ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಡಾ.ಗುರಮ್ಮ ಸಿದ್ದಾರಡ್ಡಿ ಸಂತಾಪ

ಬೀದರ್:ಡಿ.15:ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರು ಮತ್ತು ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಡಾ.ಎಸ್.ಎಸ್ ಸಿದ್ದಾರಡ್ಡಿ ಫೌಂಡೇಷನ್ ಗೌರವಾಧ್ಯಕ್ಷರು ಹಾಗೂ ಸಭಾದ ರಾಷ್ಟ್ರೀಯ ಹಿರಿಯ ಉಪಾಧ್ಯಕ್ಷೆ ಡಾ.ಗುರಮ್ಮ ಸಿದ್ದಾರಡ್ಡಿ ಸಂತಾಪ ಸೂಚಿಸಿದ್ದಾರೆ.
ವೀರಶೈವ ಲಿಂಗಾಯತ ಸಮಾಜದ ಗಣ್ಯರಾಗಿ, ನಾಯಕರಾಗಿ ನಮಗೆಲ್ಲರಿಗೂ ಮಾರ್ಗದರ್ಶನ ನೀಡುತ್ತಿದ್ದ ನೇರ ನುಡಿಯ ಶಾಮನೂರು ಶಿವಶಂಕರಪ್ಪ ಅವರು ಈ ಹಿಂದೆ ವಸತಿ ಸಚಿವರಾಗಿ ಮತ್ತು ಕೊಡುಗೈ ದಾನಿಯಾಗಿ ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಕರ್ನಾಟಕದ ಮ್ಯಾಂಚೆಸ್ಟರ್ ಎಂದೇ ಖ್ಯಾತವಾದ ದಾವಣಗೆರೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ, ಸಾವಿರಾರು ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಉನ್ನತ ಶಿಕ್ಷಣಕ್ಕೆ ನೆರವಾಗಿದ್ದ ಶಾಮನೂರು ಅವರು ವೀರಶೈವ ಲಿಂಗಾಯತ ಸಮಾಜದ ಏಳಿಗೆಗಾಗಿ ಮತ್ತು ಸಂಘಟನೆಯನ್ನು ಬಲಪಡಿಸಲು ಶ್ರಮಿಸಿದ್ದರು, ಅವರ ನಿಧನದಿಂದ ಒಬ್ಬ ಶ್ರೇಷ್ಠ ಮುತ್ಸದ್ದಿಯನ್ನು ಹಾಗೂ ಮಾರ್ಗದರ್ಶಕರನ್ನು ನಾವು ಕಳೆದುಕೊಂಡಿದ್ದೇವೆ ಎಂದು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಅತ್ಯಂತ ಹಿರಿಯ ರಾಜಕಾರಣಿಯಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ, ಈ ನೋವಿನ ಸಂದರ್ಭದಲ್ಲಿ ಅವರ ಅಗಲಿಕೆಯ ಅವರ ಕುಟುಬಕ್ಕಾದ ನೋವನ್ನು ಸಹಿಸುವ ಶಕ್ತಿ ಭಗವಂತ ದಯಪಾಲಿಸಲೊಲಿ ಎಂದು ಪ್ರಾರ್ಥಿಸುವುದಾಗಿ ಡಾ.ಗುರಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.