
ಕಲಬುರಗಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಿಗಬೇಕಾದ ಸೌಲಭ್ಯಗಳು ವಿಳಂಬವಾಗಬಾರದು. ಪ್ರತಿಯೊಬ್ಬ ಅಧಿಕಾರಿಯೂ ತಮ್ಮ ಇಲಾಖೆಗೆ ಸಂಬಂಧಿಸಿದ ಕ್ರಿಯಾ ಯೋಜನೆಗಳ ಸಫಲತೆಗೆ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಇಕ್ರಂ ಶರೀಫ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬುಧುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಮ್ಮಿಕೊಂಡಿರುವ ಎಸ್ ಸಿಎಸಪಿ ಮತ್ತು ಟಿಎಸ್ ಪಿ ಜಿಲ್ಲಾ ಮಟ್ಟದ 2ನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ನಿಗದಿತ ಅವಧಿಯೊಳಗೆ ಅನುದಾನ ಬಳಕೆಯಾಗದೆ ಇಂದಲ್ಲಿ ಮುಂದಿನ ತ್ರೈಮಾಸಿಕಕ್ಕೆ ಬಾಕಿ ಉಳಿಯಬಾರದು. ಸಭೆಯಲ್ಲಿ ವಿವಿಧ ಸರ್ಕಾರಿ ಯೋಜನೆಗಳು ಹಾಗೂ ಅನುದಾನಗಳು ನಿಗದಿತ ಅವಧಿಯೊಳಗೆ ಶೇ. 100 ರಷ್ಟು ಪ್ರಗತಿ ಸಾಧಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SಅSP/ಖಿSP) ಅಭಿವೃದ್ಧಿ ಯೋಜನೆಯಡಿ ಜಿಲ್ಲಾ ಹಾಗೂ ರಾಜ್ಯ ವಲಯಕ್ಕೆ ಒಟ್ಟು 9,794.41 ಲಕ್ಷ ಅನುದಾನ ಹಂಚಿಕೆಯಾಗಿರುವ ಕುರಿತು ಸುದೀರ್ಘ ಪರಿಶೀಲನೆ ನಡೆಸಲಾಯಿತು. ಇದರಲ್ಲಿ ರಾಜ್ಯ ವಲಯಕ್ಕೆ ಸುಮಾರು 8,051.17 ಲಕ್ಷ ಹಾಗೂ ಜಿಲ್ಲಾ ವಲಯಕ್ಕೆ 1,743.24 ಲಕ್ಷ ಅನುದಾನ ಹಂಚಿಕೆ ಮಾಡಲಾಗಿದ್ದು ಅದರಲ್ಲಿ, ಬಿಡುಗಡೆಯಾದ 11,922.13 ಲಕ್ಷ ಮೊತ್ತದಲ್ಲಿ ಒಟ್ಟು 10,709.43 ಲಕ್ಷ ಅನುದಾನವು ಯಶಸ್ವಿಯಾಗಿ ಬಳಕೆಯಾಗಿದೆ ಎಂದು ತಿಳಿಸಿದರು.
ಪ್ರತಿ ಇಲಾಖೆಯ ಅಧಿಕಾರಿಗಳು ತಮ್ಮ ಕ್ರಿಯಾ ಯೋಜನೆಗಳಿಗೆ ಸಂಬಂಧಪಟ್ಟವರಿಂದ ಸೂಕ್ತ ಅನುಮೋದನೆ ಪಡೆದುಕೊಂಡಿದ್ದಾರೆಯೇ ಎಂಬುದನ್ನು ಖಾತರಿಪಡಿಸಿಕೊಂಡು, ನಿಗದಿತ ಸಮಯದೊಳಗೆ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ವೆಚ್ಚ ಮಾಡಬೇಕೆಂದು ಸಭೆಯಲ್ಲಿ ನಿರ್ದೇಶಿಸಲಾಯಿತು.
ರೇμÉ್ಮ ಹಾಗೂ ಮೀನುಗಾರಿಕೆ ಇಲಾಖೆಗಳಲ್ಲಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಮತ್ತು ಅನುದಾನ ಬಳಕೆಯ ಪ್ರಗತಿಯನ್ನು ಪರಿಶೀಲಿಸಲಾಯಿತು. ಮುಂದಿನ ಸಭೆಯ ವೇಳೆಗೆ ಅರ್ಹ ಫಲಾನುಭವಿಗಳಿಗೆ ಅಗತ್ಯ ಸೌಲಭ್ಯಗಳನ್ನು ತಲುಪಿಸಿ, ವೆಚ್ಚದ ಪ್ರಗತಿಯನ್ನು ಕಡ್ಡಾಯವಾಗಿ ಸಾಧಿಸಬೇಕೆಂದು ಕಟ್ಟುನಿಟ್ಟಿನ ಆದೇಶ ನೀಡಲಾಯಿತು. ಇದರೊಂದಿಗೆ ಗ್ರಾಮೀಣ ಕೈಗಾರಿಕೆಗಳು, ಸಣ್ಣ ನೀರಾವರಿ, ವೈದ್ಯಕೀಯ ಶಿಕ್ಷಣ, ಶಾಲಾ ಅನುದಾನಗಳು, ವಾಹನ ಸೌಲಭ್ಯ ಯೋಜನೆಗಳು, ವಿದ್ಯಾ ವಿಕಾಸ ಯೋಜನೆ ಹಾಗೂ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಅನ್ನಭಾಗ್ಯ ಯೋಜನೆಯ ಸದುಪಯೋಗದ ಕುರಿತು ವಿವರವಾದ ಚರ್ಚೆ ನಡೆಸಲಾಯಿತು.
ಅನುಮೋದನೆಗೊಂಡ ಯೋಜನೆಗಳು ಮತ್ತು ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಿ, ಬ್ಯಾಂಕ್ಗಳ ಮೂಲಕ ಅಗತ್ಯ ಅನುದಾನ ನೇರವಾಗಿ ಫಲಾನುಭವಿಗಳಿಗೆ ತಲುಪುವಂತೆ ಮಾಡಲು ಸೂಚಿಸಲಾಯಿತು. ಇಲಾಖೆಗಳ ನಡುವೆ ಸಮನ್ವಯದ ಕೊರತೆ ಕಂಡುಬಂದಲ್ಲಿ ಸಹಿಸುವಂತಿಲ್ಲ ಎಂದು ಎಚ್ಚರಿಸಿದ ಜಿಲ್ಲಾಧಿಕಾರಿಗಳು, ಪ್ರತಿಯೊಂದು ಇಲಾಖೆಯ ಪ್ರಗತಿಯೂ ಮತ್ತೊಂದಕ್ಕೆ ಪೂರಕವಾಗಿರಬೇಕು ಮತ್ತು ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಪ್ರಗತಿಯನ್ನು ತ್ವರಿತಗೊಳಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಜಂಟಿ ನಿರ್ದೇಶಕಿ ಪ್ರೀತಿ ಚಂದ್ರಶೇಖರ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಪ್ರಭಾರ ಮಧುಮತಿ, ಪೆÇ್ರಜೆಕ್ಟರ್ ಯೋಜನಾ ನಿರ್ದೇಶಕ ಜಗದೇವಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಕುಮಾರ್ ರಾಠೋಡ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಬೇಬಿಮುಗೇರ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.





















