Home ಜಿಲ್ಲೆ ಕಲಬುರಗಿ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಗೆ ಪ್ರತಿಯೊಬ್ಬರೂ ಸಹಕರಿಸಬೇಕು

ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಗೆ ಪ್ರತಿಯೊಬ್ಬರೂ ಸಹಕರಿಸಬೇಕು

ಕರಜಗಿ :ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ ೩೦ರಿಂದ ಜುಲೈ ೨೯ರವರೆಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮ ನಡೆಯಲಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವುದು ಹಾಗೂ ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸುವುದು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಮಹತ್ವವನ್ನು ಸಾರ್ವಜನಿಕರಿಗೆ ತಿಳಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.ಎಂದು ಅಫಜಲಪುರ ತಾಲೂಕು ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಶಂಕರ ರಾಠೋಡ ಹೇಳಿದರು.
ಅವರು ಅಫಜಲಪುರ ಪಟ್ಟಣದಲ್ಲಿ ಚುನಾವಣಾ ಆಯೋಗ, ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ,ತಾಲೂಕು ಆಡಳಿತ ಹಾಗೂ ತಾಲೂಕು ಸ್ವೀಪ್ ಸಮಿತಿ ಅಫಜಲಪುರ ಇವರ ಸಂಯುಕ್ತ ಆಶ್ರಯದಲ್ಲಿ ಮತದಾರ ರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್.)-೨೦೨೬ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು) ಮನೆ ಮನೆಗೆ ಭೇಟಿ ನೀಡಿ ಗಣತಿದಾರರ ನಮೂನೆ (ಇಟಿumeಡಿಚಿಣioಟಿ ಈoಡಿm) ಹಾಗೂ ಘೋಷಣಾ ಪತ್ರ (ಆeಛಿಟಚಿಡಿಚಿಣioಟಿ ಈoಡಿm) ವಿತರಿಸಲಿದ್ದಾರೆ.
ಅರ್ಹ ಮತದಾರರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಹಾಗೂ ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಲು ಈ ಅವಕಾಶವನ್ನು,ಸದುಪಯೋಗಪಡಿಸಿಕೊಳ್ಳಬೇಕು
ಈ ಮತಪಟ್ಟಿ ಪರಿಷ್ಕರಣೆಯಲ್ಲಿ ಯಾವೊಬ್ಬ ನಾಗರಿಕರು ವಂಚಿತರಾಗಬಾರದು,ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು.ಚುನಾವಣಾ ಆಯೋಗದ ನಿರ್ದೇಶನದಂತೆ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಕಾರ್ಯಕ್ರಮ ಹಮ್ಮಿಕೊಂಡಿದ್ದು ಬೂತ್ ಮಟ್ಟದ ಅಧಿಕಾರಿಗೆ ಅಗತ್ಯ ಮಾಹಿತಿ ನೀಡಲು ಸಹಕರಿಸಬೇಕು
ಈಗಾಗಲೇ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಈ ಕುರಿತು ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ.ಅಭಿವೃದ್ಧಿ ಅಧಿಕಾರಿಗಳು ಕಾರ್ಯದರ್ಶಿಗಳು ಕರವಸೂಲಿಗಾರರು ಡಿಇಒಗಳು ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು.ಎಂದು ಹೇಳಿದರು.
ತಹಸಿಲ್ದಾರ ಸಂಜೀವಕುಮಾರ ದಾಸರ ಮಾತನಾಡಿ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (ಎಸ್‌ಐಆರ್) ರಾಜ್ಯದಾದ್ಯಂತ ಜೂ.೩೦ರಿಂದ ಪ್ರಾರಂಭಗೊAಡಿದ್ದು, ಮತಗಟ್ಟೆ ಮಟ್ಟದ ಅಧಿಕಾರಿ (ಬಿಎಲ್‌ಒ)ಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ
ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿದಾಗ, ಎನ್ಯುಮರೇಷನ್ ಅರ್ಜಿಯನ್ನು ಭರ್ತಿ ಮಾಡಿ, ಈ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು.ಮತದಾರರ ಪಟ್ಟಿಯಲ್ಲಿ ಇರುವ ಹೆಸರು ಪರಿಶೀಲನೆ, ತಿದ್ದುಪಡಿ, ಹೊಸ ಮತದಾರರ ಹೆಸರು ಸೇರ್ಪಡೆ, ಮೃತಪಟ್ಟವರು ಹಾಗೂ ಸ್ಥಳಾಂತರಗೊAಡವರ ಹೆಸರು ಪಟ್ಟಿಯಿಂದ ತೆಗೆದುಹಾಕುವ ಪ್ರಕ್ರಿಯೆಯೂ ಇದೇ ಅವಧಿಯಲ್ಲಿ ನಡೆಯಲಿದೆ. ಗುರುತಿನ ಚೀಟಿಯಲ್ಲಿ ದೋಷಗಳು ಕಂಡು ಬಂದಲ್ಲಿ ತಿದ್ದುಪಡಿಗೆ ಅವಕಾಶವಿದೆ.ಬೂತ್ ಮಟ್ಟದ ಅಧಿಕಾರಿಗಳು ಮನೆಗೆ ಬಂದಾಗ ಗ್ರಾಮಸ್ಥರು ಅಗತ್ಯ ಮಾಹಿತಿಯನ್ನು ಒದಗಿಸಬೇಕು. ಇದರಲ್ಲಿ ಲೋಪ ದೋಷಗಳಿದ್ದರೆ ತಿದ್ದುಪಡಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು..
ತಾಲೂಕು ಪಂಚಾಯತ ಕಾರ್ಯಾಲಯದಿಂದ ಆರಂಭವಾದ ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ ಜಾಥಾ ಬಸವೇಶ್ವರ ವೃತ್ತ ಅಂಬೇಡ್ಕರ್ ವೃತ್ತದ ಮೂಲಕ ತಹಸಿಲ್ದಾರ ಕಚೇರಿವರೆಗೆ ಸಾಗಿತು.ಜಾಥಾದಲ್ಲಿ ಸಹಾಯಕ ನಿರ್ದೇಶಕ ಶಿವಶಂಕರಯ್ಯ ಸ್ವಾಮಿ ಯೋಜನಾಧಿಕಾರಿ ರೇಣುಕಾ ಮೇಡಂ ಇರ್ಫಾನ್ ಜಾಗಿರದಾರ ಐಇಸಿ ಸಂಯೋಜಕಿ ಶೋಭಾ ಕಣಮಸ್ಕರ ಸೇರಿದಂತೆ ತಾಲೂಕಿನ ಎಲ್ಲಾ ೨೮ ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು ಕಾರ್ಯದರ್ಶಿಗಳು ಎಸ್ ಡಿ ಎಗಳು ಕರವಸೂಲಿಗಾರರು ಡಿಇಒಗಳು ಸ್ವಸಹಾಯ ಸಂಘಗಳ ಮಹಿಳೆಯರು ಕಾಯಕ ಮಿತ್ರರು ಉಪಸ್ಥಿತರಿದ್ದರು