
ಬೆಂಗಳೂರು ಮಾ. ೧ – ಮಧ್ಯ ಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನ ಸುರಕ್ಷಿತವಾಗಿ ಕರೆದಿರುವ ಪ್ರಯತ್ನಗಳು ನಡೆದಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ದಾಳಿ ನಡೆಸಿದರಿಂದ ನಡೆಸಿರುವುದರಿಂದ ಸಂಘರ್ಷದ ವಾತಾವರಣ ನಿರ್ಮಾಣವಾಗಿದೆ ಈ ಹಿನ್ನೆಲೆಯಲ್ಲಿ ಇರಾನ್ ದುಬೈ ಸೇರಿದಂತೆ ಮಧ್ಯಪ್ರಾಜ್ಯ ದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆದಿರುವ ಪ್ರಯತ್ನಗಳನ್ನ ನಡೆಸಿದ್ದೇವೆ ಎಂದು ಹೇಳಿದರು.
ಚಿಕ್ಕಬಳ್ಳಾಪುರ ಮೂಲದ ವಿದ್ಯಾರ್ಥಿಗಳು ಸೇರಿದಂತೆ ಸೇರಿ ೧೫೦ ಹೆಚ್ಚು ಕನ್ನಡಿಗರು ಸಿಲುಕಿದ್ದಾರೆ. ಅವರೆಲ್ಲರನ್ನು ಸಂಪರ್ಕಿಸಿ ಸುರಕ್ಷಿತವಾಗಿ ಕರೆತರುವ ಪ್ರಯತ್ನ ಮುಂದುವರೆದಿದೆ ಎಂದರು.
ಅಗತ್ಯ ಸೌಲಭ್ಯಗಳ ಕುರಿತಂತೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿದ್ದಾರೆ. ಯಾವುದೇ ಸಮಸ್ಯೆ ಆಗದಂತೆ ಸುರಕ್ಷಿತವಾಗಿ ಕರೆತರಲು ಬೇಕಾದ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಹೇಳಿದರು..






























