
ಗದಗ, ಜೂ.೭: ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ.ನಾಗವೇಣಿ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಅರಣ್ಯ ಇಲಾಖೆ ಇವರ ಸಂಯುಕ್ತಶ್ರಯದಲ್ಲಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು,
ಇಂದು ಅತಿಯಾದ ಪ್ಲಾಸ್ಟೀಕ ಬಳಕೆಯಿಂದ ಹಾಗೂ ಸಾಕಷ್ಟು ಪ್ರಮಾಣದಲ್ಲಿ ಗಿಡ-ಮರಗಳು ಇರದೇ ಇದ್ದುದರಿಂದ ಪರಿಸರ ವಿನಾಶದ ಅಂಚಿನಲ್ಲಿದೆ. ಪ್ರತಿಯೊಬ್ಬರು ಸಾಧ್ಯವಾದಷ್ಟು ಪ್ಲಾಸ್ಟೀಕ ಬಳಕೆ ನಿಲ್ಲಿಸಬೇಕು. ತಮ್ಮ ಮನೆಯ ಸುತ್ತ ಮುತ್ತ ಗಿಡ ಮರ ನೆಟ್ಟು ಪೋಷಿಸಬೇಕು ಎಂದು ಹೇಳಿದರು.
ಇದೆ ಸಂದರ್ಭದಲ್ಲಿ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಗಂಗಾಧರ.ಸಿ.ಎಮ್, ೧ ನೇ ಅಧಿಕ ಪ್ರಧಾನ ನ್ಯಾಯಾಧೀಶರು, ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಆನಂದ ಟಿ ಚವ್ಹಾಣ, ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೀತಾ ಶಿಂದೆ, ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರಾದ ಗಿರಿಮಲ್ಲಪ್ಪ ಶಟ್ಟರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ.ಎಸ್.ಶಿವನಗೌಡ್ರ, ಅಪರ ಹಿರಿಯ ದಿವಾಣಿ ನ್ಯಾಯಾಧೀಶರಾದ ಶ್ರೀಮತಿ. ಪದ್ಮಶ್ರೀ ಪಾಟೀಲ, ಪ್ರಧಾನ ದಿವಾಣಿ ನ್ಯಾಯಾಧೀಶರಾದ ಶ್ರೀಮತಿ.ದೀಪ್ತಿ ನಾಡಗೌಡ್ರ, ಗದಗ ಜಿಲ್ಲಾ ವಕೀಲರ ಸಂಘ ಉಪಾಧ್ಯಕ್ಷರಾದ ಎಮ್.ಎ.ಸಂಗನಾಳ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಗದಗ ವಿಭಾಗದ ಸಂತೋಷಕುಮಾರ್ ಕೆಂಚಪ್ಪನವರ ಹಾಗೂ ಚಂದ್ರಹಾಸ ವರ್ಣೇಕರ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸಾಮಾಜಿಕ ಅರಣ್ಯ ವಿಭಾಗ ಗದಗ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


























