
ಧಾರವಾಡ,ಅ೨೫: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರ-೨೦೨೬ರ ಮತ ಎಣಿಕೆ ಕಾರ್ಯವನ್ನು ಸುಗಮವಾಗಿ ನಡೆಸುವ ಉದ್ದೇಶದಿಂದ ಮತ ಎಣಿಕೆ ಪ್ರಕ್ರಿಯೆಯ ಮೊದಲ ಸುತ್ತಿನಲ್ಲಿಯೇ ಪಾರದರ್ಶಕತೆ ಮತ್ತು ವಿಶ್ವಾಸವನ್ನು ಮೂಡಿಸಿದರೆ, ಮುಂದಿನ ಸುತ್ತುಗಳಲ್ಲಿ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸಲು ಸಾಧ್ಯವಾಗುತ್ತದೆ ಎಂದು ಚುನಾವಣಾಧಿಕಾರಿ ಆಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಕೆ.ಎಮ್. ಜಾನಕಿ ಅವರು ಹೇಳಿದರು.
ಅವರು ಕೃಷಿ ವಿಶ್ವವಿದ್ಯಾಲಯದ ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಮತ ಎಣಿಕೆ ಕಾರ್ಯದ ಮೇಲ್ವಿಚಾರಕರು ಹಾಗೂ ಎಣಿಕೆ ಸಹಾಯಕರು ಅವರಿಗೆ ಆಯೋಜಿಸಿದ ಮತ ಎಣಿಕೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮತ ಎಣಿಕೆ ಸಿಬ್ಬಂದಿ ತರಬೇತಿಯನ್ನು ಗಂಭೀರವಾಗಿ ಪರಿಗಣಿಸಿ, ತಮ್ಮಲ್ಲಿರುವ ಎಲ್ಲ ಅನುಮಾನಗಳನ್ನು ಪರಿಹರಿಸಿಕೊಳ್ಳಬೇಕು. ಮತ ಎಣಿಕೆ ಸಿಬ್ಬಂದಿ ಕಡ್ಡಾಯವಾಗಿ ಪ್ರಾಯೋಗಿಕ ತರಬೇತಿಯಲ್ಲಿ ಭಾಗವಹಿಸಬೇಕು. ಪ್ರಾಯೋಗಿಕ ತರಬೇತಿಯಲ್ಲಿ ಯಶಸ್ವಿಯಾದ ನಂತರವೇ ಇಂದಿನ ತರಬೇತಿ ಪೂರ್ಣಗೊಂಡAತೆ ಪರಿಗಣಿಸಲಾಗುತ್ತದೆ. ಅನುಮಾನಗಳನ್ನು ಹಾಗೆಯೇ ಉಳಿಸಿಕೊಂಡು ತೆರಳಬಾರದು. ತರಬೇತಿಯಲ್ಲಿ ತಿಳಿಸುವ ಪ್ರತಿಯೊಂದು ಅಂಶವನ್ನೂ ಗಮನವಿಟ್ಟು ಆಲಿಸಿ, ಅಗತ್ಯವಿದ್ದಲ್ಲಿ ಪ್ರಶ್ನೆಗಳನ್ನು ಕೇಳಿ ಸ್ಪಷ್ಟತೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಮತ ಎಣಿಕೆ ಸಿಬ್ಬಂದಿ ತಮ್ಮನ್ನು ಕೇವಲ ಇಲಾಖೆಯ ನೌಕರರೆಂದು ಭಾವಿಸದೆ, ಚುನಾವಣಾಧಿಕಾರಿಯ (ಖಔ) ಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸಬೇಕು. ಚುನಾವಣಾಧಿಕಾರಿಯ ಜವಾಬ್ದಾರಿಯನ್ನು ಅರಿತು, ಅತ್ಯಂತ ಎಚ್ಚರಿಕೆ ಮತ್ತು ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು. ಚುನಾವಣಾ ಆಯೋಗದ ಮಾರ್ಗಸೂಚಿಗಳು, ನಿಯಮಗಳು ಹಾಗೂ ಕಾನೂನುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ಘನತೆಗೆ ಧಕ್ಕೆಯಾಗುವ ಯಾವುದೇ ರೀತಿಯ ನಿರ್ಲಕ್ಷ÷್ಯವನ್ನು ಸಹಿಸುವುದಿಲ್ಲ ಎಂದು ತಿಳಿಸಿದರು.
ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಿಬ್ಬಂದಿ ತಮ್ಮ ಕರ್ತವ್ಯಕ್ಕೆ ಸಂಪೂರ್ಣ ಆದ್ಯತೆ ನೀಡಬೇಕು. ಎರಡು-ಮೂರು ದಿನಗಳ ಕಾಲ ಈ ಕಾರ್ಯಕ್ಕೆ ಅಗತ್ಯ ಸಮಯ ಮೀಸಲಿಟ್ಟು, ಯಾವುದೇ ಅನುಮಾನಗಳಿದ್ದರೂ ತಕ್ಷಣವೇ ಪರಿಹರಿಸಿಕೊಳ್ಳಬೇಕು. ಆತ್ಮವಿಶ್ವಾಸ ಅಗತ್ಯವಾದರೂ ಅತಿಯಾದ ಆತ್ಮವಿಶ್ವಾಸದಿಂದ ಸ್ವತಃ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು. ಪ್ರತಿಯೊಂದು ಕಾರ್ಯವನ್ನೂ ನಿಯಮಾನುಸಾರ ನಿರ್ವಹಿಸುವ ಜವಾಬ್ದಾರಿ ಸಿಬ್ಬಂದಿಯ ಮೇಲಿದೆ. ಮತ ಎಣಿಕೆ ಕೊಠಡಿಗೆ ಪ್ರವೇಶಿಸುವ ಮೊದಲು ಪ್ರಕ್ರಿಯೆಯ ಪ್ರತಿಯೊಂದು ಹಂತದ ಬಗ್ಗೆಯೂ ಸ್ಪಷ್ಟತೆ ಹೊಂದಿರಬೇಕು. ಯಾವುದೇ ಪ್ರಶ್ನೆ ಅಥವಾ ಅನುಮಾನ ಉಳಿಸಿಕೊಳ್ಳದೆ, ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಬೇಕು ಎಂದು ಹೇಳಿದರು.
ಕಂದಾಯ ಇಲಾಖೆಯ ನಿವೃತ್ತ ತಹಸೀಲ್ದಾರ್ ಶಿರಗಾಂವ್ಕರ್ ಅವರು ಮತ ಎಣಿಕೆ ಕಾರ್ಯದ ಮೇಲ್ವಿಚಾರಕರು ಹಾಗೂ ಎಣಿಕೆ ಸಹಾಯಕರಿಗೆ ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್. ಆರ್, ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷಿ÷್ಮÃಪ್ರಿಯಾ, ಗದಗ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ, ಹಾವೇರಿ ಜಿಲ್ಲಾಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ, ನಾಲ್ಕು ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳು,ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರುದ್ರೇಶ್ ಘಾಳಿ,ಧಾರವಾಡ ಜಿಲ್ಲೆಯ ತಹಶೀಲ್ದಾರರು,ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಉಪವಿಭಾಗದ ದಂಡಾಧಿಕಾರಿ ಪ್ರಭಾವತಿ ಫಕೀರಪುರ ಸೇರಿದಂತೆ ಮತ ಎಣಿಕೆ ಕಾರ್ಯದ ಮೇಲ್ವಿಚಾರಕರು ಹಾಗೂ ಎಣಿಕೆ ಸಹಾಯಕ ಅಧಿಕಾರಿಗಳು ಭಾಗವಹಿಸಿದ್ದರು.























