ಉತ್ಖನನಕ್ಕೆ ಚಾಲನೆ

ಗದಗ,ಜೂ4: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಪ್ರವಾಸೋದ್ಯಮ ಇಲಾಖೆ, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪೃ ಮೈಸೂರು, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಗದಗ ಇವರ ಸಹಯೋಗದಲ್ಲಿ ಮಂಗಳವಾರ(ಜೂ.3) ಲಕ್ಕುಂಡಿಯ ಶ್ರೀ ಕೋಟೆ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಉತ್ಖನನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದರು.


ಸರ್ಕಾರದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಎಸ್.ಪಾಟೀಲ, ಸಂಸದರಾದ ಪಿ.ಸಿ.ಗದ್ದಿಗೌಡರ, ಶಾಸಕರುಗಳಾದ ಸಿ.ಸಿ.ಪಾಟೀಲ, ಚಂದ್ರು ಲಮಾಣಿ,ಎನ್.ಎಸ್.ಕೋನರಡ್ಡಿ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಲಕ್ಕುಂಡಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಕೆಂಚಪ್ಪ ಪೂಜಾರ, ಗ್ರಾಮ ಪಂಚಾಯತ ಉಪಾಧ್ಯಕ್ಷರು, ಸದಸ್ಯರುಗಳು, ಮಾಜಿ ಸಚಿವರಾದ ಎಸ್.ಎಸ್.ಪಾಟೀಲ, ಮಾಜಿ ಶಾಸಕ ಡಿ.ಆರ್.ಪಾಟೀಲ,ಮಾಜಿ ಸಂಸದ ಐ.ಜಿ.ಸನದಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪಂಚಾಯತ ಸಿ.ಇ.ಓ ಭರತ. ಎಸ್, ಜಿಲ್ಲಾ ಪೆÇೀಲಿಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ಸೇರಿದಂತೆ ಗಣ್ಯರುಗಳು ಉಪಸ್ಥಿತರಿದ್ದರು.