
ಕೋಲಾರ, ಮೇ,೫-ಜಿಲ್ಲೆಯ ಗ್ರಾಮೀಣ ಭಾಗದ ಜನರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಅಡಿಯಲ್ಲಿ ವ್ಯಾಪಕ ಉದ್ಯೋಗ ಅವಕಾಶಗಳನ್ನು ಕಲ್ಪಿಸಲಾಗಿದೆ. ಹಿಂದಿನ ವಷದ ಕ್ರಿಯಾ ಯೋಜನೆಯಲ್ಲಿನ ಕಾಮಗಾರಿಗಳು ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಕೈಗೊಳ್ಳಲು ಆಯುಕ್ತಾಲಯದಿಂದ ಸೂಚನೆ ನೀಡಲಾಗಿದ್ದು, ಉದ್ಯೋಗ ಆಕಾಂಕ್ಷಿಗಳು ಗ್ರಾಮ ಪಂಚಾಯತಿಗಳಿಗೆ ಕೆಲಸಕ್ಕೆ ಬೇಡಿಕೆ ಸ್ಲಲಿಸಿದರೆ ಕಡ್ಡಾಯವಾಗಿ ಉದ್ಯೋಗ ನೀಡಲು ಜಿಲ್ಲಾ ಪಂಚಾಯತಿಯಿಂದ ಸೂಚಿಸಲಾಗಿದೆ.

ಕೆಲಸಕ್ಕೆ ಬೇಡಿಕೆ ಸಲ್ಲಿಸಿ, ಉದ್ಯೋಗ ಪಡೆಯಿರಿ
ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಚಟುವಟಿಕೆ ಇಲ್ಲದೆ ಕೂಲಿಕಾರಿರಿಗೆ ಉದ್ಯೋಗ ದೊರೆಯುತ್ತಿಲ್ಲ. ಹೀಗಾಗಿ ಎಂದಿನಂತೆ ಕೂಲಿಕಾರರ ಬೇಡಿಕೆಗೆ ಅನುಗುಣವಾಗಿಮಹಾತ್ಮ ಗಾಂಧಿ ನರೇಗಾ ಯೋಜನೆಯ ಹಿಂದಿವರ್ಷದ ಕ್ರಿಯಾ ಯೋಜನೆಯಲ್ಲಿ ಅನುಮೋದನೆಯಾಗಿರುವ ಕಾಮಗಾರಿಳನ್ನು ಹಾಗೂ ಪ್ರಸಕ್ತ ಚಾಲ್ತಿಯಲ್ಲಿರುವ ಕಾಮಗಾರಿಗಳಲ್ಲಿ ಕೆಲಸ ಒದಗಿಸಲು ಗ್ರಾಮ ಪಂಚಾಯತಿಗಳಿಂದ ಕ್ರಮ ವಹಿಸಲಾಗುತ್ತಿದೆ.
ಗ್ರಾಮೀಣ ಭಾಗದ ಕೂಲಿಕಾರರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸಲು ಈ ಮಹಾತ್ಮ ಗಾಂಧಿ ನರೇಗಾ ಯೋಜನೆ ಸಹಕಾರಿಯಾಗಿದೆ. ಸಾರ್ವಜನಿಕರು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ, ನಮೂನೆ ೬ ರಲ್ಲಿ ಕೆಲಸಕ್ಕೆ ಬೇಡಿಕೆ ಸಲ್ಲಿಸಿದ ಕೂಡಲೇ ಅವರಿಗೆ ಉದ್ಯೋಗ ನೀಡಲು ಕ್ರಮ ಕೈಗೊಳ್ಳಲಾಗುವುದು. ಕೆಲಸಕ್ಕೆ ಬೇಡಿಕೆ ಸಲ್ಲಿಸಿದ ೧೫ ದಿನಗಳ ಒಳಗಾಗಿ ಉದ್ಯೋಗ ನೀಡಲಾಗುವುದು. ೧೫ ದಿನದೊಳಗೆ ಉದ್ಯೋಗ ನೀಡದಿದ್ದರೆ, ನಿರುದ್ಯೋಗ ಭತ್ಯೆ ನೀಡಬೇಕಾಗುತ್ತೆ. ಕೂಲಿಕಾರರು ತಮ್ಮ ಗ್ರಾಮದ ವ್ಯಾಪ್ತಿಯಲ್ಲಿಯೇ ಕೆಲಸ ಮಾಡುವ ಅವಕಾಶವಿದೆ.
ನರೇಗಾದಡಿಯಲ್ಲಿ ದಿನಕ್ಕೆ ೩೭೦ ರೂಪಾಯಿ ಕೂಲಿ ನಿಗದಿಪಡಿಸಿದ್ದು, ಕೆಲಸ ಮಾಡಿದ ೧೫ ದಿನದೊಳಗೆ ಕೂಲಿ ವಾವತಿಸಲಾಗುವುದು. ಸರ್ಕಾರದಿಂದ ಬಿಡುಗಡೆಯಾದ ಕೂಲಿ ಮೊತ್ತ ನೇರವಾಗಿ ಕೂಲಿಕಾರರ ಬ್ಯಾಂಕ್ ಖಾತೆಗೆ ಜಮೆ ಆಗಲಿದೆ.
