ಸಿಂಡಿಕೇಟ್ ಸದಸ್ಯರಾಗಿ ಡಾ.ಶಿವಕುಮಾರ್ ಸಿಆರ್ ನೇಮಕ

ಕಲಬುರಗಿ ನ 11. ನಗರದ ಕಲಬುರಗಿಯ ಜಿಮ್ಸ್ ಸಂಸ್ಥೆ ಆಸ್ಪತ್ರೆಯ ಸರ್ಜರಿ ವಿಭಾಗದ ಮುಖ್ಯಸ್ಥ ಹಾಗೂ ವೈದ್ಯಕೀಯ ಅಧೀಕ್ಷಕ ಡಾ .ಶಿವಕುಮಾರ್ ಸಿ ಆರ್. ಅವರನ್ನು ಕರ್ನಾಟಕದ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಇದು ಕಲಬುರಗಿ ಜಿಮ್ಸ್ ಪರಿವಾರಕ್ಕೆ ಹೆಮ್ಮೆಯ ಸಂಗತಿಯಾಗಿದೆ ಎಂದು ಜಿಮ್ಸ್ ಸಂಸ್ಥೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹರ್ಷವ್ಯಕ್ತಪಡಿಸಿದ್ದಾರೆ.