Home ಜಿಲ್ಲೆ ಬೆಂಗಳೂರು ಬರ ನಿರ್ವಹಣೆ ವೈಫಲ್ಯ-ಸರ್ಕಾರದ ವಿರುದ್ಧ ಹೋರಾಟಕ್ಕೆ ಬಿಜೆಪಿ ನಿರ್ಧಾರ

ಬರ ನಿರ್ವಹಣೆ ವೈಫಲ್ಯ-ಸರ್ಕಾರದ ವಿರುದ್ಧ ಹೋರಾಟಕ್ಕೆ ಬಿಜೆಪಿ ನಿರ್ಧಾರ

ಬೆಂಗಳೂರು, ಆ. ೨- ರಾಜ್ಯದ ಬರ ಪರಿಸ್ಥಿತಿಯನ್ನು ನಿಭಾಯಿಸಲು ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ಹೋರಾಟ, ಮುಂದಿನ ಉಪಚುನಾವಣೆಗಳು, ಕಾವೇರಿ ನದಿ ನೀರಿನ ವಿಚಾರ, ಕೆಪಿಎಸ್‌ಸಿ ಹಗರಣ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಗಳನ್ನು ನಡೆಸಲಾಗಿದೆ.


ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್‌ದಾಸ್, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ, ರಾಜ್ಯದಲ್ಲಿ ಮಳೆ ಕೊರತೆ, ಬರ ಪರಿಸ್ಥಿತಿ, ಬರ ಪರಿಹಾರದಲ್ಲಿ ರಾಜ್ಯ ಸರ್ಕಾರದ ವೈಫಲ್ಯ, ಪಿಂಚಣಿ ವಿವಾದ ಮತ್ತು ಮುಂಬರುವ ಉಪಚುನಾವಣೆಗಳ ಬಗ್ಗೆ ಚರ್ಚೆ ನಡೆಸಲಾಯಿತು.


ರಾಜ್ಯದಲ್ಲಿ ಬರ ಇದ್ದರೂ ರಾಜ್ಯ ಸರ್ಕಾರ ಪರಿಹಾರ ಕಾರ್ಯಗಳನ್ನು ಕೈಗೊಳ್ಳದೆ ಇರುವುದರ ವಿರುದ್ಧ ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಸದನದಲ್ಲಿ ಯಾವ ರೀತಿ ಹೋರಾಟ ನಡೆಸಬೇಕು ಎಂಬ ಬಗ್ಗೆಯೂ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಯಿತು.


ಮುಂಬರುವ ಹಿರಿಯೂರು ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ನಿಲ್ಲಿಸುವ ಸಂಬಂಧ ಚರ್ಚೆಗಳು ನಡೆದವು. ಹಾಗಯೇ ಆಕ್ಟೋಬರ್‌ನಲ್ಲಿ ನಡೆಸುವ ವಿಧಾನಪರಿಷತ್ ಚುನಾವಣೆ ಸಂಬಂಧವೂ ಚರ್ಚೆಗಳು ನಡೆದವು.


ಕೆಪಿಎಸ್‌ಸಿ ಹಗರಣದ ಬಗ್ಗೆಯೂ ವಿಧಾನಮಂಡಲದ ಅಧಿವೇಶನದಲ್ಲಿ ಚರ್ಚೆ ಮಾಡುವ ಬಗ್ಗೆಯೂ ಇಂದಿನ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಗಿದೆ.


ತಾಂತ್ರಿಕ ಕಾರಣದಿಂದ ಪಿಂಚಣಿ ವಂಚಿತರಾದರಪರ ಹೋರಾಟ ನಡೆಸಲುಸಭೆಯಲ್ಲಿ ತೀರ್ಮಾನಗಳಾದವು ಎಂದು ಹೇಳಲಾಗಿದೆ. ಹಾಗೆಯೇ ಕಾವೇರಿ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಯನ್ನು ಕಾರಪಾಡಲು ರಾಜ್ಯ ಸ ರ್ಕಾದ ಮೇಲೆ ಯಾವ ರೀತಿ ಒತ್ತಡ ಹೇರಬೇಕು, ಅಗ ತ್ಯವಿದ್ದೆ ಕಾವೇರಿ ವಿಚಾರದಲ್ಲಿ ಹೋರಾಟ ನಡೆಸುವ ಬಗ್ಗೆಯೂ ಇಂದಿನ ಕೋರ್ ಕ ಮಿಟಿ ಸಭೆಯಲ್ಲಿ ಚರ್ಚೆಗಳು ನಡೆದವು ಎನ್ನಲಾಗಿದೆ.


ಇಂದಿನ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ವಿಧಾನಪರಿಷತ್‌ನ ವಿಪಕ್ಷ ನಾಯಕರುಗಳಾದ ಆರ್. ಅಶೋಕ್, ಚಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜಬೊಮ್ಮಾಯಿ, ಸದಾನಂದಗೌಡ, ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವರುಗಳಾದ ಸಿ.ಟಿ. ರವಿ, ಡಾ.ಸಿ.ಎನ್. ಅಶ್ವತ್ಥ್‌ನಾರಾಯಣ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಶಾಸಕರುಗಳಾದ ನಿರ್ಮಲ್ ಕುಮಾರ್ ಸುರಾನಾ, ಪಿ. ರಾಜೀವ್, ರಾಜ್ಯ ಸಹ ಉಸ್ತುವಾರಿ ಪಿ. ಸುಧಾಕರ್‌ರೆಡ್ಡಿ ಭಾಗಿಯಾಗಿದ್ದರು.