೨೦೨೫-೨೬ನೇ ಕ್ರಿಯಾ ಯೋಜನೆಯ ಕಾಮಗಾರಿಗಳಿಗೆ ಅವಕಾಶ
ಜಿಲ್ಲೆಯಲ್ಲಿ ೨೦೨೫-೨೬ನೇ ಸಾಲಿನಲ್ಲಿ ಆಲ್ನೈನ್‌ನಲ್ಲಿ ೩೬ ಸಾವಿರ ಕಾಮಗಾರಿಗಳಿಗೆ ಅನುಮೊದನೆಯಾಗಿತ್ತು. ಆದರೆ ಅನೇಕ ಕಾಮಗಾರಿಗಳು ಪ್ರಾರಂಭವಾಗಿರುವುದಿಲ್ಲ, ಆದರೆ ಈಗ ಹಿಂದಿನ ವರ್ಷದ ಕ್ರಿಯಾ ಯೋಜನೆಯಲ್ಲಿನ ಕಾಮಗಾರಿಗಳನ್ನು ಪ್ರಾರಂಭಿಸಿ, ಉದ್ಯೋಗ ನೀಡಲು ಆಯುಕ್ತಾಲಯದಿಂದ ಸೂಚಿಸಲಾಗಿದೆ. ಇದರೊಂದಿಗೆ ೧೫೪ ಗ್ರಾಮ ಪಂಚಾಯತಿಗಳಲ್ಲಿ ೧೪ ಸಾವಿರಕ್ಕೂ ಅಧಿಕ ಕಾಮಗಾರಿಗಳು ಪ್ರಗತಿಯಲ್ಲಿವೆ. ಕೆರೆ ಹೂಳೆತ್ತುವುದು, ಬದು ನಿರ್ಮಾಣ, ಕೃಷಿ ಹೊಂಡ, ರಸ್ತೆ ಅಭಿವೃದ್ಧಿ, ಚರಂಡಿ. ಗೋ ಕಟ್ಟೆ. ಸಮುದಾಯ ಆಸ್ತಿಗಳ ನಿರ್ಮಾಣ ಸೇರಿದಂತೆ ವೈಯುಕ್ತಿಕ ಜಾನುವಾರು ಶೆಡ್, ವಸತಿ ಕಾಮಗಾರಿಗಳು ಚಾಲ್ತಿಯಲ್ಲಿವೆ.
ಜಿಲ್ಲೆಯಲ್ಲಿ ಶೇಕಡಾ ೫% ಕಿಂತ ಕಡಿಮೆ ವೆಚ್ಚದ ೧೩೫೦ ಕಾಮಗಾರಿಗಳು. ಶೇಕಡ ೩೦% ಕಿಂತ ಕಡಿಮೆ ವೆಚ್ಚದ ೮೫೭೪ ಕಾಮಗಾರಿಗಳು ಹಾಗೂ ಶೇಕಡ ೭೦ ಕಿಂತ ಕಡಿಮೆ ವೆಚ್ಚದ ೧೩೫೮ ಕಾಮಗಾರಿಗಳು ಪ್ರಗತಿಯಲ್ಲಿವೆ. ಎಲ್ಲಾ ಕಾಮಾರಿಗಳನ್ನು ಕಡ್ಡಾಯವಾಗಿ ಶೀಘ್ರವಾಗಿ ಮುಕ್ತಾಯಗೊಳಿಸಬೇಕಿದೆ. ಹೀಗಾಗಿ ಸದರಿ ಕಾಮಗಾರಿಗಳಲ್ಲಿ ಕೂಲಿ ಮೊತ್ತ ಬಾಕಿ ಇದ್ದು, ಎನ್.ಎಂ.ಆರ್ ಸೃಜಿಸಿ ಕೂಲಿಕಾರರಿಗೆ ಉದ್ಯೋಗ ಒದಗಿಸಲು ಅವಕಾಶವಿದೆ.
ಕಾಮಗಾರಿಗಳ ಕೂಲಿ ಮೊತ್ತ ಪಾವತಿ ಬಳಿಕ, ಸಾಮಗ್ರಿ ವೆಚ್ಚ ನಮೂದಿಸಿ, ಕಾಮಗಾರಿಗಳನ್ನು ಭತಿಕವಾಗಿ ಮುಕ್ತಾಯಗೊಳಿಸಲು ಎಲ್ಲಾ ನರೇಗಾ ತಾಂತ್ರಿಕ ಸಿಬ್ಬಂದಿಗೆ ಸೂಚಿಸಲಾಗಿದೆ. ಇದಲ್ಲದೆ ಹಿಂದಿನ ಆರ್ಥಿಕ ವರ್ಷದಲ್ಲಿ ಅನುಮೋದನೆಗೊಂಡಿರುವ ಕಾಮಗಾರಿಗಳನ್ನು ಆರಂಭಿಸಲು ಸೂಚಿಸಲಾಗಿದ್ದು, ಬೇಸಿಗೆ ಕಾಲದಲ್ಲಿ ಕೂಲಿಕಾರರಿಗೆ ಕೆಲಸ ನೀಡುವ ಮೂಲಕ ಗ್ರಾಮೀಣ ಜನರ ಜೀವನೋಪಾಯಕ್ಕೆ ಕ್ರಮ ವಹಿಸಲು ಎಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು(ಗ್ರಾ.ಉ) ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸೂಚಿಸಿದ್ದಾರೆ.
























