ವಿದ್ಯುತ್ ಶಾರ್ಟ್ ಸಕ್ರ್ಯೂಟ್: ಆರು ಎಕರೆ ಕಬ್ಬು ನಾಶ

ವಿಜಯಪುರ, ಫೆ. 11: ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಆರು ಎಕರೆಯಲ್ಲಿದ್ದ ಕಬ್ಬು ಸುಟ್ಟು ಕರಕಲಾಗಿರುವ ಘಟನೆ ಸಿಂದಗಿ ತಾಲೂಕಿನ ಸುಂಗಠಾಣ ಗ್ರಾಮದಲ್ಲಿ ನಡೆದಿದೆ.
ಸುಂಗಠಾಣ ಗ್ರಾಮದ ಹನಮಂತಪ್ಪ ಗುರಲಿಂಗಪ್ಪ ಬಿರಾದಾರ ಉರ್ಫ್ ಕುರನಳ್ಳಿ ಅವರ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಸಂಪೂರ್ಣವಾಗಿ ಸುಟ್ಟಿದೆ.
ಮಂಗಳವಾರ ಮಧ್ಯಾಹ್ನ ಸುಮಾರು 3 ಗಂಟೆ ಸುಮಾರಿಗೆ ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ.
ಜಮೀನಿನಲ್ಲಿ ಬೆಳೆದು ನಿಂತಿರುವ ಅಂದಾಜು 7 ಲಕ್ಷ ಮೌಲ್ಯದ ಕಬ್ಬು ಸುಟ್ಟು ಕರಕಲಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.
ಸಿಂದಗಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಂಕಿ ಅವಘಡ ನಡೆದಿದೆ.