ಪ್ರತಿಯೊಬ್ಬರು ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ


ನವಲಗುಂದ,ಜ.೩೦:
ಪ್ರತಿಯೊಬ್ಬರು ಮೊಬೈಲ್ ಸ್ಕಿçÃನ್ ಗೆ ಗಾರ್ಡ್ ಹಾಕಿಸಿ ಸುರಕ್ಷೆಯಿಂದ ಇಟ್ಟುಕೊಳ್ಳುತ್ತೇವೆ ಆದರೆ ಹೆಲ್ಮೆಟ್ ಧರಿಸದೇ ವಾಹನ ಚಾಲನೆ ಮಾಡಿ ನಮ್ಮ ಜೀವದ ರಕ್ಷಣೆ ಮಾಡಿಕೊಳ್ಳುವುದಿಲ್ಲ. ಕಡ್ಡಾಯವಾಗಿ ಪ್ರತಿಯೊಬ್ಬರು ಹೆಲ್ಮೆಟ್ ಧರಿಸಿ ವಾಹನ ಚಲಾವಣೆ ಮಾಡಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶರಾದ ಮಂಜುನಾಥ ಪಾನಘಂಟಿ ಹೇಳಿದರು.


ತಾಲ್ಲೂಕು ಕಾನೂನು ಸೇವಾ ಸಮಿತಿಯಿಂದ ಹಮ್ಮಿಕೊಂಡ ಬೇಟಿ ಬಚಾವೋ ಬೇಟಿ ಪಡಾವೋ, ಬಾಲ್ಯ ವಿವಾಹ ಮುಕ್ತ ಭಾರತ ಹಾಗೂ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಮಹಿಳಾ ಇಲಾಖೆಯ ಧ್ಯೇಯದಂತೆ ಹೆಣ್ಣು ಮಕ್ಕಳ ಭ್ರೂಣ ಹತ್ಯೆ ನಿಲ್ಲಿಸಬೇಕು, ಉತ್ತಮ ಶಿಕ್ಷಣ ನೀಡಬೇಕು. ಸರ್ಕಾರ ಹಲವಾರು ಯೋಜನೆ ರೂಪಿಸಿದೆ ಅವೆಲ್ಲವುಗಳನ್ನು ಗ್ರಾಮೀಣ ಮಟ್ಟದಲ್ಲಿ ತಲುಪಿಸುವ ಕೆಲಸ ಆಗಬೇಕು ಎಂದರು.


ದಿವಾಣಿ ನ್ಯಾಯಾಧೀಶರಾದ ನವೀನ ಡಿಸೋಜಾ ಅವರು ವಾಹನ ಸವಾರರು ಚಾಲನೆ ಮಾಡುವಾಗ ನಿಯಮಗಳನ್ನು ಅನುಸರಿಸಬೇಕು. ಮಾರುಕಟ್ಟೆಗೆ ಬಂದಾಗ ಕಂಡ ಕಂಡಲ್ಲಿ ವಾಹನ ನಿಲುಗಡೆ ಮಾಡಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಮುಂಜ್ರಾಗತೆ ವಹಿಸಬೇಕು ಎಂದರು.


ನಂತರ ಕೋರ್ಟ್ ಅವರಣದಿಂದ ಪ್ರಮುಖ ಬೀದಿಗಳಲ್ಲಿ ಜಾಥಾ ಮೆರವಣಿಗೆ ಜರುಗಿತು. ತಹಶೀಲ್ದಾರ ಸುಧೀರ ಸಾವುಕಾರ, ಪುರಸಭೆ ಮುಖ್ಯಾಧಿಕಾರಿ ಶರಣು ಪೂಜಾರ, ಸಿಡಿಪಿಓ ಗಾಯತ್ರಿ ಪಾಟೀಲ, ಸಿಪಿಐ ರವಿಕುಮಾರ ಕಪ್ಪತ್ತನವರ, ಪಿಎಸ್‌ಐ ಜನಾರ್ಧನ ಭಟ್ರಳ್ಳಿ ಸೇರಿದಂತೆ ಅಧಿಕಾರಿಗಳು ಮತ್ತು ವಿವಿಧ ಶಾಲಾ ಮಕ್ಕಳು ಪಾಲ್ಗೊಂಡಿದ್ದರು.