Home ಜಿಲ್ಲೆ ಬೆಂಗಳೂರು ಜಿಲ್ಲಾಧಿಕಾರಿಗಳ ಆದೇಶದಂತೆ ಸಾರ್ವಜನಿಕ ರಸ್ತೆ ಒತ್ತುವರಿ ತೆರವು

ಜಿಲ್ಲಾಧಿಕಾರಿಗಳ ಆದೇಶದಂತೆ ಸಾರ್ವಜನಿಕ ರಸ್ತೆ ಒತ್ತುವರಿ ತೆರವು

filter: 0; fileterIntensity: 0.0; filterMask: 0; captureOrientation: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 41;

ಬಂಗಾರಪೇಟೆ, ಅ.೨೭- ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸಾರ್ವಜನಿಕ ರಸ್ತೆಗ ಆತಿಕ್ರಮಿಸಿದ ಅಂಗಡಿ ಮಳಿಗೆಗಳು ಮತ್ತು ಇತರ ಕಟ್ಟಡಗಳ ಒತ್ತುವರಿ ತೆರವುಗೊಳಿಸಲು ನಗರಸಭೆಯಿಂದ ಕಾರ್ಯಾಚರಣೆ ನಡೆಯುತ್ತಿದೆ ಎಂದು ನಗರಸಭೆಯ ಪೌರಾಯುಕ್ತ ಜಗ್ಗ ರೆಡ್ಡಿ ತಿಳಿಸಿದ್ದಾರೆ.


ಪಟ್ಟಣದ ಕೋಲಾರ ಪ್ರಮುಖ ರಸ್ತೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರಿಗೆ ಯಾವುದೇ ತೊಂದರೆ ಇಲ್ಲದೆ ಸುಗಮವಾಗಿ ಸಂಚರಿಸಲು ಅನುಕೂಲ ಕಲ್ಪಿಸಲು ಒತ್ತುವರಿ ತೆರವು ಕಾರ್ಯ ನಡೆಯುತ್ತಿದೆ ಎಂದು ಹೇಳಿದ್ದಾರೆ.


ಪಟ್ಟಣದ ಪ್ರಮುಖ ರಸ್ತೆಗಳಲ್ಲಿನ ಕೆಲವು ಅಂಗಡಿ ಮಾಲೀಕರು ಮತ್ತು ಕಟ್ಟಡ ಮಾಲೀಕರು ಸಾರ್ವಜನಿಕ ರಸ್ತೆ ಮತ್ತು ಪಾದಚಾರಿ ಮಾರ್ಗಗಳನ್ನು ಆತಿಕ್ರಮಿಸಿದ್ದರಿಂದ ಪಾದಚಾರಿಗಳಿಗೆ ಮತ್ತು ವಾಹನ ಸವಾರರಿಗೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ವಿಶೇಷವಾಗಿ ಜನನಿಬಿಡ ಪ್ರದೇಶಗಳಲ್ಲಿ ಪಾದಚಾರಿ ಮಾರ್ಗಗಳು ಆತಿಕ್ರಮಿತವಾಗಿರುವುದರಿಂದ ಸಾರ್ವಜನಿಕರು ರಸ್ತೆಯಲ್ಲಿ ನಡೆತರಬೇಕು ಎನ್ನುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇದರಿಂದ ವಾಹನಗಳ ಸುಗಮ ಸಂಚಾರಕ್ಕೂ ತೊಂದರೆ ಆಗುತ್ತಿದೆ.


ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ನಗರಸಭಾ ವತಿಯಿಂದ ಒತ್ತುವರಿ ತೆರವು ಕಾರ್ಯ ನಡೆಯುತ್ತಿದೆ. ಕಾರ್ಯಾಚರಣೆ ಆರಂಭಿಸುವ ಮುನ್ನಾತಿಕ್ರಮನಾಧಿಕಾರಿಗಳಿಗೆ ಮಾಹಿತಿ ನೀಡಿ, ಸಾರ್ವಜನಿಕ ಸ್ಥಳಗಳನ್ನು ತೆರವುಗೊಳಿಸಲು ಸೂಚಿಸಲಾಗಿತ್ತು. ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ಮೂಲಕ ತೆರವು ಕಾರ್ಯಾಚರಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಪ್ರಸ್ತಾಪಿಸಿದರು.


ನಗರಸಭೆಯ ಸಿಬ್ಬಂದಿ ಮತ್ತು ಜೆಸಿಬಿ ಯಂತ್ರದ ಸಹಾಯದಿಂದ ಸಾರ್ವಜನಿಕ ರಸ್ತೆ ಹಾಗು ಪಾದಚಾರಿ ಮಾರ್ಗಗಳಲ್ಲಿನ ಒತ್ತುವರಿಗಳನ್ನು ತೆರವುಗೊಳಿಸುತ್ತಿದ್ದಾರೆ. ಸಾರ್ವಜನಿಕರ ಓಡಾಟಕ್ಕೆ ಮೀಸಲಿರುವ ಸ್ಥಳಗಳನ್ನು ಆಕ್ರಮಸಿದ ರಚನೆಗಳನ್ನು ತೆರವುಗೊಳಿಸಿ, ಜನರಿಗೆ ಅನುಕೂಲ ಕಲ್ಪಿಸುವುದು ಕಾರ್ಯಾಚರಣೆಯ ಉದ್ದೇಶವಾಗಿದೆ.


ಪಟ್ಟಣದ ನಗರಸಭ ವ್ಯಾಪ್ತಿಯಲ್ಲಿರುವ ಸಾರಿಗೆ ಮಾರ್ಗಗಳಲ್ಲಿ ಒತ್ತುವರಿ ಕಂಡುಬಂದಲ್ಲಿ ಹಂತ ಹಂತವಾಗಿ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕ ಹಿತದೃಷ್ಟಿಯಿಂದ ರಸ್ತೆ ಮತ್ತು ಪಾದಚಾರಿ ಮಾರ್ಗಗಳು ಮುಕ್ತವಾಗಿರುವುದು ಅಗತ್ಯ. ಈ ನಿಟ್ಟಿನಲ್ಲಿ ಕ್ರಮ ಮುಂದುವರಿಸಲಾಗುವುದು ಎಂದು ಹೇಳಿದರು.


ಅದರಂತೆ ಪಟ್ಟಣದ ಕೋಲಾರ ಮುಖ್ಯ ರಸ್ತೆಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆದಿದ್ದು, ಸಾರ್ವಜನಿಕರಿಗೆ ಸುಗಮ ಸಂಚಾರದ ವ್ಯವಸ್ಥೆ ಕಲ್ಪಿಸಲು ನಗರಸಭಾ ಮುಂದೆ ಬಂದಿದೆ. ಸಾರ್ವಜನಿಕರು ರಸ್ತೆ ಮತ್ತು ಪಾದಚಾರಿ ಮಾರ್ಗಗಳನ್ನು ಆತಿಕ್ರಮಿಸದೆ, ನಗರಸಭಾ ಕಾರ್ಯಾಚರಣೆಗೆ ಸಹಕರಿಸಬೇಕು ಎಂದು ಪೌರಾಯುಕ್ತರು ವಿನಂತಿಸಿದರು.
ಈ ಸಂದರ್ಭದಲ್ಲಿ ನಗರಸಭೆಯ ಇಂಜಿನಿಯರ್ ರವಿ ಕುಮಾರ್, ನಗರ ಸಭೆಯ ಅಧಿಕಾರಿಗಳಾದ ಸಂತೋಷ್, ನಟರಾಜ್, ಆನಂದ್ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.