
ಅಥಣಿ: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಗುರಿಯಾಗಿಸಿಕೊಂಡು ಜಾರಿ ನಿರ್ದೇಶನಾಲಯ (ಇಡಿ) ಮೂಲಕ ನಡೆಸಲಾಗುತ್ತಿರುವ ದಾಳಿ ಹಾಗೂ ತನಿಖೆ ರಾಜಕೀಯ ಪ್ರೇರಿತವಾಗಿದೆ. ಜಾರಕಿಹೊಳಿ ಕುಟುಂಬದ ವಿರುದ್ದ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ, ಅಹಿಂದ ನಾಯಕನ ರಾಜಕೀಯ ಬೆಳವಣಿಗೆ ಸಹಿಸದ ಕೇಂದ್ರ ಸರಕಾರದ ಅಧಿನದಲ್ಲಿರುವ ಇಡಿ ಇಲಾಖೆ ಮೂಲಕ ಹಣಿಯಲು ಕೇಂದ್ರ ಸರಕಾರ ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಆರೋಪಿಸಿದರು.
ಅಥಣಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಚಿವ ಸತೀಶ ಜಾರಕಿಹೊಳಿ ಅವರ ಮೇಲಿನ ಇಡಿ ದಾಳಿ ಖಂಡಿಸಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಹಾಗೂ ಇಡಿ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ತನಿಖಾ ಸಂಸ್ಥೆಗಳನ್ನು ರಾಜಕೀಯ ದ್ವೇಷ ಸಾಧನೆಗೆ ಬಳಸಿಕೊಳ್ಳಬಾರದು ಎಂದು ಆಗ್ರಹಿಸಿದರು.
ಈ ವೇಳೆ ಗಜಾನನ ಮಂಗಸೂಳಿ ಮಾತನಾಡಿ ಸತೀಶ ಜಾರಕಿಹೊಳಿ ಅವರು ಅಹಿಂದ ಸಮುದಾಯದ ಪ್ರಬಲ ನಾಯಕರಾಗಿದ್ದಾರೆ. ಅವರ ರಾಜಕೀಯ ಬೆಳವಣಿಗೆಯನ್ನು ಸಹಿಸದವರು ಕೇಂದ್ರ ಸರ್ಕಾರದ ಅಧೀನದಲ್ಲಿರುವ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಅವರನ್ನು ರಾಜಕೀಯವಾಗಿ ಹಣಿಯುವ ಪ್ರಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರ ವಿರುದ್ಧ ಮಾತ್ರ ಇಂತಹ ಕ್ರಮಗಳು ನಡೆಯುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇಡಿ ದಾಖಲಿಸಿರುವ ಪ್ರಕರಣಗಳಲ್ಲಿ ಬಹುತೇಕ ಪ್ರಕರಣಗಳು ಅಂತಿಮವಾಗಿ ಸಾಬೀತಾಗಿಲ್ಲ, ವಿರೋಧ ಪಕ್ಷಗಳ ನಾಯಕರನ್ನು ಗುರಿಯಾಗಿಸಿಕೊಂಡು ಪ್ರಕರಣಗಳನ್ನು ದಾಖಲಿಸಿ ರಾಜಕೀಯ ಒತ್ತಡ ಹೇರುವ ಪ್ರಯತ್ನ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷ ತನ್ನ ನಾಯಕರ ಬೆನ್ನಿಗೆ ದೃಢವಾಗಿ ನಿಂತಿದೆ. ರಾಜಕೀಯ ದ್ವೇಷದಿಂದ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕರನ್ನು ಹೆದರಿಸುವ ಪ್ರಯತ್ನವನ್ನು ಕಾಂಗ್ರೆಸ್ ಕಾರ್ಯಕರ್ತರು ಸಹಿಸುವುದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತನಿಖಾ ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕು. ಸಚಿವ ಸತೀಶ ಜಾರಕಿಹೊಳಿ ಅವರ ಮೇಲಿನ ಕ್ರಮವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸಿದ್ದಾರ್ಥ ಸಿಂಗೆ
ಯುವ ಕಾಂಗ್ರೆಸ್ ಅಧ್ಯಕ್ಷೆ ಆಶಾ ಪಾಟೀಲ. ರಾಹುಲ್ ಮಾಚಕನೂರ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು
ಈ ವೇಳೆ ಕಾಂಗ್ರೇಸ್ ಮುಖಂಡರಾದ ರಮೇಶ ಸಿಂದಗಿ, ಅಸ್ಲಮ್ ನಾಲಬಂದ, ಸದಾಶಿವ ಬುಟಾಳಿ, ರಿಯಾಜ ಸನದಿ, ಬಸವರಾಜ ಬುಟಾಳಿ, ರಾವಸಾಹೇಬ ಐಹೊಳೆ, ಸಲಾಂ ಕಲ್ಲಿ, ಶಿವಾನಂದ ಸೌದಾಗರ, ರೇಖಾ ಪಾಟೀಲ, ತೊಶೀಪ್ ಸಾಂಗಲಿಕರ, ಇಮ್ರಾನ್ ಪಟಾಯಿತ, ಓಂಪ್ರಕಾಶ ಪಾಟೀಲ, ಉಮೇಶ ಪಾಟೀಲ, ಉಮರ ಸೈಯದ್, ಮಹಾದೇವಿ ಹೋಳಿಕಟ್ಟಿ, ಅಪ್ಪು ಘಟಕಾಂಬಳೆ, ಅರ್ಶತ್ ಗದ್ಯಾಳ, ಚಿದಾನಂದ ಮುಕಣಿ. ರಾಜು
ಜಮಖಂಡಿಕರ. ವಿಜಯಕುಮಾರ ಬಡಚಿ. ಹಾರುಣ ಮೋಮಿನ್. ಸಿರಾಜ ಸನದಿ. ಸೇರಿದಂತೆ ಹಲವು ಕಾಂಗ್ರೇಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು
ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ: ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ ಕೇಂದ್ರ ಸರ್ಕಾರ ಮತ್ತು ಇಡಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಸಚಿವ ಸತೀಶ ಜಾರಕಿಹೊಳಿ ಅವರ ಪರವಾಗಿ ಬೆಂಬಲ ವ್ಯಕ್ತಪಡಿಸಿ, ರಾಜಕೀಯ ಷಡ್ಯಂತ್ರದ ವಿರುದ್ಧ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದರು.































