Home ಜಿಲ್ಲೆ ಬೆಂಗಳೂರು ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರೀಕನ ಆದ್ಯ ಕರ್ತವ್ಯ

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರೀಕನ ಆದ್ಯ ಕರ್ತವ್ಯ

ಕೋಲಾರ, ಜೂ,೬- ಗಿಡ ಮರಗಳನ್ನು ನೆಟ್ಟು ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಪರಿಸರವನ್ನು ರಕ್ಷಿಸುವ ಮೂಲಕ ಉತ್ತಮ ಭವಿಷವನ್ನು ನಿರ್ಮಿಸಬಹುದಾಗಿದೆ ಹಾಗೂ ಶುದ್ದ ಗಾಳಿ ನೀರು ಇತ್ಯಾದಿ ಸಂಪನ್ಮೂಲಗಳನ್ನು ಸಂರಕ್ಷಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಕ.ಸಾ.ಪ ಗೌರಾವಾಧ್ಯಕ್ಷ ಟಿ. ಸುಬ್ಬರಾಮಯ್ಯ ತಿಳಿಸಿದರು.


ನಗರದ ಕಾರಂಜಿ ಕಟ್ಟೆಯ ೧೧ನೇ ಕ್ರಾಸ್‌ನಲ್ಲಿರುವ ಶ್ರೀ ಬಾಬಾ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನವನ್ನು ಗಿಡ ನೆಟ್ಟು ಗಿಡಕ್ಕೆ ನೀರು ಎರಿಯುವುವ ಮೂಲಕ ಉದ್ಘಾಟಿಸಿ ಅವರು ಪರಿಸರ ಸಂರಕ್ಷಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಅರಿವು ಮೂಢಿಸಿ ಮಾತನಾಡಿದರು.


ಸಂಸ್ಥೆಯ ಅಧ್ಯಕ್ಷರಾದ ರಾಮಚಂದ್ರಗೌಡರವರು ಮಾತನಾಡಿ ಪ್ರಸ್ತುತ ಪರಿಸರ ಮಾಲಿನ್ಯ, ಅರಣ್ಯ ನಾಶ, ಹವಾಮಾನ ಬದಲಾವಣೆ ಮತ್ತು ಪ್ಲಾಸ್ಟಿಕ್ ಬಳಕೆಯಿಂದ ಪ್ರಕೃತಿಗೆ ದೊಡ್ಡ ಹಾನಿಯಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು ಎಂದು ತಿಳಿಸಿದರು .


ಸಂಸ್ಥೆಯ ಆಡಳಿತಾಧಿಕಾರಿಗಳಾದ ವೇಣುಸುಂದರ್ ಗೌಡರವರು ಮಾತನಾಡಿ ಮರಗಳನ್ನು ನೆಡುವುದು, ನೀರನ್ನು ಮಿತವಾಗಿ ಬಳಸುವುದು, ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು ಹಾಗೂ ಸ್ವಚ್ಛತೆಯನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದೆ. ವಿದ್ಯಾರ್ಥಿಗಳು ಪರಿಸರ ಸ್ನೇಹಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಉತ್ತಮ ನಾಗರಿಕರಾಗಬೇಕು ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪರಿಸರ ಜಾಗೃತಿ ಕುರಿತು ಭಾಷಣ, ಗೀತೆ ಹಾಗೂ ಘೋಷಣೆಗಳನ್ನು ಪ್ರಸ್ತುತಪಡಿಸಿದರು. ಶಾಲಾ ಆವರಣದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಪ್ರತಿಜ್ಞೆ ಸ್ವೀಕರಿಸಿದರು.


ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿ ವಿಶ್ವ ಪರಿಸರ ದಿನದ ಮಹತ್ವವನ್ನು ಸಾರಿದರು.