Home ಜಿಲ್ಲೆ ಮುಂಗಾರು ಹಂಗಾಮಿಗೆ ಅಗತ್ಯವಿರುವಷ್ಟು ಬಿತ್ತನೆ ಬೀಜ ಲಭ್ಯ:ರೈತರು ಆತಂಕ ಪಡುವ ಅಗತ್ಯವಿಲ್ಲ : ಶಾಸಕ ಈಶ್ವರ...

ಮುಂಗಾರು ಹಂಗಾಮಿಗೆ ಅಗತ್ಯವಿರುವಷ್ಟು ಬಿತ್ತನೆ ಬೀಜ ಲಭ್ಯ:ರೈತರು ಆತಂಕ ಪಡುವ ಅಗತ್ಯವಿಲ್ಲ : ಶಾಸಕ ಈಶ್ವರ ಖಂಡ್ರೆ

ಭಾಲ್ಕಿ: ಜೂ.2:ತಾಲ್ಲೂಕಿನ ರೈತರಿಗೆ ಮುಂಗಾರು ಹಂಗಾಮಿಗೆ ಅಗತ್ಯವಿರುವಷ್ಟು ಬಿತ್ತನೆ ಬೀಜಗಳು ಲಭ್ಯವಿದ್ದು, ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಶಾಸಕ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ತಾಲ್ಲೂಕಿನ ವಿವಿಧ ಕೃಷಿ ಕೇಂದ್ರಗಳ ಮೂಲಕ ರೈತರಿಗೆ ಬಿತ್ತನೆ ಬೀಜಗಳ ವಿತರಣೆಯನ್ನು ಈಗಾಗಲೇ ಆರಂಭಿಸಲಾಗಿದ್ದು, ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಪ್ರಮಾಣದ ಬೀಜಗಳ ಸಂಗ್ರಹವನ್ನು ಮಾಡಲಾಗಿದೆ.

ರೈತರಿಗೆ ಸಮಯಕ್ಕೆ ಸರಿಯಾಗಿ ಗುಣಮಟ್ಟದ ಬೀಜಗಳು ದೊರೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಬಿತ್ತನೆ ಅವಧಿಯಲ್ಲಿ ಬೀಜಗಳ ಕೊರತೆ ಉಂಟಾಗದಂತೆ ನಿರಂತರವಾಗಿ ಮೇಲ್ವಿಚಾರಣೆ ವಹಿಸಲಾಗುತ್ತಿದೆ.

ರೈತರು ಸರ್ಕಾರದ ಮಾನ್ಯತೆ ಪಡೆದ ಕೇಂದ್ರಗಳಿಂದಲೇ ಬೀಜಗಳನ್ನು ಪಡೆದು ಮುಂಗಾರು ಕೃಷಿ ಚಟುವಟಿಕೆಗಳನ್ನು ಆರಂಭಿಸಬೇಕು ಎಂದು ಅವರು ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

ಭಾಲ್ಕಿ ತಾಲ್ಲೂಕಿನ ರೈತರ ಹಿತಾಸಕ್ತಿಗೆ ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಆಡಳಿತ ಬದ್ಧವಾಗಿದ್ದು, ಕೃಷಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಶ್ರೀ ಈಶ್ವರ ಖಂಡ್ರೆ ತಿಳಿಸಿದ್ದಾರೆ.