Home ಕ್ರೈಂ ಸುದ್ದಿಗಳು ಚಾಲಕನ ನಿಯಂತ್ರಣ ತಪ್ಪಿ ಟಾಟಾ ಐಚರ್ ವಾಹನ ಮರಕ್ಕೆ ಡಿಕ್ಕಿ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಟಾಟಾ ಐಚರ್ ವಾಹನ ಮರಕ್ಕೆ ಡಿಕ್ಕಿ – ತಪ್ಪಿದ ಭಾರಿ ಅನಾಹುತ

ಜಮಖಂಡಿ: ಏ.15: ತಾಲೂಕಿನ ಮದರಖಂಡಿ ಕ್ರಾಸ್ ಹತ್ತಿರ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಟಾಟಾ ಐಚರ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಭಾಗ್ಯವಶಾತ್ ಭಾರಿ ಅನಾಹುತ ತಪ್ಪಿದೆ.
ಜಮಖಂಡಿ ತಾಲೂಕಿನ ತುಂಗಳ ಗ್ರಾಮದ ಸಿದ್ದು ನ್ಯಾಮಗೌಡ ಎಂಬುವರ ಟಾಟಾ ಐಚರ್ ವಾಹನ ಎಂದು ಗುರುತಿಸಲಾಗಿದೆ. ರಬಕವಿ-ಬನಹಟ್ಟಿ ತಾಲೂಕಿನ ಹಳೆಯಳಗುದ್ರಿ ಗ್ರಾಮದಿಂದ ತುಂಗಳ ಗ್ರಾಮಕ್ಕೆ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ.
ಘಟನೆಯ ವೇಳೆ ವಾಹನದಲ್ಲಿ ಚಾಲಕ ಸೇರಿ ಮೂವರು ಪ್ರಯಾಣಿಸುತ್ತಿದ್ದು, ಒಬ್ಬನ ಕಾಲು ಮುರಿದಿದ್ದು, ಇತರ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಈ ಘಟನೆ ಜಮಖಂಡಿ ಗ್ರಾಮೀಣ ಪೆÇೀಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.