ರಾಜ್ಯೋತ್ಸವ ಪ್ರಶಸ್ತಿಗೆ ಡಾ.ಈಚನಾಳ ಆಯ್ಕೆ

ಜೇವರ್ಗಿ : ಕಳೆದ ಎರಡುವರೆ ದಶಕಗಳಿಂದಲೂ ಶಿಕ್ಷಣ ಕ್ಷೇತ್ರದಲ್ಲಿ ಅಧ್ಯಾಪನದಲ್ಲಿ ತೊಡಗಿಸಿಕೊಂಡಿರುವ ಬಂಡಾಯ ಸಾಹಿತಿ, ಸಂಶೋಧಕ, ರಂಗಭೂಮಿಯ ನಟ, ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಜೇವರ್ಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ, ಗುಲ್ಬರ್ಗಾ ವಿಶ್ವ ವಿದ್ಯಾಲಯದ ಪದವಿ ಕಾಲೇಜುಗಳ ಕನ್ನಡ ಅಧ್ಯಾಪಕರ ಸಂಘದ ಅಧ್ಯಕ್ಷ ಡಾ. ಖಾಜಾವಲಿ ಈಚನಾಳ ಅವರನ್ನು ಬೆಂಗಳೂರಿನ ಕುಂಭಮೇಳ ಸಾಂಸ್ಕೃತಿಕ ಅಕಾಡೆಮಿಯಿಂದ ಕೊಡಮಾಡುವ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ರಾಜ್ಯೋತ್ಸವದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿಯ ಸಂಘಟಕರು ತಿಳಿಸಿದ್ದಾರೆ.
ನವೆಂಬರ್ ೧೯ ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ರಂಗಮAದಿರದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಗೌರವಿಸಲಾಗುವದು. ವಿವಿಧ ರಂಗದ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆಂದು ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಶಿವರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.