲಾಗುವುದು ಎಂದು ಹೇಳಿದರು.
ಈ ಒಂದು ಕಾರ್ಯಕ್ರಮದಲ್ಲಿ ಜಯಂತಿ ಅಧ್ಯಕ್ಷ ರಾಮಲಿಂಗಪ್ಪ ಚನ್ನವೀರಪ್ಪ ಘಾಳೆ, ಸಮಾಜ ಅಧ್ಯಕ್ಷರು ಚನ್ನಮಲ್ಲಪ್ಪ ನಿಂಬೇಣಿ, ಗೌರವ ಅಧ್ಯಕ್ಷ ಶಿವಪುತ್ರಪ್ಪ ಬಾವಿ, ಸಮಾಜದ ಮುಖಂಡರಾದ ವಿನೋದ ಕುಮಾರ,ರವಿಂದ್ರ ಶಾಬಾದಿ, ಸೂರ್ಯಕಾಂತ ಸೋನ್ನದ್, ಶಿವಲಿಂಗಪ್ಪ ಅಷ್ಟಗಿ, ಬಸವರಾಜ ಚೆನ್ನೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.