Home ಮುಖಪುಟ ಸುದ್ದಿ ಬೆಂಗಳೂರಲ್ಲಿ ಎಬೋಲಾ ಭೀತಿ: ಉಗಾಂಡ ಮಹಿಳೆ ಆಸ್ಪತ್ರೆಗೆ ದಾಖಲು

ಬೆಂಗಳೂರಲ್ಲಿ ಎಬೋಲಾ ಭೀತಿ: ಉಗಾಂಡ ಮಹಿಳೆ ಆಸ್ಪತ್ರೆಗೆ ದಾಖಲು

ಬೆಂಗಳೂರು.ಮೇ೨೭: ವಿಶ್ವದಾದ್ಯಂತ ಎಬೋಲಾ ವೈರಸ್ ಭೀತಿ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಉಗಾಂಡಾದಿಂದ ಸಿಲಿಕಾನ್ ಸಿಟಿಗೆ ಬಂದಿಳಿದ ೨೮ ವರ್ಷದ ಮಹಿಳೆಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಇಂದಿರಾನಗರದ ಸಾಂಕ್ರಾಮಿಕ ರೋಗಗಳ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಿ ತೀವ್ರ ನಿಗಾದಲ್ಲಿ ಇಡಲಾಗಿದೆ.

ಮೇ ೨೩ ರಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಈ ಮಹಿಳೆಯಲ್ಲಿ ತೀವ್ರ ಆಯಾಸದ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಆರೋಗ್ಯ ಸಂಸ್ಥೆಯ ಅಧಿಕಾರಿಗಳು ಆಕೆಯ ರಕ್ತದ ಮಾದರಿಗಳನ್ನು ಸಂಗ್ರಹಿಸಿದ್ದಾರೆ.ಹೋಟೆಲ್‌ನಿಂದ ಆಸ್ಪತ್ರೆಗೆ ಸ್ಥಳಾಂತರಆರಂಭದಲ್ಲಿ ಈ ಮಹಿಳೆ ನಗರದ ಹೋಟೆಲ್ ಒಂದರಲ್ಲಿ ತಂಗಿದ್ದರು. ಆದರೆ, ತದನಂತರ ಆಕೆಯಲ್ಲಿ ತೀವ್ರ ಮೈಕೈ ನೋವು ಸೇರಿದಂತೆ ಎಬೋಲಾದ ಕೆಲವು ಸೌಮ್ಯ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ತಕ್ಷಣವೇ ಅವರನ್ನು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಪ್ರಸ್ತುತ ಮಹಿಳೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ವೈದ್ಯರ ತಂಡ ನಿರಂತರ ನಿಗಾ ವಹಿಸಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

ಪುಣೆಯ ಎನ್‌ಐವಿ ವರದಿ ನಿರೀಕ್ಷೆಮಹಿಳೆಯ ರಕ್ತದ ಮಾದರಿಗಳನ್ನು ಹೆಚ್ಚಿನ ತಪಾಸಣೆಗಾಗಿ ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಕಳುಹಿಸಿಕೊಡಲಾಗಿದೆ. ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತ್ವಿಕ್ ರಂಜನಂ ಪಾಂಡೆ ಅವರು ಮಾತನಾಡಿ, “ಮಹಿಳೆಯಲ್ಲಿ ತೀವ್ರ ಜ್ವರದಂತಹ ಪ್ರಮುಖ ಲಕ್ಷಣಗಳು ಕಾಣಿಸಿಕೊಂಡಿಲ್ಲ.


ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ನಿಯಮಾವಳಿಗಳ ಪ್ರಕಾರ ಮೊದಲ ವರದಿ ಬಂದ ನಂತರ ಮತ್ತೊಮ್ಮೆ ಮರು ಪರೀಕ್ಷೆ ನಡೆಸಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.ಜಾಗತಿಕ ತುರ್ತು ಪರಿಸ್ಥಿತಿ ಘೋಷಣೆಆಫ್ರಿಕಾದ ಕಾಂಗೋ ಮತ್ತು ಉಗಾಂಡಾ ದೇಶಗಳಲ್ಲಿ ಎಬೋಲಾ ರೋಗ ತೀವ್ರವಾಗಿ ಹರಡುತ್ತಿರುವುದರಿಂದ, ವಿಶ್ವ ಆರೋಗ್ಯ ಸಂಸ್ಥೆಯು ಮೇ ೧೭ ರಂದು ಇದನ್ನು “ಅಂತರರಾಷ್ಟ್ರೀಯ ಕಳಕಳಿಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ಘೋಷಿಸಿದೆ.


ಇದೇ ಕಾರಣಕ್ಕೆ ಭಾರತ ಸರ್ಕಾರವೂ ಸಹ ಅಗತ್ಯವಿಲ್ಲದಿದ್ದರೆ ಈ ದೇಶಗಳಿಗೆ ಪ್ರಯಾಣಿಸದಂತೆ ನಾಗರಿಕರಿಗೆ ಸಲಹೆ ನೀಡಿದೆ.ರಾಜ್ಯ ಆರೋಗ್ಯ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟಎಬೋಲಾ ಭೀತಿಯ ಹಿನ್ನೆಲೆಯಲ್ಲಿ ಕರ್ನಾಟಕ ಆರೋಗ್ಯ ಇಲಾಖೆಯು ತುರ್ತು ಪ್ರಕಟಣೆಯೊಂದನ್ನು ಹೊರಡಿಸಿದ್ದು,
ಎಬೋಲಾ ಪೀಡಿತ ದೇಶಗಳಿಂದ ಮರಳುವ ಪ್ರಯಾಣಿಕರು ಕಡ್ಡಾಯವಾಗಿ ೨೧ ದಿನಗಳ ಕಾಲ ತಮ್ಮ ಆರೋಗ್ಯದ ಮೇಲೆ ಸ್ವಯಂ ನಿಗಾ ಇರಿಸಿಕೊಳ್ಳಬೇಕು.ಲಕ್ಷಣಗಳು ಕಂಡರೆ ತಕ್ಷಣ ಮಾಹಿತಿ: ಜ್ವರ, ತಲೆನೋವು, ಮೈಕೈ ನೋವು ಅಥವಾ ಸುಸ್ತು ಕಾಣಿಸಿಕೊಂಡರೆ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ವರದಿ ಮಾಡಬೇಕು.ಸಂಪರ್ಕ ಪತ್ತೆ ಯಾವುದೇ ಶಂಕಿತ ಪ್ರಕರಣಗಳು ದೃಢಪಟ್ಟಲ್ಲಿ, ಅವರ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚಲು ತರಬೇತಿ ಪಡೆದ ’ತ್ವರಿತ ಪ್ರತಿಕ್ರಿಯೆ ತಂಡಗಳನ್ನು’ ನಿಯೋಜಿಸಲಾಗಿದೆ.ಬೆಂಗಳೂರು ಮತ್ತು ಮಂಗಳೂರಿನಲ್ಲಿ ವಿಶೇಷ ಸಿದ್ಧತೆತುರ್ತು ಪರಿಸ್ಥಿತಿಯನ್ನು ಎದುರಿಸಲು ರಾಜ್ಯದ ಪ್ರಮುಖ ನಗರಗಳಲ್ಲಿ ಪ್ರತ್ಯೇಕ ವಾರ್ಡ್‌ಗಳನ್ನು ಕಾಯ್ದಿರಿಸಲಾಗಿದೆ