Home ಜಿಲ್ಲೆ ಶಿಕ್ಷಣ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ದಾರಿಯಾಗಬೇಕು : ವಿಜಯಕುಮಾರ್ ವಾರದ

ಶಿಕ್ಷಣ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ದಾರಿಯಾಗಬೇಕು : ವಿಜಯಕುಮಾರ್ ವಾರದ

ಭಾಲ್ಕಿ, ಮೇ 26 : ಶಿಕ್ಷಣವು ಕೇವಲ ಪಠ್ಯಪುಸ್ತಕಗಳಲ್ಲಿನ ಜ್ಞಾನಕ್ಕೆ ಸೀಮಿತವಾಗದೆ, ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ದಾರಿಯಾಗಬೇಕು ಎಂದು ಚನ್ನಬಸವೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ವಿಜಯಕುಮಾರ್ ವಾರದ ಹೇಳಿದರು.

ನಗರದ ಚನ್ನಬಸವೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕಾಲೇಜು ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಶಿಸ್ತು, ಸಮಯಪಾಲನೆ ಹಾಗೂ ನಿರಂತರ ಅಭ್ಯಾಸದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಅಭ್ಯಾಸ ಮಾಡಿದ ಅನೇಕ ವಿದ್ಯಾರ್ಥಿಗಳು ದೇಶ-ವಿದೇಶಗಳಲ್ಲಿ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ಉಪನ್ಯಾಸಕ ವಿಜಯಕುಮಾರ್ ಲಕ್ಕಾ ಮಾತನಾಡಿ, ಸಮಯ ಅತ್ಯಂತ ಅಮೂಲ್ಯವಾದದ್ದು. ವಿದ್ಯಾರ್ಥಿಗಳು ಪ್ರತಿದಿನದ ಪಾಠವನ್ನು ಅದೇ ದಿನ ಪುನರವಲೋಕನ ಮಾಡಿ, ಟಿಪ್ಪಣಿಗಳನ್ನು ಮಾಡಿಕೊಂಡು ಅಭ್ಯಾಸ ಮಾಡಿದರೆ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಕಾಂತಾರಾವ್ ಸಾವರೆ, ಮಲ್ಲಿಕಾರ್ಜುನ ಬಾಬಶೆಟ್ಟಿ, ಶಿವದತ್ತ ರಾಠೋಡ್, ಸುಚಿತ್ರಾ ಪಾಟೀಲ್, ಶಶಿಕಾಂತ್ ಭಾಸ್ಕರ್, ಗಣೇಶ್ ರೆಡ್ಡಿ, ಜಿತೇಂದ್ರ ಡಿಗ್ಗೆ, ಕೃಷ್ಣ ಬಿರಾದಾರ್, ಆಕಾಶ್ ಕಾಂಬಳೆ, ರಾಜೇಶ್ವರಿ ಬೆಟ್ಟದ್ ಹಾಗೂ ವರ್ಷಾ ಬಿರಾದಾರ್ ಉಪಸ್ಥಿತರಿದ್ದರು.

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ಹಾಗೂ ಚಾಕೊಲೇಟ್ ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ಕಾರ್ಯಕ್ರಮವನ್ನು ಶಿವಕುಮಾರ್ ಭಾವಿಕಟ್ಟೆ ನಿರೂಪಿಸಿದರು.