Home ಜಿಲ್ಲೆ ಬೆಂಗಳೂರು ಮಹಾರಾಣಿ ಕ್ಲಸ್ಟರ್ ವಿವಿ ಸಿಂಡಿಕೇಟ್ ಸದಸ್ಯರಾಗಿ ಡಾ. ರಮ್ಯಾ ನೇಮಕ

ಮಹಾರಾಣಿ ಕ್ಲಸ್ಟರ್ ವಿವಿ ಸಿಂಡಿಕೇಟ್ ಸದಸ್ಯರಾಗಿ ಡಾ. ರಮ್ಯಾ ನೇಮಕ

ಬೆಂಗಳೂರು, ಮೇ. ೧೮– ಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಹೆಚ್‌ಎಂಆರ್ ಸಮೂಹ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆಗಿರುವ ಡಾ. ಎ.ರಮ್ಯಾ ರಮೇಶ್ ಅವರನ್ನು ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ರಾಜ್ಯಪಾಲರು ನೇಮಕ ಮಾಡಿದ್ದಾರೆ.

ಈ ಬಗ್ಗೆ ರಾಜ್ಯದ ರಾಜ್ಯಪಾಲರ ಸಚಿವಾಲಯವು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಈ ನೇಮಕಾತಿಯು ಜುಲೈ ೭ರಿಂದ ಜಾರಿಗೆ ಬರಲಿದ್ದು, ಮೂರು ವರ್ಷಗಳ ಅವಧಿ ಹೊಂದಿರುತ್ತದೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿಗಳು ಆಗಿರುವ ರಾಜ್ಯಪಾಲರ ಆದೇಶದಲ್ಲಿ ತಿಳಿಸಲಾಗಿದೆ.

ಡಾ. ರಮ್ಯಾ ರಮೇಶ್ ಅವರು ಶಿಕ್ಷಣ ಸಂಸ್ಥೆಗಳ ನೇತೃತ್ವದ ಜೊತೆಗೆ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಆರೋಗ್ಯ, ನೈರ್ಮಲ್ಯ ಮುಂತಾದ ವಿಭಾಗಗಳಲ್ಲಿ ಅವರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಮಹಿಳಾ ಸಬಲೀಕರಣ, ಬಡ ಮಕ್ಕಳ ಶಿಕ್ಷಣಕ್ಕೆ ಒತ್ತು ಕೊಡುವ ನಿಟ್ಟಿನಲ್ಲಿ ಡಾ.ರಮ್ಯಾ ಅವರು ಹೆಚ್ಚು ಪ್ರಾಮುಖ್ಯತೆ ನೀಡಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೆ ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ಅವುಗಳ ಅಭಿವೃದ್ಧಿಗಾಗಿ ದುಡಿಮೆ ಮಾಡುತ್ತಿದ್ದಾರೆ.

ಈಗಾಗಲೇ ಹೆಣ್ಣೂರು ಭಾಗ ಸೇರಿದಂತೆ ಹಲವಾರು ಕಡೆ ಸರ್ಕಾರಿ ಶಾಲೆಗಳಿಗೆ ನಿವೇಶನ ಸೇರಿ ಹಲವಾರು ಮೂಲಭೂತ ಸೌಕರ್ಯಗಳನ್ನು ಹೆಚ್‌ಎಂಆರ್ ಸಮೂಹದಿಂದ ಒದಗಿಸಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.