
ಬೀದರ್: ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ಹಾಗೂ ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ (ಎಸಿಸಿಇ) ವತಿಯಿಂದ ಸೆ.೧೫ರಂದು ಇಂಜಿನಿಯರ್ಸ್ ದಿನಾಚರಣೆ ಕಾರ್ಯಕ್ರಮವನ್ನು ನಗರದ ಗುರುದ್ವಾರ ರಸ್ತೆಯ ಸಮೀಪದ ಅಲ್ಲೂರಿ ಸೀತಾರಾಮ್ ಮೆಮೋರಿಯಲ್ ಹಾಲ್‌ನಲ್ಲಿ (ಕೆಎಸ್‌ಆರ್) ವಿಜೃಂಭಣೆಯಿAದ ಆಯೋಜಿಸಲಾಗಿದೆ ಎಂದು ರೋಟರಿ ಕ್ಲಬ್ ಆಫ್ ನ್ಯೂ ಸೆಂಚುರಿ ಹಾಗೂ ಎಸಿಸಿಇ ಅಧ್ಯಕ್ಷ ವೀರಶೆಟ್ಟಿ ಮಣಗೆ ತಿಳಿಸಿದರು.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.೧೫ರಂದು ಬೆಳಗ್ಗೆ ೯ ಗಂಟೆಗೆ ಬಸವೇಶ್ವರ ವೃತ್ತದಿಂದ ವಿಶೇಷ ಮೆರವಣಿಗೆ ಆರಂಭವಾಗಲಿದೆ. ಮೆರವಣಿಗೆಗೆ ಜಿಲ್ಲಾ ಪಂಚಾಯಿತಿ ಎಜುಕೇಟಿವ್ ಇಂಜಿನಿಯರ್ ಗೋ ರತ್ನ ಶೆಟ್ಟಿ ಚಾಲನೆ ನೀಡಲಿದ್ದು, ವಿವಿಧ ಕಲಾತಂಡಗಳು ಭಾಗವಹಿಸಲಿವೆ ಎಂದರು.
ನAತರ ಅಲ್ಲೂರಿ ಸೀತಾರಾಮ್ ಮೆಮೋರಿಯಲ್ ಹಾಲ್‌ನಲ್ಲಿ ನಡೆಯಲಿರುವ ಮುಖ್ಯ ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಇಂಜಿನಿಯರ್ ಪ್ರೇಮ್‌ಸಿಂಗ್ ನಾಯಕ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸರ್ಕಾರಿ ಸೇವೆಯಿಂದ ನಿವೃತ್ತರಾದ ಹಿರಿಯ ಇಂಜಿನಿಯರ್‌ಗಳನ್ನು ಸನ್ಮಾನಿಸಲಾಗುವುದು. ಅಲ್ಲದೆ, ಇಂಜಿನಿಯರಿAಗ್ ವಿಭಾಗದಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ರಕ್ತದಾನ ಶಿಬಿರವನ್ನೂ ಆಯೋಜಿಸಲಾಗಿದ್ದು, ಸಾರ್ವಜನಿಕರು, ಇಂಜಿನಿಯರ್‌ಗಳು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ರಕ್ತದಾನ ಮಾಡುವಂತೆ ವೀರಶೆಟ್ಟಿ ಮಣಗೆ ಮನವಿ ಮಾಡಿದರು.
ರೋಟರಿ ಕ್ಲಬ್ ವತಿಯಿಂದ ಪರಿಸರ ಸಂರಕ್ಷಣೆ, ಶಿಕ್ಷಣ, ಆರೋಗ್ಯ ಹಾಗೂ ಯುವಜನರ ಅಭಿವೃದ್ಧಿಗಾಗಿ ವರ್ಷವಿಡೀ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ರೋಟರಿ ಕ್ಲಬ್ ಸದಸ್ಯ ಸತೀಶ್ ಕುಮಾರ್ ರೆಡ್ಡಿ ತಿಳಿಸಿದರು.
ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸುವ ಉದ್ದೇಶದಿಂದ ಐಎಂಎ ಹಾಲ್‌ನಲ್ಲಿ ಮಣ್ಣಿನ ಗಣಪತಿ ತಯಾರಿಕಾ ಕಾರ್ಯಕ್ರಮ ಆಯೋಜಿಸಲಾಗಿದೆ. ಗ್ಲೋಬಲ್ ಸೈನ್ಸ್ ಅಕಾಡೆಮಿ, ಇನ್ಫಿನಿಟಿ ಸ್ಕೂಲ್ ಸೇರಿದಂತೆ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಪರಿಸರ ಸ್ನೇಹಿ ಮಣ್ಣಿನ ಗಣಪತಿ ತಯಾರಿಕೆ, ಮನೆಯಲ್ಲೇ ವಿಸರ್ಜನೆ ಹಾಗೂ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಲಾಗುವುದು ಎಂದರು.
ಸೆ.೧೩ರAದು ಬಿಎಂಡಿ (ಃoಟಿe ಒiಟಿeಡಿಚಿಟ ಆeಟಿsiಣಥಿ) ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಡಾ. ರಘು ಕೃಷ್ಣಮೂರ್ತಿ ತಿಳಿಸಿದರು.
ನಿತೀನ ಕರ್ಪೂರ ಅವರು ಮಾತನಾಡಿ ಕಳೆದ ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಚೆಸ್ ಕ್ರೀಡೆಯನ್ನು ನಿರಂತರವಾಗಿ ಉತ್ತೇಜಿಸಲಾಗುತ್ತಿದ್ದು, ಬೀದರ್‌ನ್ನು ಪ್ರಮುಖ ಚೆಸ್ ಕೇಂದ್ರವನ್ನಾಗಿ ರೂಪಿಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಚೆಸ್ ಕ್ರೀಡೆಯನ್ನು ಬೀದರ್‌ಗೆ ಮಾತ್ರ ಸೀಮಿತಗೊಳಿಸದೆ ಇಡೀ ಕಲ್ಯಾಣ ಕರ್ನಾಟಕದಾದ್ಯಂತ ಬೆಳೆಸುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.
ಈಗಾಗಲೇ ಚೆಸ್ ಪಂದ್ಯಾವಳಿಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಸುಮಾರು ೪೦ ಸ್ಪರ್ಧಿಗಳು ಹೆಸರು ನೋಂದಾಯಿಸಿಕೊAಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಆಟಗಾರರು ಭಾಗವಹಿಸಿ ಪಂದ್ಯಾವಳಿಯನ್ನು ಯಶಸ್ವಿಗೊಳಿಸುವಂತೆ ನಿತೀನ ಕರ್ಪೂರ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಅಶೋಕ್ ಉಪ್ಪೆ, ದಿಲೀಪ್ ಕುಮಾರ್ ನಿಟ್ಟೂರೆ, ಶಿವು ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು































