Home ಜಿಲ್ಲೆ ಪರಿಸರ ರಕ್ಷಣೆ: ಜಾಗೃತಿ ಕಾರ್ಯಕ್ರಮ

ಪರಿಸರ ರಕ್ಷಣೆ: ಜಾಗೃತಿ ಕಾರ್ಯಕ್ರಮ

ಲಕ್ಷೆ÷್ಮÃಶ್ವರ,ಜೂ೬: ವಿಶ್ವ ಪರಿಸರ ದಿನದ ಅಂಗವಾಗಿ ಎಸ್‌ಟಿಪಿಎಂಬಿ ಸಂಸ್ಥೆಯ ಎಸ್‌ಎಂಜೆವಿಜಿ ಪದವಿಪೂರ್ವ ಕಾಲೇಜಿನಲ್ಲಿ ಪರಿಸರ ರಕ್ಷಣೆಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸರಸ್ವತಿ ಹುಲ್ಲಣ್ಣವರ ಅವರು ಮಾತನಾಡಿ, ಪರಿಸರದ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಮರಗಳನ್ನು ನೆಡುವುದು, ನೀರನ್ನು ಮಿತವಾಗಿ ಬಳಸುವುದು ಹಾಗೂ ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರುವ ಪ್ರತಿಜ್ಞೆಯನ್ನು ಸ್ವೀಕರಿಸಿದರು. ಕಾಲೇಜು ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿನಿಯರು ಹಾಗೂ ಉಪನ್ಯಾಸಕರು ಪರಿಸರ ಸಂರಕ್ಷಣೆಗೆ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿ, ಹಸಿರು ಪರಿಸರ ನಿರ್ಮಾಣಕ್ಕೆ ತಮ್ಮ ಸಹಕಾರ ನೀಡುವ ಸಂಕಲ್ಪ ಮಾಡಿದರು.

“ಒಂದು ಮರ ? ನೂರು ಉಸಿರು, ಹಸಿರು ಪರಿಸರವೇ ನಮ್ಮ ಭವಿಷ್ಯ” ಎಂಬ ಸಂದೇಶದೊAದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.