Home ಜಿಲ್ಲೆ ಕಲಬುರಗಿ ಕುಡಿಯುವ ನೀರಿನ ಸಮಸ್ಯೆ ಪರಿಶೀಲನೆ

ಕುಡಿಯುವ ನೀರಿನ ಸಮಸ್ಯೆ ಪರಿಶೀಲನೆ

ಆಳಂದ:ಜು.೧: ತಾಲೂಕಿನ ಖಜೂರಿ ಗ್ರಾಮದ ಇಂದಿರಾ ಗಾಂಧಿ ವಸತಿ ಶಾಲೆಗೆ ರಾಜ್ಯದ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ, ಶಾಸಕ ಬಿ.ಆರ್.ಪಾಟೀಲ್ ಅವರು ಭೇಟಿ ನೀಡಿ, ಶಾಲೆಯಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಸ್ಥಳದಲ್ಲೇ ಪರಿಶೀಲಿಸಿದರು.
ಶಾಲಾ ಮುಖ್ಯೋಪಾಧ್ಯಾಯರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದ ಶಾಸಕರು, ಸಮಸ್ಯೆಯ ಸಂಪೂರ್ಣ ಮಾಹಿತಿ ಪಡೆದುಕೊಂಡರು. ನೀರಿನ ಸರಬರಾಜಿನಲ್ಲಿ ಉಂಟಾಗಿದ್ದ ತೊಂದರೆಗಳನ್ನು ಸಂಬAಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ಶೀಘ್ರದಲ್ಲೇ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
ಈ ನಡುವೆ, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದAತೆ ತಾತ್ಕಾಲಿಕವಾಗಿ ಪರ್ಯಾಯ ನೀರಿನ ವ್ಯವಸ್ಥೆ ಕಲ್ಪಿಸುವಂತೆಯೂ ಕ್ರಮ ಕೈಗೊಳ್ಳಲು ಶಾಸಕರು ಸೂಚನೆ ನೀಡಿದರು. ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯಗಳು ಸಮರ್ಪಕವಾಗಿ ದೊರೆಯುವಂತೆ ಸಂಬAಧಿಸಿದ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ, ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವ ಭರವಸೆಯನ್ನು ಶಾಸಕ ಪಾಟೀಲ್ ನೀಡಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಡಿಸಿಸಿ ಬ್ಯಾಂಕ್ ನಿರ್ದೇಶಕ ಅಶೋಕ ಸಾವಳೇಶ್ವರ ಖಜೂರಿ ಇಂಧಿರಾ ವಸತಿ ಶಾಲೆ ಸೇರಿದಂತೆ ಇತರ ಸರ್ಕಾರಿ ಶಾಲೆ ಮತ್ತು ಪಿಯು ಕಾಲೇಜಿನಲ್ಲಿನ ಸಮಸ್ಯೆ, ಸಿಬ್ಬಂದಿಗಳ ಕೊರತೆ ಸೇರಿ ಮೂಲಸೌಲಭ್ಯಗಳ ಪೂರೈಕೆಗೆ ಶಾಸಕರ ಗಮನಕ್ಕೆ ತಂದರು.
ಈ ವೇಳೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಶಿವುಪುತ್ರಪ್ಪಾ ಪಾಟೀಲ, ಭೀಮರಾವ್ ಢಗೆ, ಪಿಕೆಪಿಎಸ್ ಅಧ್ಯಕ್ಷ ಶರಣಪ್ಪ ಢಗೆ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.