
ಯಾದಗಿರಿ: ಮಾ.೧೭:ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಪುನೀತ್ ರಾಜ್‌ಕುಮಾರ್ ಅವರ ಹುಟ್ಟುಹಬ್ಬವನ್ನು ಅಭಿಮಾನಿ ಬಳಗದ ವತಿಯಿಂದ ಅತ್ಯಂತ ವಿಜೃಂಭಣೆಯಿAದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಅಭಿಮಾನಿಗಳು ಕೇಕ್ ಕತ್ತರಿಸಿ ಸಂಭ್ರಮ ವ್ಯಕ್ತಪಡಿಸುವುದರ ಜೊತೆಗೆ, ನಮ್ಮ ನೆಚ್ಚಿನ ನಟನ ಸ್ಮರಣಾರ್ಥವಾಗಿ ವಿವಿಧ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಂಡು ವಿಶೇಷತೆ ಮೂಡಿಸಿದರು. ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಯುವಕರಲ್ಲಿ ಅಪಾರ ಉತ್ಸಾಹ ಕಂಡುಬAದಿತು.
ಕಾರ್ಯಕ್ರಮದಲ್ಲಿ ಸಿದ್ದಪ್ಪ ಸಿಂಗೇ, ಭೀಮರೆಡ್ಡಿ ಕಟ್ಟಿಮನಿ, ಪರಶುರಾಮ್ ಕಟ್ಟಿಮನಿ, ಆಂಜನೇಯ ಕೌದಿ, ಭೀಮು ಸಾವೂರ, ಪ್ರೇಮ್ ಗುನ್ಟ್ನೂರ, ದೇವು ಗುತ್ತೇದಾರ್, ಸಿದ್ದು ಗುತ್ತೇದಾರ್, ಶಿವು ಗುತ್ತೇದಾರ್ ಸೇರಿದಂತೆ ಹಲವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಪುನೀತ್ ರಾಜ್‌ಕುಮಾರ್ ಅವರ ವ್ಯಕ್ತಿತ್ವ, ಸರಳತೆ ಹಾಗೂ ಸಮಾಜಮುಖಿ ಚಿಂತನೆಗಳು ಯುವಜನತೆಗೆ ಸ್ಫೂರ್ತಿಯಾಗಿವೆ ಎಂದು ಅಭಿಮಾನಿಗಳು ಅಭಿಪ್ರಾಯಪಟ್ಟರು.

























