
ಬೀದರ, ಜೂ10 : ಬೀದರ ಜಿಲ್ಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಹಿನ್ನಲೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಎಲ್ಲಾ ಇಲಾಖೆ ಸಹಕಾರದಿಂದ ಈ ಅನಿಷ್ಟ ಪದ್ದತಿಯನ್ನು ನಿರ್ಮೂಲನೆಗೊಳಿಸಲು ಸಾಧ್ಯ ಎಂದು ಬೀದರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಹೇಳಿದರು.
ಬೀದರ ನಗರದ ಜೂನ್ 9ರ ಮಂಗಳವಾರ ರಂದು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯ ಜಿಲ್ಲಾ ಟಾಸ್ಕ್ ಫೆÇೀರ್ಸ್ ಸಲಹಾ ಸಮಿತಿ ಸಭೆಯ ಅಧ್ಯಕ್ಷರು ವಹಿಸಿ ಅವರು ಮಾತನಾಡಿದರು.
ಪ್ರತಿ ವರ್ಷದಂತೆ ವರ್ಷವೂ ಜೂನ್ 12 ರಂದು ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ಬೀದರ ಜಿಲ್ಲಾಡಳಿತ ಬೀದರ ಜಿಲ್ಲಾ ನ್ಯಾಯಾಲಯ ಜಾಥಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಾಥಾ ಕಾರ್ಯಕ್ರಮವು ತಹಶೀಲ್ ಕಛೇರಿ, ಬಸವೇಶ್ವರ ಚೌಕ, ಅಂಬೇಡ್ಕರ್ ವೃತ್ತದಿಂದ ರೋಟ್ರಿಕ್ ಕ್ಲಬ್ ವೃತ್ತದ ಮೂಲಕ ವೃತ್ತದ ಮೂಲಕ ಜರುಗಿಸಿ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಸೂಚಿಸಿದರು.
ಈ ಸಂದರ್ಭದಲ್ಲಿ ಬೀದರ ಜಿಲ್ಲಾ ಕಾನೂನು ಸೇವ ಪ್ರಾಧಿಕಾರ ಅಧ್ಯಕ್ಷರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ರಾಘವೇಂದ್ರ, ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.


































