Home ಜಿಲ್ಲೆ ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ:

ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ:


ಧಾರವಾಡ,ಜು.೨೧: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಯಾದ ವಿ.ಅನ್ಬುಕುಮಾರ್ ಅವರು ಕೆ.ಸಿ.ಡಿ ಕಾಲೇಜ್ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಸುಮಾರು ೫೦೦ ವಿದ್ಯಾರ್ಥಿಗಳಿಂದ ಮಾನವ ಸರಪಳಿ (ಸ್ವೀಪ್ ಚಟುವಟಿಕೆ) ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.


೧೮ ವರ್ಷ ವಯಸ್ಸು ಪೂರ್ಣಗೊಳಿಸಿದ ಯುವ ಮತದಾರರು ಈ ಅಭಿಯಾನದ ಪ್ರಯೋಜನ ಪಡೆದು, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಎಲ್ಲರೂ ಸಹಕರಿಸಬೇಕೆಂದು ಅವರು ಹೇಳಿದರು.


ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿ ಸಮಗ್ರ ಪರಿ?À್ಕರಣೆ (SIಖ) ಕಾರ್ಯಕ್ರಮ ಯಶಸ್ವಿಯಾಗಿ ಸಾಗುತ್ತಿದ್ದು, ರಾಜ್ಯದಲ್ಲಿ ಸುಮಾರು ಐದೂವರೆ ಕೋಟಿ ಮತದಾರರ ಪೈಕಿ ಮೂರುವರೆ ಕೋಟಿ ಮತದಾರರ ಪರಿಶೀಲನಾ ಕಾರ್ಯ ಪೂರ್ಣಗೊಂಡಿದೆ ಎಂದು ತಿಳಿಸಿದರು.


ಈ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿರುವ ರಾಜ್ಯದ ೫೯ ಸಾವಿರ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಅಭಿನಂದನೆ ಹಾಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಜೊತೆಗೆ, ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡುತ್ತಿರುವ ಜಿಲ್ಲಾಧಿಕಾರಿಗಳು, ಚುನಾವಣಾ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ (ಸಿಇಒ) ಸೇವೆಯನ್ನು ಅಭಿನಂದಿಸಲು ಇ?À್ಟಪಡುತ್ತೇನೆ ಎಂದು ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್ ಅವರು ಹೇಳಿದರು.


ಧಾರವಾಡ ಜಿಲ್ಲಾಡಳಿತವು ಸುಮಾರು ೫೦೦ ವಿದ್ಯಾರ್ಥಿಗಳಿಂದ ಇಂದು ಮಾನವ ಸರಪಳಿ ನಿರ್ಮಿಸುವ ಮೂಲಕ ಮತದಾರರ ಪಟ್ಟಿಗಳ ವಿಶೇ?À ಸಮಗ್ರ ಪರಿ?À್ಕರಣೆ-೨೦೨೬ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಿದೆ.


ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್.ಆರ್., ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಪ್ರೊಬೆ?Àನರಿ ಐಎಎಸ್ ಅಧಿಕಾರಿ ಅನುಪ್ರೀಯಾ ಸಾಕ್ಯಾ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ರುದ್ರೇಶ್ ಎಸ್. ಘಾಳಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ಬಿ.ಎಸ್. ರಾಠೋಡ. ಎಲ್ಲಾ ವಿಧಾನ ಸಭಾ ಕ್ಷೇತ್ರಗಳ ಮತಗಟ್ಟೆ ಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆಯಗಳ ಅಧಿಕಾರಿಗಳು, ಶಾಲಾ-ಕಾಲೇಜು ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಇದ್ದರು.
ಜಿಲ್ಲಾ ಯೋಜನಾ ಸಮನ್ವಯ ಅಧಿಕಾರಿ ಎಸ್. ಎಂ ಹೂಡೆದಮನಿ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.