Home ಜಿಲ್ಲೆ ಕಲಬುರಗಿ ಅ. 2ಕ್ಕೆ ಭೂಮಾಪಕರ ಮತ್ತು ಅ.4ಕ್ಕೆ ಗ್ರಾಮ ಆಡಳಿತಾಧಿಕಾರಿಗಳನೇಮಕಾತಿಗೆ ಪರೀಕ್ಷೆ: ಪಾರದರ್ಶಕವಾಗಿ ಪರೀಕ್ಷೆ ನಡೆಸುವಂತೆ ಡಿ.ಸಿ....

ಅ. 2ಕ್ಕೆ ಭೂಮಾಪಕರ ಮತ್ತು ಅ.4ಕ್ಕೆ ಗ್ರಾಮ ಆಡಳಿತಾಧಿಕಾರಿಗಳನೇಮಕಾತಿಗೆ ಪರೀಕ್ಷೆ: ಪಾರದರ್ಶಕವಾಗಿ ಪರೀಕ್ಷೆ ನಡೆಸುವಂತೆ ಡಿ.ಸಿ. ಸೂಚನೆ

ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭೂಮಾಪಕರ ಹುದ್ದೆ ನೇಮಕಾತಿಗೆ ಬರುವ ಅಕ್ಟೋಬರ್ 2 ರಂದು ಮತ್ತು ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಗೆ ಅಕ್ಟೋಬರ್ 4 ರಂದು ಕಲಬುರಗಿ ನಗರದಾದ್ಯಂತ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಲಿಖಿತ ಪರೀಕ್ಷೆ ನಡೆಯಲಿದ್ದು, ಯಾವುದೇ ಅಕ್ರಮಕ್ಕೆ ಅವಕಾಶ ನೀಡದೆ ಶಾಂತಿಯುತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕೆಂದು ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಡಿ.ಸಿ. ಇಕ್ರಂ ಶರೀಫ್ ಖಡಕ್ ಸೂಚನೆ ನೀಡಿದರು.
ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ಅಕ್ಟೋಬರ್ 2 ರಂದು ಭೂಮಾಪಕರ ನೇಮಕಾತಿಗೆ ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಅವಧಿಯಲ್ಲಿ ಕಲಬುರಗಿ ನಗರದ ಸುಮಾರು 9 ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದ್ದು, ಸುಮಾರು 4,856 ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.
ಅದೇ ರೀತಿ ಅಕ್ಟೋಬರ್ 4 ರಂದು ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಗೆ ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಅವಧಿಯಲ್ಲಿ ಕಲಬುರಗಿ ನಗರದ ಸುಮಾರು 55 ಕೇಂದ್ರದಲ್ಲಿ 20,781 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇವೆರಡು ಪರೀಕ್ಷೆಗಳು ಸುಸೂತ್ರವಾಗಿ ನಡೆಯುವಂತೆ ಎಲ್ಲಾ ರೀತಿಯ ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಡಿ.ಸಿ. ನಿರ್ದೇಶನ ನೀಡಿದರು.
ಅಕ್ಟೋಬರ್ 2ರ ಪರೀಕ್ಷೆಗೆ ತಲಾ 9 ಜನ ರೂಟ್ ಅಧಿಕಾರಿ, ವಸ್ತ ಸಂಹಿತೆ ಅಧಿಕಾರಿ, ವೀಕ್ಷಕರನ್ನಾಗಿ ನಿಯೋಜಿಸಿದೆ. ಇದಲ್ಲದೆ ಎರಡು ಫ್ಲೈಯಿಂಗ್ ಸ್ಕ್ವಾಡ್ ಸಹ ರಚಿಸಿದೆ. ಅದೇ ರೀತಿ ಅ. 4ರ ಪರೀಕ್ಷೆಗೆ 48 ಜನ ರೂಟ್ ಅಧಿಕಾರಿ, ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೆ ವಸ್ತ ಸಂಹಿತೆ ಅಧಿಕಾರಿ, ವೀಕ್ಷಕರು ಇರಲಿದ್ದಾರೆ. ಇದರ ಜೊತೆಗೆ 11 ಫ್ಲೈಯಿಂಗ್ ಸ್ಕ್ವಾಡ್ ಗಳು ನಕಲು ತಡೆಗ್ಠಲು ಗಸ್ತು ತಿರುಗಲಿವೆ ಎಂದು ಡಿ.ಸಿ. ತಿಳಿಸಿದರು.
ಪರೀಕ್ಷೆಗೆ ಮುನ್ನವೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಕೊಠಡಿಯಲ್ಲಿನ ಗಾಳಿ ಬೆಳಕು, ವಿದ್ಯುತ್ ವ್ಯವಸ್ಥೆ, ಮೇಜಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಲಭ್ಯ ಇರುವುದನು ಖಾತ್ರಿಪಡಿಸಿಕೊಳ್ಳಬೇಕು. ಒಟ್ಟಿನಲ್ಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಯಾವುದೇ ರೀತಿಯ ಅನಾನುಕೂಲವಾಗದಂತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದರು.
