
ಯಾದಗಿರಿ: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರಡು ಮತದಾರರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ತಹಶೀಲ್ದಾರ್ ಕಚೇರಿಗಳು ಹಾಗೂ ೧,೧೬೨ ಮತಗಟ್ಟೆಗಳಲ್ಲಿ ಕರಡು ಮತದಾರರ ಪಟ್ಟಿಯನ್ನು ಸಾರ್ವಜನಿಕರ ವೀಕ್ಷಣೆಗೆ ಪ್ರಕಟಿಸಲಾಗಿದೆ. ಮತದಾರರು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಪಟ್ಟಿಯನ್ನು ಪರಿಶೀಲಿಸಿ, ಹೆಸರು ಸೇರ್ಪಡೆ, ತಿದ್ದುಪಡಿ, ಹೆಸರು ಕೈಬಿಡುವಿಕೆ ಸೇರಿದಂತೆ ಯಾವುದೇ ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ನಿಗದಿತ ಅವಧಿಯಲ್ಲಿ ಸಲ್ಲಿಸಬೇಕು ಎಂದು ತಿಳಿಸಿದರು.
ಅ.೨೨ರವರೆಗೆ ಆಕ್ಷೇಪಣೆ: ಕರಡು ಪಟ್ಟಿಗೆ ಸಂಬAಧಿಸಿದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ತಮ್ಮ ಹೆಸರು ಹಾಗೂ ಕುಟುಂಬದ ಸದಸ್ಯರ ಹೆಸರು ಮತದಾರರ ಪಟ್ಟಿಯಲ್ಲಿ ಸರಿಯಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.
ಹೊಸ ಮತದಾರರ ನೋಂದಣಿ: ಕರಡು ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹ ಮತದಾರರು ಹಾಗೂ ೨೦೨೬ರ ಅ.೧ಕ್ಕೆ ೧೮ ವರ್ಷ ಪೂರ್ಣಗೊಳ್ಳುವ ಯುವಕ-ಯುವತಿಯರು ನಮೂನೆ-೬ ಮೂಲಕ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಬಿಎಲ್‌ಒ ಮೂಲಕ ಅಥವಾ ವೋಟರ್ ಸರ್ವಿಸ್ ಪೋರ್ಟಲ್ ಮೂಲಕ ಸಲ್ಲಿಸಲು ಅವಕಾಶವಿದೆ. ಮತದಾರರ ವಿಳಾಸ ಬದಲಾವಣೆ ಸೇರಿದಂತೆ ಅಗತ್ಯ ತಿದ್ದುಪಡಿಗಳಿಗೆ ನಮೂನೆ-೮ ಸಲ್ಲಿಸಬೇಕು ಎಂದರು.
ಜಿಲ್ಲೆಯಲ್ಲಿ ೧೦,೫೩,೨೩೬ ಮತದಾರರು: ವಿಶೇಷ ಪರಿಷ್ಕರಣೆಯ ಬಳಿಕ ಪ್ರಕಟಿಸಿರುವ ಕರಡು ಪಟ್ಟಿಯಲ್ಲಿ ಜಿಲ್ಲೆಯಲ್ಲಿ ಒಟ್ಟು ೧೦,೫೩,೨೩೬ ಮತದಾರರು ಇದ್ದಾರೆ. ಈ ಪೈಕಿ ಸುಮಾರು ೮.೬೪ ಲಕ್ಷ ಮತದಾರರ ದಾಖಲೆಗಳ ಡಿಜಿಟೈಸೇಶನ್ ಪೂರ್ಣಗೊಂಡಿದೆ. ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ೧೨,೨೬೪ ನೋ-ಮ್ಯಾಪಿಂಗ್ ಹಾಗೂ ೪೨,೭೯೮ ಅನಾಮಲಿ ಮತದಾರರು ಗುರುತಿಸಲ್ಪಟ್ಟಿದ್ದು, ಸುಮಾರು ೫೫ ಸಾವಿರಕ್ಕೂ ಅಧಿಕ ಮತದಾರರಿಗೆ ನೋಟಿಸ್ ನೀಡಿ ಅಗತ್ಯ ದಾಖಲೆಗಳನ್ನು ಪಡೆದು ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಪರಿಶೀಲನೆ ಹಾಗೂ ತೀರ್ಮಾನದ ನಂತರವೂ ಅಹವಾಲು ಸಲ್ಲಿಸಲು ಮೇಲ್ಮನವಿ ಅವಕಾಶವಿದ್ದು, ಪ್ರಥಮ ಮೇಲ್ಮನವಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಹಾಗೂ ದ್ವಿತೀಯ ಮೇಲ್ಮನವಿಯನ್ನು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳಿಗೆ ಸಲ್ಲಿಸಬಹುದು ಎಂದು ತಿಳಿಸಿದರು.
೧,೧೬೨ ಮತಗಟ್ಟೆಗಳು: ಮನೆ-ಮನೆ ಸಮೀಕ್ಷೆಯ ಬಳಿಕ ಜಿಲ್ಲೆಯಲ್ಲಿ ೨೮ ಹೊಸ ಮತಗಟ್ಟೆಗಳನ್ನು ರಚಿಸಲಾಗಿದ್ದು, ಒಟ್ಟು ಮತಗಟ್ಟೆಗಳ ಸಂಖ್ಯೆ ೧,೧೬೨ಕ್ಕೆ ಏರಿಕೆಯಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಒಗಳು ನಿರಂತರವಾಗಿ ಶ್ರಮಿಸಿದ್ದಾರೆ. ಸಾರ್ವಜನಿಕರಿಂದ ಬಂದ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಲಾಗುತ್ತಿದೆ ಎಂದರು.
ಎಸ್‌ಐಆರ್‌ಗೆ ಸಂಬAಧಿಸಿದAತೆ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಮನೆ-ಮನೆ ಸಮೀಕ್ಷೆ ಹಾಗೂ ಪರಿಶೀಲನೆ ವೇಳೆ ಗೈರುಹಾಜರಿರುವವರು, ಶಾಶ್ವತವಾಗಿ ಸ್ಥಳಾಂತರಗೊAಡವರು, ಮೃತಪಟ್ಟವರು, ಈಗಾಗಲೇ ನೋಂದಾಯಿಸಿಕೊAಡಿರುವ (ಡುಪ್ಲಿಕೇಟ್) ಹಾಗೂ ಇತರೆ ವರ್ಗಗಳಿಗೆ ಸೇರಿದ ಒಟ್ಟು ೧,೮೯,೨೩೩ Uಇಈ ಮತದಾರರನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕರಡು ಮತದಾರರ ಪಟ್ಟಿಯನ್ನು ಪ್ರತಿಯೊಬ್ಬರೂ ಪರಿಶೀಲಿಸಿ, ಯಾವುದೇ ತಪ್ಪು ಅಥವಾ ಆಕ್ಷೇಪಣೆ ಕಂಡುಬAದಲ್ಲಿ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು. ಮತದಾರರ ಸೇರ್ಪಡೆ, ತಿದ್ದುಪಡಿ ಹಾಗೂ ಇತರೆ ಸಮಸ್ಯೆಗಳ ಕುರಿತು ಸಾರ್ವಜನಿಕರು ಮತ್ತು ರಾಜಕೀಯ ಪಕ್ಷಗಳ ಬಿಎಲ್‌ಎಗಳು ಸೂಕ್ತ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕೋಲಾರ್ ಹಾಗೂ ಸಹಾಯಕ ಆಯುಕ್ತ ಶ್ರೀಧರ್ ಗೋಟೂರ್ ಉಪಸ್ಥಿತರಿದ್ದರು.





























