ಮುಖ್ಯಮಂತ್ರಿ ಮಾಧ್ಯಮ ಸಂಜೀವಿನಿ ಯೋಜನೆ ಎಲ್ಲಾ ಪತ್ರಕರ್ತರಿಗೂ ವಿಸ್ತರಿಸಿ- ಕೆಯುಡಬ್ಲೂಜೆ ರಾಜ್ಯಧ್ಯಕ್ಷ ಶಿವಾನಂದ ತಗಡೂರ

ಬೆಂಗಳೂರು,ನ.೨೪- ಮುಖ್ಯಮಂತ್ರಿ ಮಾಧ್ಯಮ ಸಂಜೀವಿನಿ ಯೋಜನೆಯನ್ನು ರಾಜ್ಯದ ಎಲ್ಲಾ ಪತ್ರಕರ್ತರಿಗೂ ವಿಸ್ತರಿಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಧ್ಯಕ್ಷ ಶಿವಾನಂದ ತಗಡೂರ ಅವರು, ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಬೆಂಗಳೂರಿನ ಗಾಂಧಿ ಬವನದಲ್ಲಿ ನಡೆದ ಕೆಡಬ್ಲೂಜೆ ರಾಜ್ಯ ಮಟ್ಟದ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಘದ ಎಲ್ಲಾ ಬೇಡಿಕೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸುವ ಮೂಲಕ ನುಡಿದಂತೆ ನಡೆದಿದ್ದಾರೆ ಎಂದು ಹೇಳಿದರು.
ತುಮಕೂರನಲ್ಲಿ ನಡೆದ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಮಾಧ್ಯಮ ಸಂಜೀವಿನಿ ಯೋಜನೆಯನ್ನು ಘೋಷಣೆ ಮಾಡಿ ಬಜೆಟನಲ್ಲಿ ಅನುಮೋದನೆ ನೀಡುವ ಮೂಲಕ ನುಡಿದಂತೆ ನಡೆದಿದ್ದಾರೆ ಎಂದರು. ಆದ್ರೆ ಈ ಯೋಜನೆ ಮಾನ್ಯತೆ ಪಡೆದ ಪತ್ರಕರ್ತರಿಗೆ ಮಾತ್ರ ಎಂಬ ಷರತ್ತು ಹೇರಲಾಗಿದೆ. ಹೀಗಾಗಿ ಈ ಯೋಜನೆಯನ್ನು ಮಾನ್ಯತೆ ಪಡೆದ ಪತ್ರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಪತ್ರಕರ್ತರಿಗೂ ವಿಸ್ತರಿಸುವಂತೆ ಹೋರಾಟದ ಮೂಲಕ ಆಗ್ರಹಿಸುತ್ತೇನೆ ಎಂದು ಹೇಳಿದರು.
ಇದಲ್ಲದೇ ಹಿರಿಯ ಪತ್ರಕರ್ತರನ್ನು ಮನೆಯಂಗಳದಲ್ಲಿ ಹಿರಿಯ ಪತ್ರಕರ್ತರನ್ನು ಸನ್ಮಾಯಿಸುವ ವಿನೂತನ ಯೋಜನೆ ಹಮ್ಮಿಕೊಳ್ಳುವ ಮೂಲಕ ಪತ್ರಕರ್ತರ ಮೆಚ್ಚುಗೆಗೆ ಪಾತ್ರವಾಗಿದ್ದೇವೆ ಎಂದರು. ಮೂರು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಬೇಡಿಕೆಗೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿ ಈಡೇರಿಸಿದ್ದಾರೆ. ಕೆಲ ಷರತ್ತುಗಳನ್ನು ಮತ್ತಷ್ಟು ಸಡಿಲಗೊಳಿಸುವ ಮೂಲಕ ಎಲ್ಲಾ ಪತ್ರಕರ್ತರಿಗೂ ಬಸ್ ಸೌಲಭ್ಯ ಸಿಗುವ ಹಾಗೆ ಮುಂಬರುವ ದಿನಗಳಲ್ಲಿ ಸಂಘ ಪ್ರಾಮಾಣಿಕ ಪ್ರಯತ್ನ ನಡೆಸಲಿದೆ ಎಂದರು.
ಒಟ್ಟಾರೆ ಎಲ್ಲರೂ ಒಗ್ಗೂಡಿ ಸಂಘವನ್ನು ಯಶಸ್ವಿಯಾಗಿ ಮುನ್ನಡೆಸೋಣ ಎಂದು ಕರೆ ನೀಡಿದರು. ಅರಣ್ಯ ಸಚಿವ ಈಶ್ವರ ಖಂಡ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಿರಿಯ ಮಹಿಳಾ ಪತ್ರಕರ್ತೆ ನಾಗಮಣಿ ಅವರು ಸೇರಿದಂತೆ ಎಲ್ಲಾ ನೂತನ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.