Home ಜಿಲ್ಲೆ ಹೈಕಮಾಂಡ್ ಹೇಳಿದರೆ ಡಿಕೆಶಿ ಸಿಎಂ ಆಗ್ತಾರೆ, ಇಲ್ಲದಿದ್ದರೆ ಸಿದ್ದರಾಮಯ್ಯನವರೇ ಮುಂದುವರಿಯುತ್ತಾರೆ: ಡಾ ಯತೀಂದ್ರ

ಹೈಕಮಾಂಡ್ ಹೇಳಿದರೆ ಡಿಕೆಶಿ ಸಿಎಂ ಆಗ್ತಾರೆ, ಇಲ್ಲದಿದ್ದರೆ ಸಿದ್ದರಾಮಯ್ಯನವರೇ ಮುಂದುವರಿಯುತ್ತಾರೆ: ಡಾ ಯತೀಂದ್ರ

ಬೀದರ್: ಫೆ.8:ಹೈಕಮಾಂಡ್ ಅಂದರೆ ಹೈಕಮಾಂಡೇ, ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ನಾನು ಅದನ್ನೇ ನಿನ್ನೆ ಹೇಳಿದ್ದು, ಹೈಕಮಾಂಡ್ ಸದ್ಯಕ್ಕೆ ನಾಯಕತ್ವ ಬದಲಾವಣೆ ಬಗ್ಗೆ ಹೇಳಿಲ್ಲ, ಹಾಗಾಗಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ನಾನು ಹೇಳಿದ್ದು ಎಂದು ಡಾ ಯತೀಂದ್ರ ಸಿದ್ದರಾಮಯ್ಯ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನಿನ್ನೆ ಮೈಸೂರಿನಲ್ಲಿ ಮಾತನಾಡುವ ವೇಳೆ ಹೈಕಮಾಂಡ್ ಸದ್ಯಕ್ಕೆ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುತ್ತಿಲ್ಲ, ತಂದೆಯರೇ 5 ವರ್ಷ ಸಿಎಂ ಆಗಿ ಇರುತ್ತಾರೆ ಎಂದು ನಾನು ಅಂದುಕೊಳ್ಳುತ್ತೇನೆ ಎಂದಿದ್ದರು. ಅದಕ್ಕೆ ಡಿ ಕೆ ಶಿವಕುಮಾರ್ ಯತೀಂದ್ರ ಅವರು ಹೇಳಿದ ಮೇಲೆ ಮುಗೀತು, ಅವರೇ ಹೈಕಮಾಂಡ್ ಎಂದು ಭಾವಿಸೋಣ ಎಂದಿದ್ದರು.