
ಗದಗ, ಜು.೨೫: ಯುವಜನರಲ್ಲಿ ನಾಯಕತ್ವ ಗುಣ, ಸಾಮಾಜಿಕ ಹೊಣೆಗಾರಿಕೆ, ಕ್ರೀಡಾ ಮನೋಭಾವ ಹಾಗೂ ಸಮುದಾಯ ಸೇವೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಮಾರ್ಗದರ್ಶನದಲ್ಲಿ ‘ಭಾರತ್ ಜೋಡೋ ಯುವ ಸಂಘಗಳನ್ನು’ ಸ್ಥಾಪಿಸುವ ಕುರಿತು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಭಾರತ ಜೋಡೋ ಯುವ ಸಂಘಗಳನ್ನು ಸ್ಥಾಪಿಸುವ ಕುರಿತು ಪೂರ್ವಭಾವಿ ಪರಿಶೀಲನಾ ಸಭೆಯ ಅಧ್ಯಕ್ಷತೆಯಲ್ಲಿ ವಹಿಸಿ ಮಾತನಾಡಿದರು.
ಯುವಶಕ್ತಿಯು ದೇಶದ ಅಭಿವೃದ್ಧಿಯ ಪ್ರಮುಖ , ಯುವಜನರ ಸಾಮರ್ಥ್ಯವನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳುವ ಮೂಲಕ ಸಮಾಜದಲ್ಲಿ ಉತ್ತಮ ಬದಲಾವಣೆ ತರಲು ಸಾಧ್ಯ. ಈ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯುವ ಸಂಘಗಳು ಯುವಕರಲ್ಲಿ ನಾಯಕತ್ವ ಗುಣ, ಶಿಸ್ತು ಹಾಗೂ ಸಾಮಾಜಿಕ ಬದ್ಧತೆಯನ್ನು ಬೆಳೆಸುವ ವೇದಿಕೆಯಾಗಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.
“ಯುವ ಸಂಘಗಳ ರಚನೆ ಪ್ರಕ್ರಿಯೆಯು ಸಂಪೂರ್ಣ ನಿಯಮಾನುಸಾರ, ಪಾರದರ್ಶಕ ಹಾಗೂ ಯಶಸ್ವಿಯಾಗಿ ನಡೆಯಬೇಕು. ಯುವಜನತೆಗೆ ಕ್ರೀಡೆ, ಕೌಶಲ್ಯಾಭಿವೃದ್ಧಿ ಹಾಗೂ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದ್ದು, ಸಂಬAಧಪಟ್ಟ ಎಲ್ಲಾ ಇಲಾಖಾ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು” ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪ್ರತಿ ೪,೦೦೦ ಜನಸಂಖ್ಯೆಗೆ ಒಂದರAತೆ ‘ಭಾರತ್ ಜೋಡೋ ಯುವ ಸಂಘ’ವನ್ನು ರಚಿಸಲಾಗುವುದು. ೧೬ ರಿಂದ ೩೫ ವರ್ಷದೊಳಗಿನ ಯುವಕ ಯುವತಿಯರು ಈ ಸಂಘದ ಸದಸ್ಯರಾಗಲು ಅರ್ಹರಿರುತ್ತಾರೆ.ಪ್ರತಿಯೊಂದು ಸಂಘದಲ್ಲಿ ೧೫ ಜನ ಕಾರ್ಯಕಾರಿ ಸಮಿತಿ ಸದಸ್ಯರಿರುತ್ತಾರೆ. ಪಾರದರ್ಶಕತೆಗಾಗಿ ಲಾಟರಿ (ಚೀಟಿ ಎತ್ತುವ) ಪದ್ಧತಿಯ ಮೂಲಕ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ. ಇದರಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ)- ೩ ಸದಸ್ಯರು ( ೧ ಮಹಿಳೆ), ಹಿಂದುಳಿದ ವರ್ಗಗಳು + ಅಲ್ಪಸಂಖ್ಯಾತರು ? ೪ ಸದಸ್ಯರು ( ೧ ಮಹಿಳೆ), ಸಾಮಾನ್ಯ ? ೮ ಸದಸ್ಯರು ( ೩ ಮಹಿಳೆಯರು) ಹೀಗೆ ಮೀಸಲಾತಿ ಕಲ್ಪಿಸಲಾಗುವುದು ಎಂದರು.
