
ಜಮಖಂಡಿ : ನಗರದ ವಿಜಯಪುರ ರಸ್ತೆಯ ರೋಟರಿ ಭವನದ ಸಮೀಪ, ಉಮಿಯಾ ಟಿಂಬರ್ ಮಾರ್ಟ್ ಹಾಗೂ ಕಟಗಿ ಅಡ್ಡೆ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ 72 ವರ್ಷದ ವೃದ್ಧರೊಬ್ಬರು ಗಂಭೀರ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರನ್ನು ಗುಜರಾತ್ ರಾಜ್ಯದ 72 ವರ್ಷದ ಜಯಂತಿಲಾಲ ಪಟೇಲ್ ಎಂದು ಗುರುತಿಸಲಾಗಿದೆ. ಅವರು ಸಂಬಂಧಿಕರ ಕುಟುಂಬದಲ್ಲಿ ಸಂಭವಿಸಿದ್ದ ಸಾವಿನ ಹಿನ್ನೆಲೆಯಲ್ಲಿ ಸಾಂತ್ವನ ಹೇಳಲು ಜಮಖಂಡಿಗೆ ಬಂದಿದ್ದರು ಎನ್ನಲಾಗಿದೆ. ಸಂಜೆ ಸುಮಾರು 5 ಗಂಟೆಯ ವೇಳೆಗೆ ವಾಕಿಂಗ್ ತೆರಳಿ ಮರಳಿ ಮನೆಗೆ ಬರುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡ ವೃದ್ಧರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ವೃದ್ಧರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಮಖಂಡಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಜಮಖಂಡಿ ನಗರ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದ ಹೆಚ್ಚಿನ ಹಾಗೂ ಅಧಿಕೃತ ಮಾಹಿತಿ ಪೆÇಲೀಸ್ ಮೂಲಗಳಿಂದ ತಿಳಿದು ಬರಬೇಕಾಗಿದೆ.



