ಮೊಬೈಲ್ ಸೇರಿದಂತೆ ಎಲೆಕ್ಟ್ರಾನಿಕ್ ಸಾಧನ ನಿμÉೀಧ: ಮೋಬೈಲ್, ಬ್ಲೂಟೂಥ್, ಮೈಕ್ರೋಚಿಪ್, ಗಡಿಯಾರ, ಇಯರ್ ಫೆÇೀನ್, ಪೇಜರ್, ಕ್ಯಾಲಕುಲೇಟರ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಸಾಧನಗಳು ಮತ್ತು ಪಠ್ಯ ಸಾಮಗ್ರಿಗಳು ಪರೀಕ್ಷೆ ಕೇಂದ್ರಕ್ಕೆ ತೆಗೆದುಕೊಂಡು ಹೋಗುವುದನ್ನು ಸಂಪೂರ್ಣವಾಗಿ ನಿμÉೀಧಿಸಲಾಗಿದೆ. ಅಲ್ಲದೆ ಕೇಂದ್ರದ ಸುತ್ತ 200 ಮೀಟರ್ ಪ್ರದೇಶ ನಿμÉೀಧಿತ ಪ್ರದೇಶವೆಂದು ಘೋಷಿಸಲಾಗುವುದು ಎಂದು ಡಿ.ಸಿ. ಇಕ್ರಂ ಶರೀಫ್ ತಿಳಿಸಿದರು.
ವೆಬ್ ಕಾಸ್ಟಿಂಗ್ ಕಣ್ಗಾವಲಿನಲ್ಲಿ ಪರೀಕ್ಷೆ: ಪರೀಕ್ಷೆಯಲ್ಲಿ ಯಾವುದೇ ಹಂತದಲ್ಲಿ ನಕಲು, ಅಕ್ರಮಕ್ಕೆ ಇಲ್ಲಿ ಅವಕಾಶ ನೀಡಬಾರದು. ಪ್ರಶ್ನೆ ಪತ್ರಿಕೆ ತೆರೆಯುವುದರಿಂದ ಹಿಡಿದು ಪರೀಕ್ಷೆ ಪ್ರಕ್ರಿಯೆ ಸಂಪೂರ್ಣ ಮುಗಿಯುವವರೆಗೆ ಸಿ.ಟಿ.ಟಿ.ವಿ ಕಣ್ಗಾವಲಿನಲ್ಲಿ ನಡೆಯಬೇಕು. ವೆಬ್‍ಕಾಸ್ಟಿಂಗ್ ಮೂಲಕ ಪ್ರತಿ ಕೇಂದ್ರದ ಮೇಲೆ ನಿಗಾ ವಹಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆದಲ್ಲಿ ಸಂಬಂಧಪಟ್ಟ ಕೇಂದ್ರದ ಮುಖ್ಯಸ್ಥರೆ ಹೊಣೆಗಾರರಾಗಲಿದ್ದಾರೆ ಎಂಬುದನ್ನು ಅಧಿಕಾರಿಗಳು ಮರೆಯಬಾರದು ಎಂದು ಡಿ.ಸಿ. ಎಚ್ಚರಿಕೆಯ ಮಾತುಗಳನ್ನಾಡಿದರು.
ಧಾರ್ಮಿಕ ಭಾವನೆಗೆ ಧಕ್ಕೆಯಾಗದಂತೆ ಫ್ರಿಸ್ಕಿಂಗ್: ಯಾವುದೇ ಅಭ್ಯರ್ಥಿಯ ಧಾರ್ಮಿಕ ಭಾವನೆಗೆ ಧಕ್ಕೆಯಾಗದಂತೆ ಪೆÇಲೀಸ್ ಸಿಬ್ಬಂದಿ ಫ್ರಿಸ್ಕಿಂಗ್ ಮಾಡಬೇಕು. ಪ್ರವೇಶ ಪತ್ರದಲ್ಲಿ ನೀಡಿದ ವಸ್ತ ಸಂಹಿತೆ ಸೇರಿದಂತೆ ಎಲ್ಲಾ ಸೂಚನೆಗಳನ್ನು ಅಭ್ಯರ್ಥಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಡಿ.ಸಿಮ ಸೂಚಿಸಿದರು.
ಸಭೆಯಲ್ಲಿ ಡಿ.ಸಿ.ಪಿ ಶಾಲು, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಶಾಲಾ ಶಿಕ್ಷಣ (ಪದವಿ ಪೂರ್ವ) ಉಪನಿರ್ದೇಶಕ ದೇವನಗೌಡ ಪಾಟೀಲ, ಸಹಾಯಕ ಆಯುಕ್ತರಾದ ರಿತಿಕಾ ವರ್ಮಾ ಸೇರಿದಂತೆ ಪರೀಕ್ಷೆ ಕೇಂದ್ರದ ಮುಖ್ಯಸ್ಥರು ಇದ್ದರು.