ಯಾವುದೇ ಸದಸ್ಯರು ಮುಂದಿನ ಎರಡು ವರ್ಷಗಳ ಅವಧಿಗೆ ಪುನರಾವರ್ತನೆಯಾಗಲು ಅವಕಾಶವಿರುವುದಿಲ್ಲ. ಸಂಘದ ಕಾರ್ಯಕಾರಿ ಸಮಿತಿಯು ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮಗಳನ್ನು ಸಮವಾಗಿ ಪ್ರತಿನಿಧಿಸುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಭಾರತ್ ಜೋಡೋ ಯುವ ಸಂಘಗಳ ಉದ್ದೇಶ, ರಚನೆ, ಕಾರ್ಯವ್ಯಾಪ್ತಿ ಹಾಗೂ ಯುವಜನರನ್ನು ಸಂಘಟಿಸಿ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸುವ ಕುರಿತು ಚರ್ಚಿಸಲಾಯಿತು. ಯುವಜನರಲ್ಲಿ ದೇಶಭಕ್ತಿ, ಸಾಮಾಜಿಕ ಜವಾಬ್ದಾರಿ, ರಾಷ್ಟಿçÃಯ ಏಕತೆ ಹಾಗೂ ಸಹೋದರತ್ವದ ಭಾವನೆಗಳನ್ನು ಬೆಳೆಸುವ ನಿಟ್ಟಿನಲ್ಲಿ ಸಂಘಗಳ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಶರಣು ಗೋಗೇರಿ ಮಾತನಾಡಿ ಯುವಜನರಲ್ಲಿ ಕ್ರೀಡೆ, ಸಂಸ್ಕöÈತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಾಸರಿ ೬೦೦೦ ಸಂಘಗಳನ್ನು ಹಾಗೂ ನಗರ ವಾರ್ಡ್ ಗಳ ವ್ಯಾಪ್ತಿಯಲ್ಲಿ ಸರಾಸರಿ ೪೦೦೦ ಸಂಘಗಳನ್ನು ಹೀಗೆ ಒಟ್ಟು ೧೦,೦೦೦ ಭಾರತ್ ಜೋಡೋ ಯುವ ಸಂಘಗಳನ್ನು ಪ್ರತಿ ಸಂಘಕ್ಕೆ ಪ್ರತಿ ವರ್ಷ ತಲ್ಲಾ ರೂ. ೧೦.೦೦ ಲಕ್ಷಗಳ ಅನುದಾನದ ನೀಡಲಾಗುತ್ತದೆ ಎಂದರು.
ಃಎಙS ಪೋರ್ಟಲ್ ಅಥವಾ ಮೊಬೈಲ್ ಆಪ್ ಮೂಲಕ ಅಥವಾ ಗ್ರಾಮ ಪಂಚಾಯಿತಿ ಹಾಗೂ ನಗರ ಪ್ರದೇಶಗಳಲ್ಲಿ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ನಾಗರೀಕ ಸೇವಾ ಕೇಂದ್ರಗಳ ಸಹಾಯದಿಂದ ಅರ್ಜಿ ಸಲ್ಲಿಸಬಹುದು. ಪ್ರತಿಯೊಬ್ಬ ಸದಸ್ಯರ ನೋಂದಣಿಗೆ ಆಧಾರ್ ಕಡ್ಡಾಯವಾಗಿದೆ. ೧೬ ವರ್ಷದಿಂದ ೩೫ ವರ್ಷದವರೆಗಿನ ಯುವಕ ಯುವತಿಯರು ಇರಬೇಕು. ಘಟಕ ರಚನೆಗೆ ಕನಿಷ್ಠ ೧೦೦ ಯುವ ಸದಸ್ಯರಿರಬೇಕು. ಪ್ರತಿ ಸದಸ್ಯನಿಗೆ ನೋಂದಣಿ ಶುಲ್ಕ ರೂ. ೧೦/- ಇದ್ದು ಪ್ರತಿಯೊಂದು ಸಂಘವನ್ನು ಕರ್ನಾಟಕ ಸೊಸೈಟಿಸ್ ರಿಜಿಸ್ಟೆçÃಷನ್ ಆಕ್ಟ್ ೧೯೬೦ ಅಡಿಯಲ್ಲಿ ನೋಂದಾಯಿಸಬೇಕು. ಅರ್ಜಿದಾರರು ಅದೇ ಗ್ರಾಮದ ಪಂಚಾಯಿತಿ ವಾರ್ಡಿನ ಸಾಮಾನ್ಯ ನಿವಾಸಿ ಆಗಿರಬೇಕು. ಪ್ರತಿಯೊಬ್ಬ ಸದಸ್ಯರು ಒಂದು ಸಂಘಕ್ಕೆ ಮಾತ್ರ ಸದಸ್ಯರಾಗಲು ಅರ್ಹರಿರುತ್ತಾರೆ ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಶರಣು ಗೋಗೇರಿ ಸಭೆಯಲ್ಲಿ ತಿಳಿಸಿದರು.
