Home ಜಿಲ್ಲೆ ಕಲಬುರಗಿ ಶಿಕ್ಷಣವೇ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದ ಬಲವಾದ ಅಡಿಪಾಯ: ಶ್ರೀಕಾಂತ

ಶಿಕ್ಷಣವೇ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದ ಬಲವಾದ ಅಡಿಪಾಯ: ಶ್ರೀಕಾಂತ

ಕಲಬುರಗಿ, ಅ.6:ನಗರದ ಆರಾಧನಾ ಪಿಯು ಕಾಲೇಜು, ಕಲಬುರಗಿ ವತಿಯಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ಫ್ರೆಶರ್ಸ್ ಪಾರ್ಟಿಯನ್ನು ದಿನಾಂಕ 03-10-2026 ರಂದು ಅದ್ಧೂರಿಯಾಗಿ ಆಯೋಜಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಚೇತನಕುಮಾರ ಗಾಂಗಜಿ ಅವರು ವಹಿಸಿದ್ದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಹಾಗಾಂವ್ ಕ್ರಾಸ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು , ಸಹಾಯಕ ಪ್ರಾಧ್ಯಾಪಕ ಶ್ರೀಕಾಂತ ಅವರು ಆಗಮಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ವಿದ್ಯಾರ್ಥಿ ಜೀವನವು ಭವಿಷ್ಯದ ಯಶಸ್ಸಿಗೆ ಅಡಿಪಾಯ ಹಾಕುವ ಅತ್ಯಂತ ಮಹತ್ವದ ಹಂತವಾಗಿದೆ. ಪಿಯುಸಿ ಶಿಕ್ಷಣವು ಕೇವಲ ಪರೀಕ್ಷೆಯಲ್ಲಿ ಅಂಕ ಗಳಿಸುವುದಕ್ಕಷ್ಟೇ ಸೀಮಿತವಾಗದೆ, ವಿದ್ಯಾರ್ಥಿಗಳ ವ್ಯಕ್ತಿತ್ವ, ಜ್ಞಾನ, ಕೌಶಲ್ಯ, ಆತ್ಮವಿಶ್ವಾಸ ಹಾಗೂ ವೃತ್ತಿಜೀವನವನ್ನು ರೂಪಿಸುವ ಪ್ರಮುಖ ಘಟ್ಟವಾಗಿದೆ ಎಂದು ಹೇಳಿದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪದವಿ ಪಡೆದರೆ ಸಾಲದು; ಜ್ಞಾನ, ಕೌಶಲ್ಯ, ಶಿಸ್ತು, ಸಮಯಪಾಲನೆ, ಸಂವಹನ ಸಾಮಥ್ರ್ಯ ಮತ್ತು ನಿರಂತರ ಕಲಿಕೆಯ ಮನೋಭಾವವನ್ನು ಬೆಳೆಸಿಕೊಳ್ಳಬೇಕುಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಪ್ರಾಂಶುಪಾಲರಾದ ಚೇತನಕುಮಾರ ಗಾಂಗಜಿ ಅವರು ಮಾತನಾಡಿ ವಿದ್ಯಾರ್ಥಿಗಳು ತಮ್ಮ ಕೆರಿಯರ್‍ನ್ನು ಆರಂಭದಿಂದಲೇ ಯೋಜಿಸಿಕೊಳ್ಳಬೇಕು. ತಮ್ಮ ಆಸಕ್ತಿ ಮತ್ತು ಸಾಮಥ್ರ್ಯವನ್ನು ಗುರುತಿಸಿಕೊಂಡು, ಸ್ಪಷ್ಟವಾದ ಗುರಿಯನ್ನು ಹೊಂದಿ ಅದರತ್ತ ನಿರಂತರವಾಗಿ ಪ್ರಯತ್ನಿಸಬೇಕು. ಬಲವಾದ ಶಿಕ್ಷಣವೇ ಬಲವಾದ ಭವಿಷ್ಯದ ನಿರ್ಮಾಣ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ನಿರ್ದೇಶಕರಾದ ರಾಜಕುಮಾರ್ ಗಾಂಗಜಿ ಉಪಸ್ಥಿತರಿದ್ದರು. ಉಪನ್ಯಾಸಕರಾದ ಭೀಮರಾಯ ಪಾಟೀಲ, ಕಾಶೀನಾಥ ಪಾಟೀಲ, ಡಾ. ಅಂಬಾರಾಯ ಹಾಗರಗಿ, ಗಾಯತ್ರಿ ಬಿರಾದಾರ , ಶಂಕರ ಭಂಡಗರ , ಶಟವಾಜಿ, ರೇವಣಸಿದ್ದಪ್ಪ ಇವಣಿ , ಚನ್ನವೀರಯ್ಯ ಸ್ವಾಮಿ, ಲಕ್ಷ್ಮೀ, ಅರ್ಪಿತಾ ಪಾಟೀಲ, ಪ್ರಭಾವತಿ, ಪೂಜಾ ಠಾಕುರ್, ರೇಣುಕಾ ಜಮಾದಾರ್, ಪಾರ್ವತಿ ಜಮಾದಾರ್, ಅರ್ಚನಾ ಹಾಗರಗಿ, ರೋಹಿಣಿ ಮೇಡಂ ಸೇರಿದಂತೆ ಕಾಲೇಜಿನ ಇತರ ಬೋಧಕ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ವಿದ್ಯಾರ್ಥಿಗಳು ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು, ಮನರಂಜನಾ ಚಟುವಟಿಕೆಗಳು ಹಾಗೂ ಪ್ರತಿಭಾ ಪ್ರದರ್ಶನಗಳ ಮೂಲಕ ಕಾರ್ಯಕ್ರಮಕ್ಕೆ ಮೆರುಗು ತಂದರು.
ಕೊನೆಯಲ್ಲಿ, ವಿದ್ಯಾರ್ಥಿಗಳು ಹೊಸ ಶೈಕ್ಷಣಿಕ ಜೀವನವನ್ನು ಉತ್ಸಾಹ, ಆತ್ಮವಿಶ್ವಾಸ ಮತ್ತು ಸಕಾರಾತ್ಮಕ ಮನೋಭಾವದಿಂದ ಆರಂಭಿಸುವಂತೆ ಹಾರೈಸಲಾಯಿತು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹ ಮತ್ತು ಸ್ನೇಹಭಾವ ಮೂಡಿಸುವ ಮೂಲಕ ಯಶಸ್ವಿಯಾಗಿ ಸಂಪನ್ನವಾಯಿತು.