
ಸೈದಾಪುರ:ಜೂ.೧೪:ಬಾಲಕಾರ್ಮಿಕ ಪದ್ಧತಿ ಸಮಾಜಕ್ಕೆ ಒಂದು ಶಾಪವಾಗಿದ್ದು, ಪ್ರತಿಯೊಂದು ಮಗುವಿಗೂ ಶಿಕ್ಷಣ ಪಡೆಯುವ ಹಕ್ಕಿದೆ. ಮಕ್ಕಳನ್ನು ದುಡಿಮೆಗೆ ತಳ್ಳದೆ ಶಾಲಾ-ಕಾಲೇಜುಗಳಿಗೆ ಕಳುಹಿಸುವುದು ಪ್ರತಿಯೊಬ್ಬ ಪೋಷಕರ ಮತ್ತು ಸಮಾಜದ ಜವಾಬ್ದಾರಿಯಾಗಿದೆ ಎಂದು ಪ್ರಾಂಶುಪಾಲ ಹಂಪಣ್ಣ ಸಜ್ಜನಶೆಟ್ಟಿ ಅಭಿಪ್ರಾಯಪಟ್ಟರು.
ಪಟ್ಟಣದ ವಿದ್ಯಾ ವರ್ಧಕ ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಮಾತನಾಡಿದರು. ಪ್ರಜ್ಞಾವಂತರಾದ ನಾವುಗಳು ನಮ್ಮ ಸುತ್ತಮುತ್ತಲ್ಲಿ ಬಾಲಕಾರ್ಮಿಕರು ಕಂಡು ಬಂದಲ್ಲಿ ನೇಮಿಸಿಕೊಂಡ ಮಾಲೀಕರು ಹಾಗೂ ಪೋಷಕರಿಗೆ ತಿಳುವಳಿಕೆ ಹೇಳಿ ಮಗುವನ್ನು ಶಾಲೆಗೆ ಸೇರಿಸುವ ಕೆಲಸ ಮಾಡಬೇಕು. ಈ ವಿದಧ ಪ್ರಮಾಣ ಮಾಡುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರಯತ್ನ ಮಾಡೋಣ ಎಂದು ಹೇಳಿದರು.
ಬಾಲಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳು, ಮಕ್ಕಳ ಹಕ್ಕುಗಳು ಹಾಗೂ ಶಿಕ್ಷಣದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.
ವಿದ್ಯಾರ್ಥಿಗಳಿಗೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಉಪನ್ಯಾಸಕ ಭೀಮರೆಡ್ಡಿ ಪ್ರಮಾಣ ವಚನ ಬೋದಿಸಿದರು. ಡಿ.ಎಲ್.ಇಡಿ ಕಾಲೇಜಿನ ಪ್ರಾಂಶುಪಾಲ ಕರಬಸಯ್ಯ ದಂಡಿಗಿಮಠ, ಉಪನ್ಯಾಸಕರಾದ ಭೀಮರೆಡ್ಡಿ, ಶ್ವೇತಾ ರಾಘವೇಂದ್ರ ಪೂರಿ. ಸೌಭಾಗ್ಯ. ಲಕ್ಷ್ಮೀ, ಮೇಘಾ, ಲಕ್ಷಿö್ಮÃ.ಪಿ, ವಿದ್ಯಾರ್ಥಿಗಳು ಸೇರಿದಂತೆ ಇತರರು ಪ್ರಮಾಣ ವಚನ ಸ್ವೀಕರಿಸಿದರು.




