ಪ್ರತಿಯೊಂದು ಸಂಘವು ವಾರ್ಷಿಕ ಚಟುವಟಿಕೆಗಳ ಕ್ಯಾಲೆಂಡರ್ ತಯಾರಿಸಿ ಕ್ರೀಡೆ, ಫಿಟ್‌ನೆಸ್, ಸಮುದಾಯ ಅಭಿವೃದ್ಧಿ, ಪರಿಸರ ಸಂರಕ್ಷಣೆ, ಕೌಶಲ್ಯಾಭಿವೃದ್ಧಿ ಇತ್ಯಾದಿ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವುದು. ಸಂಘದ ಕಾರ್ಯಕ್ರಮಗಳಿಗೆ ಸಂಬAಧಿಸಿದ ಪಾರದರ್ಶಕ ಲೆಕ್ಕಪತ್ರ | ನಿರ್ವಹಣೆ ಹಾಗೂ ಮೇಲ್ಕಂಡ ಕ್ಷೇತ್ರಗಳಲ್ಲಿನ ಪ್ರತಿಯೊಂದು ಚಟುವಟಿಕೆಯ ವರದಿಯನ್ನು ಜಿಯೋ-ಟ್ಯಾಗ್ ಮಾಡಿದ ಫೋಟೋಗಳೊಂದಿಗೆ ಃಎಙS ಸಾಫ್‌ಟ್‌ವೇರ್‌ನಲ್ಲಿ ಅಪ್‌ಲೋಡ್ ಮಾಡಬೇಕು.
ಜವಾಬ್ದಾರಿಯುತವಾಗಿ ಅನುದಾನವನ್ನು ಬಳಸಿ ಪಾರದರ್ಶಕತೆಯನ್ನು ಕಾಪಾಡುವುದು. ಸರ್ಕಾರದ / ಸಮುದಾಯದ ಕಾರ್ಯಕ್ರಮಗಳಲ್ಲಿ ಸಕ್ರಿಯ ಸಹಯೋಗ ಇರಬೇಕು.ಸಮುದಾಯದಲ್ಲಿ ಏಕತೆ, ಸಾಮರಸ್ಯ ಮತ್ತು ಶಿಸ್ತಿನ ಕಾರ್ಯ ನಿರ್ವಹಣೆಯನ್ನು ಖಚಿತಪಡಿಸುವುದು. ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಕೆಲಸ ಮಾಡುವುದು,ಬಾಲ್ಯ ವಿವಾಹಗಳ ವಿರುದ್ಧ ಜಾಗೃತಿ ಮೂಡಿಸುವುದು, ಅಪೌಷ್ಟಿಕತೆಯನ್ನು ಹೋಗಲಾಡಿಸಲು ಕ್ರಮವಹಿಸಬೇಕು. ಘಟಕಗಳ ನೊಂದಣಿ ಮತ್ತು ಸಾಪ್ಟವೇರ್ ಸಜ್ಜುಗೊಳಿಸುವಿಕೆಗೆ ೩೧ ಜುಲೈ ೨೦೨೬ ರೊಳಗೆ ನೊಂದಣಿ ಮಾಡಿಸಬೇಕು ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಶರಣು ಗೋಗೇರಿ ತಿಳಿಸಿದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ. ಆರ್, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಸಿ. ಆರ್. ಮುಂಡರಗಿ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
