ರಾಜ್ಯದ ರೈತರ ದ್ವನಿಯಾಗಿ ಬಿಜೆಪಿ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.


ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿಂದು ನಡೆದ ಕೋರ್ ಕಮಿಟಿ ಸಭೆಯ ನಂತರ ಸುದ್ದಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆ ಕೊರತೆಯಿಂದ ಭೀಕರ ಬರ ಇದೆ. ಅದರ ಬಗ್ಗೆ ಗಮನಹರಿಸದೆ ರಾಜ್ಯ ಸರ್ಕಾರ ಕೈಕಟ್ಟಿ ಕುಳಿತಿದೆ ಎಂದು ಆರೋಪಿಸಿದರು


ರಾಜ್ಯ ಸರ್ಕಾರದ ಈ ನಡೆಯ ವಿರುದ್ಧ ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿ ಹೋರಾಟ ನಡೆಸಲಿದೆ. ಸದನದಲ್ಲಿ ರೈತರ ಧ್ವನಿಯಾಗಿ ಯಾವ ವಿಚಾರಗಳನ್ನು ಮಂಡನೆ ಮಾಡಬೇಕು ಎಂಬ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿದ್ದೇವೆ. ಸದನದ ಹೊರಗೂ, ಒಳಗೂ ಬಿಜೆಪಿ ರಾಜ್ಯದ ಜನತೆ ಪರವಾಗಿ ಹೋರಾಟ ನಡೆಸಲಿದೆ ಎಂದರು.


ಮುಂದಿನ ಅಕ್ಟೋಬರ್‌ನಲ್ಲಿ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳಿಗೆ ನಡೆಯುವ ಚುನಾವಣೆ ಬಗ್ಗೆ ಚರ್ಚೆ ನಡೆಸಲಾಯಿತು. ಈಗಾಗಲೇ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಇನ್ನೂ ಒಂದು ಕ್ಷೇತ್ರಕ್ಕೆ ಜೆಡಿಎಸ್ ಜತೆ ಸಮಾಲೋಚನೆ ಮಾಡಿ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು ಎಂದರು.


ಕೆಪಿಎಸ್‌ಸಿ ಹಗರಣದ ಬಗ್ಗೆಯೂ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ. ಕೆಪಿಎಸ್‌ಸಿಯಲ್ಲಿ ನಡೆದ ಅಕ್ರಮದಿಂದ ಪ್ರತಿಭಾವಂತ ಯುವಕರಿಗೆ ಅನ್ಯಾಯವಾಗಿದೆ ಈ ಬಗ್ಗೆಯೂ ಬಿಜೆಪಿ ಹೋರಾಟ ನಡೆಸಲಿದೆ ಎಂದರು.


ಬಿಡದಿ ಟೌನ್‌ಶಿಪ್ ವಿರೋಧಿಸಿ ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆ ಸಂಬಂಧ ಯಾವುದೇ ಗೊಂದಲ ಇಲ್ಲ. ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಜತೆ ಮಾತನಾಡಿದ್ದೇನೆ. ಜೆಡಿಎಸ್‌ನವರು ದಿನಾಂಕ ಘೋಷಣೆ ಮಾಡಿದ್ದಾರೆ. ನಾವು ಬಿಡದಿ ಟೌನ್‌ಶಿಪ್ ಬಗ್ಗೆ ಸದನದಲ್ಲಿ ಮಾತನಾಡುತ್ತೇವೆ ಎಂದರು.


ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಜೋಸೆಫ್ ಅವರಿಗೆ ಕಾವೇರಿ ನೀರಿನ ಹಂಚಿಕೆ ಸಂಬಂಧ ಪತ್ರ ಬರೆದಿದ್ದನೆ. ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಮನಸ್ಸು ಮಾಡಿದರೆ ಕಾವೇರಿ ಮೇಕೆದಾಟು ಎರಡೂ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ಹಿಂದೆ ಸರ್ವಜ್ಞ-ತಿರುವಳ್ಳೂರು ಪ್ರತಿಮೆ ವಿವಾದವನ್ನು ಆಗಿನ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕರುಣಾನಿಧಿ ಅವರು ಸೌಹಾರ್ದಯುತವಾಗಿ ಪರಿಹಾರ ಮಾಡಿಕೊಂಡಿರುವುದನ್ನು ಪತ್ರದಲ್ಲಿ ಉಲ್ಲೇಖಿಸಿದ್ದನೆ ಎಂದರು.


ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಕುಳಿತು ಮಾತು ಕತೆ ನಡೆಸಿ ಸರಿಯಾದ ತೀರ್ಮಾನ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.