Home ಜಿಲ್ಲೆ ಕಲಬುರಗಿ ಭಯೋತ್ಪಾದನೆ ನಿರ್ಮೂಲನೆಗೆ ದೃಢ ಸಂಕಲ್ಪದೊಂದಿಗೆ ಕಾರ್ಯನಿರ್ವಹಣೆ ಅಗತ್ಯ

ಭಯೋತ್ಪಾದನೆ ನಿರ್ಮೂಲನೆಗೆ ದೃಢ ಸಂಕಲ್ಪದೊಂದಿಗೆ ಕಾರ್ಯನಿರ್ವಹಣೆ ಅಗತ್ಯ

ಕಲಬುರಗಿ:ಮೇ.21: ನಮ್ಮ ದೇಶ ಸೇರಿದಂತೆ ವಿಶ್ವದಲ್ಲಿ ದಿನನಿತ್ಯಲೂ ನೂರಾರು ಅಮಾಯಕರ ಸಾವಿಗೆ ಕಾರಣವಾಗಿ, ಜಗತ್ತನ್ನು ತಲ್ಲಣಗೊಳಿಸಿ, ಅಶಾಂತಿಯುತವಾದ ವಾತಾವರಣದ ಸೃಷ್ಟಿಗೆ ಕಾರಣೀಕೃತವಾದ ಭಯೋತ್ಪಾದನೆ ಎಂಬುದು ದೊಡ್ಡ ಸಾಮಾಜಿಕ ಪಿಡುಗಾಗಿದೆ. ರಾಷ್ಟ್ರದ ಶಾಂತಿ, ಅಭಿವೃದ್ಧಿಗೆ ಇದು ತೊಡಕಾಗಿದ್ದು, ಅದರ ನಿರ್ಮೂಲನೆಗೆ ಎಲ್ಲರೂ ಜೊತೆಗೂಡಿ ಬೇರು ಸಹಿತ ಸರ್ವನಾಶ ಮಾಡುವ ದೃಢ ಸಂಕಲ್ಪದೊಂದಿಗೆ ಕಾರ್ಯನಿರ್ವಹಿಸಬೇಕಾಗಿದೆ. ಭಯೋತ್ಪಾದನೆಗೆ ಎಂದಿಗೂ ಕೂಡಾ ಪ್ರತ್ಯಕ್ಷವಾಗಲಿ ಅಥವಾ ಪರೋಕ್ಷವಾಗಿ ಆಗಲಿ ಬೆಂಬಲಿಸುವುದು ದೇಶದ್ರೋಹ ಕೆಲಸವಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ.ಪಾಟೀಲ ಹೇಳಿದರು.
ನಗರದ ಆಳಂದ ರಸ್ತೆಯ ಸಂತೋಷ ಕಾಲನಿ ಕ್ರಾಸ್ ಸಮೀಪದ ‘ರಿಪಬ್ಲಿಕ್ ಸ್ಪೋಕನ್ ಇಂಗ್ಲೀμï ಅಕಾಡೆಮಿ’ಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ಗುರುವಾರ ‘ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನಾಚರಣೆ’ಯ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿ ಅವರು ಮಾತನಾಡುತ್ತಿದ್ದರು.
ಶಾಂತಿ, ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ದೇಶದಲ್ಲಿ ಕೆಲವು ದುಷ್ಟ ಶಕ್ತಿಗಳು ಸಮಾಜದಲ್ಲಿ ಅರಾಜಕತೆಯ ವಾತವರಣವನ್ನು ಸೃಷ್ಟಿಸುವ ಕಾರ್ಯವನ್ನು ಮಾಡುತ್ತಿವೆ. ಅಂತಹ ಸಂದರ್ಭದಲ್ಲಿ ಪ್ರತಿಯೊಬ್ಬ ಭಾರತೀಯ ಒಕ್ಕೋರಲಿನಿಂದ ಖಂಡಿಸುವ ಮೂಲಕ, ಅದರ ನಾಶಕ್ಕೆ ಶ್ರಮಿಸಬೇಕಾಗಿದೆ ಎಂದು ಮಾರ್ಮಿಕವಾಗಿ ನುಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ದತ್ತು ಹಡಪದ, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಡಾ.ರಾಜಶೇಖರ ಪಾಟೀಲ, ದಿನೇಶ್ ಮಿಶ್ರಾ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.