Home ಜಿಲ್ಲೆ ಪ್ರತಿಯೊಬ್ಬರು ಸಸಿ ನೆಟ್ಟು ಪೋಷಣೆ ಮಾಡಬೇಕು:ಗೂಳಪ್ಪ ಮಲ್ಹಾರ

ಪ್ರತಿಯೊಬ್ಬರು ಸಸಿ ನೆಟ್ಟು ಪೋಷಣೆ ಮಾಡಬೇಕು:ಗೂಳಪ್ಪ ಮಲ್ಹಾರ

ಸೈದಾಪುರ:ಜೂ.8:ಪರಿಸರದ ಸಮತೋಲನ ಕಾಪಾಡಲು ಪ್ರತಿಯೊಬ್ಬರು ಕನಿಷ್ಟ ಒಂದು ಸಸಿಯನ್ನು ನೆಟ್ಟು ಅದರ ಪೋಷಣೆ ಮಾಡಬೇಕು ಎಂದು ಸಮಾಜ ವಿಜ್ಞಾನ ಶಿಕ್ಷಕರ ಗೂಳಪ್ಪ.ಎಸ್.ಮಲ್ಹಾರ ಅಭಿಪ್ರಾಯಪಟ್ಟರು.
ಪಟ್ಟಣದ ವಿದ್ಯಾ ವರ್ಧಕ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮನೆಗೊಂದು ಮಗು ಆ ಮಗುವಿಗೊಂದು ಮರ ನೆಡಬೇಕು. ಅಂದಾಗ ಮಾತ್ರ ಉತ್ತಮ ಜೀವನ ನಮ್ಮದಾಗುತ್ತದೆ ಎಂದು ಕರೆ ನೀಡಿದರು.
ವಿಜ್ಞಾನ ಶಿಕ್ಷಕ ರಾಚಯ್ಯ ಸ್ವಾಮಿ ಬಾಡಿಯಾಲ ಮಾತನಾಡಿ, ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಬ್ದಾರಿಯಾಗಿದೆ. ಬದಲಾದ ನಮ್ಮ ಜೀವನ ವಿಧಾನ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಪ್ಲಾಸ್ಟಿಕ ವಸ್ತುಗಳನ್ನು ಬಳಸಬಾರದು. ಪ್ರಜ್ಞಾವಂತರು ಪರಿಸರದ ಬಗಗೆ ಹೆಚ್ಚಿನ ಕಾಳಜಿ ವಹಿಸಿ ಅದರ ಬಗಗೆ ಜಾಗೃತಿ ಮೂಡಿಸಿದ ಪರಿಸರ ರಕ್ಷಣೆಗೆ ಪ್ರಯತ್ನ ಮಾಡಿದಾಗ ಮಾತ್ರ ಉತ್ತಮ ಸಮಾಜವನ್ನು ಕಾಣಲು ಸಾಧ್ಯವಿದೆ ಎಂದು ಹೇಳಿದರು. ಇದಕ್ಕೂ ಮುಂಚೆ ಪ್ರಬಂಧ ಸ್ಪರ್ಧೇಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಣೆ ಮಾಡಲಾಯಿತು.
ಮುಖ್ಯಗುರು ಲಿಂಗಾರೆಡ್ಡಿ ನಾಯಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಜಿ.ಎಂ.ಗುರುಪ್ರಸಾದ, ಕರಬಸಯ್ಯ ದಂಡಿಗಿಮಠ, ರಾಚಯ್ಯ ಸ್ವಾಮಿ ಬಾಡಿಯಾಲ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್‍ದ ಮೇಲ್ವಿಚಾರಕ ಬೀರಪ್ಪ, ಕೃಷಿಅಧಿಕಾರಿ ಮಹಮ್ಮದ ಅಲಿ, ಸೇವಾ ಪ್ರತಿನಿಧಿಗಳಾದ ರೇಣುಕಾ, ಪಲ್ಲವಿ ಹಾಗೂ ಹೊನ್ನಪ್ಪ, ತೋಟೇಂದ್ರ, ನಿಜಗುಣಚಾರ್ಯ ಸೇರಿದಂತೆ ಇತರರಿದ್ದರು. ಶಿಕ್ಷಕ ಅಭಿಲಾಷ ನಿರೂಪಿಸಿ, ವಂದಿಸಿದರು.