ಕಲಬುರಗಿ,ಸೆ.4-ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸೆ.5 ರಂದು ಬೆಳಿಗ್ಗೆ 10 ಗಂಟೆಗೆ ಡಾ.ಸರ್ವಪಲ್ಲಿ ರಾಧಾಕೃಷ್ಣನ್‍ರವರ ಜನ್ಮದಿನವನ್ನು ಆಚರಣೆ ಮಾಡಲಾಗುವದು ಎಂದು ಪಕ್ಷದ ಜಿಲ್ಲಾ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ತಿಳಿಸಿದ್ದಾರೆ.
ಪಕ್ಷದ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ/ಮಂಡಳಿ ಅಧ್ಯಕ್ಷರು, ಮುಖಂಡರು, ಕೆಪಿಸಿಸಿ, ಡಿಸಿಸಿ ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು, ಡಿಸಿಸಿ ಡೇಲಿಗೇಟ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ವಿವಿಧ ಮೂಂಚೂಣಿ ಘಟಕ, ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್, ತಾಲೂಕಾ ಪಂಚಾಂiÀiತ್, ಗ್ರಾಮ ಪಂಚಾಯತ್, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್, ಎಪಿಎಂಸಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮಹಾ ನಗರ ಪಾಲಿಕೆಯ ಹಾಲಿ ಹಾಗೂ ಮಾಜಿ ಪೂಜ್ಯ ಮಹಾಪೌರರು, ಉಪ ಮಹಾಪೌರರು ಹಾಗೂ ಸದಸ್ಯರುಗಳು, ಮಹಿಳೆಯರು, ಯುವಕರು ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
























