
ಬೀದರ್:ಫೆ.೧೫:ಕರ್ನಾಟಕ ರಾಜ್ಯ ಸರ್ಕಾರಿ ವಿವಿಧ ಇಲಾಖೆಯ ದಿನಗೂಲಿ ಮತ್ತು ಹೊರಗುತ್ತಿಗೆ ನೌಕರರ ಸಂಘ, ಬೀದರ್ ಜಿಲ್ಲಾ ಘಟಕದ ವತಿಯಿಂದ ನೂತನ ಪದಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ.
ಇತ್ತೀಚೆಗೆ ನಗರದ ಗುರುನಾನಕ ಬಡಾವಣೆಯಲ್ಲಿ ನಡೆದ ಸಂಘದ ಸಭೆಯಲ್ಲಿ ಸರ್ವಾನುಮತದಿಂದ ಆಯುಬ ಖಾನ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಮಿಥುನ, ಕಾರ್ಯದರ್ಶಿಯಾಗಿ ವಿಜಯಕುಮಾರ ಅವರನ್ನು ನೇಮಿಸಲಾಗಿದೆ.
ಕಾರ್ಯಕಾರಿ ಸದಸ್ಯರಾಗಿ ಬಾಲಾಜಿ ಲೋತೆ, ಅಂಬದಾಸ, ಸುರೇಶ, ಅರುಣಕುಮಾರ, ಗೌತಮ, ಹಣಮಂತ, ಆನಂದ, ರಮರ ಶಾಹ, ರಾಜಕುಮಾರ ಹಾಗೂ ನರಸಪ್ಪಾ ಅವರನ್ನು ಆಯ್ಕೆ ಮಾಡಲಾಗಿದೆ.
ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ಸಂಘದ ಸದಸ್ಯರ ಹಿತಾಸಕ್ತಿಗಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದ್ದಾರೆ. ದಿನಗೂಲಿ ಮತ್ತು ಹೊರಗುತ್ತಿಗೆ ನೌಕರರ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸುವುದಾಗಿ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ನೌಕರರ ಹಕ್ಕುಗಳ ರಕ್ಷಣೆ, ವೇತನ ಸೌಲಭ್ಯ, ಸೇವಾ ಭದ್ರತೆ ಹಾಗೂ ಸರ್ಕಾರದೊಂದಿಗೆ ಸಂವಾದ ನಡೆಸುವ ಮೂಲಕ ನೌಕರರ ಕಲ್ಯಾಣಕ್ಕಾಗಿ ಸಂಘ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಸಂಘದ ಎಲ್ಲಾ ಸದಸ್ಯರು ಹಾಗೂ ಬೆಂಬಲಿಗರು ನೂತನ ಪದಾಧಿಕಾರಿಗಳಿಗೆ ಶುಭಾಶಯಗಳನ್ನು ಸಲ್ಲಿಸಿದ್ದಾರೆ.




























