
ದಾವಣಗೆರೆ, ಫೆ.೪: ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದ್ದು, ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿಯಲ್ಲಿ ದುಷ್ಕರ್ಮಿಗಳು ವೃದ್ದೆಯನ್ನು ಕೊಲೆಗೈದು ೭೩ ಗ್ರಾಂ.ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.
ಮನೆಯಲ್ಲಿ ಒಂಟಿಯಾಗಿದ್ದ ಕಮಲಮ್ಮ (೬೪) ಎಂಬ ವೃದ್ಧೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣಗಳನ್ನು ದೋಚಲಾಗಿದೆ. ರಾತ್ರಿ ವೃದ್ಧೆ ಮಲಗಿದ್ದ ಸಮಯದಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳು, ಅವರು ಕೂಗಾಡದಂತೆ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಬಳಿಕ ವೃದ್ಧೆಯ ಮೈಮೇಲಿದ್ದ ಚಿನ್ನದ ಸರ ಸೇರಿದಂತೆ ಒಟ್ಟು ೭೩ ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ.
ಘಟನೆ ಸ್ಥಳಕ್ಕೆ ನ್ಯಾಮತಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಸಂಬಂಧ ಪ್ರಕರಣ ದಾಖಲಾಗಿದೆ. ಜತೆಗೆ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.




























