Home ಜಿಲ್ಲೆ ಬಾಲ್ಯ ವಿವಾಹ-ದೇವದಾಸಿ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ: ಕುಲಪತಿ ವಿಜಯಾ ಕೋರಿಶೆಟ್ಟಿ

ಬಾಲ್ಯ ವಿವಾಹ-ದೇವದಾಸಿ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ: ಕುಲಪತಿ ವಿಜಯಾ ಕೋರಿಶೆಟ್ಟಿ

ವಿಜಯಪುರ:ಮಾ.13: ಬಾಲ್ಯ ವಿವಾಹ ಹಾಗೂ ದೇವದಾಸಿ ಪದ್ಧತಿ ಸಮಾಜದ ಅಭಿವೃದ್ಧಿಗೆ ದೊಡ್ಡ ಅಡ್ಡಿ. ಅವುಗಳ ನಿರ್ಮೂಲನೆಗೆ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಮಹಿಳಾ ವಿವಿ ಕುಲಪತಿ ಪೆÇ್ರ.ವಿಜಯಾ ಬಿ. ಕೋರಿಶೆಟ್ಟಿ ಕರೆ ನೀಡಿದರು.
ನಗರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ವಿಭಾಗ ಹಾಗೂ ಬೆಂಗಳೂರಿನ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಬಾಲ್ಯ ವಿವಾಹ ನಿಷೇಧ ಹಾಗೂ ದೇವದಾಸಿ ಪದ್ಧತಿ ನಿರ್ಮೂಲನೆ’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು
ಬಾಲ್ಯ ವಿವಾಹ ಶತಮಾನಗಳಿಂದಲೂ ನಡೆಯುತ್ತಾ ಬಂದ ಸಾಮಾಜಿಕ ಸಮಸ್ಯೆ ತಡೆಗೆ ಸರ್ಕಾರ ಹಲವು ಕಾನೂನು ಜಾರಿಗೆ ತಂದಿದೆ. ಇಂದಿಗೂ ಕೆಲವೆಡೆ ಬಾಲ್ಯ ವಿವಾಹಗಳು ನಡೆಯುತ್ತಿರುವುದು ವಿಷಾದನೀಯ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಬೆಂಗಳೂರಿನ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ನಿರ್ದೇಶಕ ಪೆÇ್ರ. ಸಿ.ಎಸ್. ಪಾಟೀಲ್ ಮಾತನಾಡಿ, ಮಹಿಳೆಯರನ್ನು ಗೌರವದಿಂದ ಕಾಣುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ. ವಿದ್ಯಾರ್ಥಿನಿಯರು ಬೇರೆ ಬೇರೆ ವಿಷಯಗಳಲ್ಲಿ ಪದವಿ ಪಡೆದರೂ ಸಹ ಕಾನೂನುಗಳನ್ಮು ಅರ್ಥೈಸಿಕೊಳ್ಳುವುದು ಅಗತ್ಯ ಎಂದರು.
ಕಾರ್ಯಕ್ರಮದಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ, ಪೆÇ್ರ. ವೆಂಕೋಬ, ಪೆÇ್ರ. ಲಕ್ಷ್ಮೀದೇವಿ ವೈ., ಚಂದ್ರಕಲಾ ಹಳ್ಳಿ, ಪೆÇ್ರ. ರಾಜು ಬಾಗಲಕೋಟ, ಪೆÇ್ರ. ನಾರಾಯಣ ಪವಾರ, ಪೆÇ್ರ. ಚಿಂತಾಮಣಿ, ಡಾ. ಗುರುರಾಜ, ಡಾ. ಕೆ.ಆರ್. ರಂಜಿತಾ, ಡಾ. ಉಜ್ವಲಾ ಸರನಗೌಡ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥ ಪೆÇ್ರ. ಎಂ. ನಾಗರಾಜ ಸ್ವಾಗತಿಸಿದರು. ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ಮುಖ್ಯಸ್ಥ ಡಾ. ರೇವಯ್ಯ ಒಡೆಯರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ರೂಪಾ ಇಂಗಳೆ ಕಾರ್ಯಕ್ರಮವನ್ನು ನಿರೂಪಿಸಿದರು. ಡಾ. ಚೈತನ್ಯ ಸಂಕೊಂಡ ವಂದಿಸಿದರು.

ಮೊದಲ ಗೋಷ್ಠಿಯಲ್ಲಿ ಗೋವಾದ ಪಣಜಿಯ ವಿ.ಎಂ. ಸಲಗಾಂವ್ಕರ್ ಕಾನೂನು ಕಾಲೇಜಿನ ಸಹ ಪ್ರಾಧ್ಯಾಪಕಿ ಪೆÇ್ರ. ಮೃಣ್ಮಯಿ ವೈದ್ಯೆ ‘ಬಾಲ್ಯ ವಿವಾಹ ನಿಷೇಧ’ ವಿಷಯದ ಕುರಿತು ಮಾತನಾಡಿ, ಬಾಲ್ಯ ವಿವಾಹವು ಕೇವಲ ಹೆಣ್ಣುಮಕ್ಕಳ ಸಮಸ್ಯೆಯಲ್ಲ, ಗಂಡುಮಕ್ಕಳಿಗೂ ಸಂಬಂಧಿಸಿದ ಸಾಮಾಜಿಕ ಸಮಸ್ಯೆಯಾಗಿದೆ. ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಬಾಲ್ಯ ವಿವಾಹಗಳು ಹೆಚ್ಚಾಗಿ ಕಂಡುಬರುತ್ತಿವೆ. ಸರ್ವೇಗಳ ಪ್ರಕಾರ 16 ನೂರು ಮಿಲಿಯನ್ ಮಕ್ಕಳು ಬಾಲ್ಯ ವಿವಾಹ ಪದ್ಧತಿಗೆ ಒಳಗಾಗಿದ್ದಾರೆ, ಬದುಕಿನ ಸಂತೋಷವನ್ನು ಹೆಣ್ಣುಮಕ್ಕಳು ಮದುವೆಯ ಮೂಲಕ ಕಳೆದುಕೊಳ್ಳುತ್ತಿದ್ದಾರೆ, ಎಂದರು.

ಎರಡನೇ ಗೋಷ್ಠಿಯಲ್ಲಿ ಗೋವಾದ ಪಣಜಿಯ ವಿ.ಎಂ. ಸಲಗಾಂವ್ಕರ್ ಕಾನೂನು ಕಾಲೇಜಿನ ಸಹ ಪ್ರಾಧ್ಯಾಪಕ ಬಾಬುಗೌಡ ಅವರು ‘ದೇವದಾಸಿ ಪದ್ಧತಿ ನಿರ್ಮೂಲನೆ’ ಕುರಿತು ಮಾತನಾಡಿ, ದೇವದಾಸಿ ಪದ್ಧತಿಯ ಉಗಮ, ಸಮಸ್ಯೆಗಳು ಹಾಗೂ ಈ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಮೂರನೇ ಗೋಷ್ಠಿಯಲ್ಲಿ ವಿವಿಧ ವಿಭಾಗಗಳ ಸಂಶೋಧನಾ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು, ಪ್ರಾಧ್ಯಾಪಕರು ಹಾಗೂ ಅತಿಥಿ ಉಪನ್ಯಾಸಕರು ‘ಬಾಲ್ಯ ವಿವಾಹ ನಿಷೇಧ ಹಾಗೂ ದೇವದಾಸಿ ಪದ್ಧತಿ ನಿರ್ಮೂಲನೆ’ ಕುರಿತು ಪ್ರಬಂಧಗಳನ್ನು ಮಂಡಿಸಿದರು.