
ಬೀದರ: ಬೀದರ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ನೂತನ ಪದಾಧಿಕಾರಿಗಳನ್ನು ಸೆ. ೧೫ರಂದು ನಡೆದ ಸಭೆಯಲ್ಲಿ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಸಂಘದ ಅಧ್ಯಕ್ಷರಾಗಿ ಶ್ರೀ ಓಂಕಾAತ ಸೂರ್ಯವಂಶಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಸುಖದೇವ ಬೀರಾದರ ಅವರನ್ನು ಆಯ್ಕೆ ಮಾಡಲಾಗಿದೆ.
ಅದೇ ರೀತಿ ಸಂಘದ ಕಾರ್ಯಾಧ್ಯಕ್ಷರಾಗಿ ಡಾ. ಮನಮಥ ಡೋಳೆ ಹಾಗೂ ರಾಜ್ಯ ಪ್ರತಿನಿಧಿಯಾಗಿ ಶ್ರೀ ಬಾಲಾಜಿ ವಾಡೆಕರ್ ಅವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಮುಖರು, ಸಂಘದ ಉದ್ದೇಶಗಳ ಈಡೇರಿಕೆ ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಮಸ್ಯೆಗಳ ಪರಿಹಾರಕ್ಕಾಗಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಅಗತ್ಯವನ್ನು ಒತ್ತಿಹೇಳಿದರು.
ಸಭೆಯಲ್ಲಿ ಪ್ರಮುಖರಾದ ಶ್ರೀ ಶಿವರಾಜ ನಾಯಕ್, ಶ್ರೀ ಜಯಕಾಂತ ಗಂಗೋಜಿ, ಡಾ. ಜೈಶೇನಪ್ರಸಾದ, ಶ್ರೀ ಬಸವರಾಜ ಹೆಗ್ಗೆ ಸೇರಿದಂತೆ ಇತರರು ಉಪಸ್ಥಿತರಿದ್ದರು.





























