
ವಿಜಯಪುರ, ಜು.8: ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ, ತಾನು ಡಿಎಸ್‍ಪಿ ಎಂದು ನಂಬಿಸಿ ನಿರುದ್ಯೋಗಿ ಯುವಕರಿಗೆ ಪೆÇಲೀಸ್ ಹಾಗೂ ಇತರೆ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ವಂಚನೆ ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ ಜಿಲ್ಲೆಯ ಎಪಿಎಂಸಿ ಠಾಣೆ ಪೆÇಲೀಸರು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ವರಗೋಡದಿನ್ನಿ ಗ್ರಾಮದ ಗ್ಯಾನನಗೌಡ @ ಜ್ಞಾನಗೌಡ @ ಗಣೇಶ @ ಸಿ. ಸಂಪತ್‍ಕುಮಾರ (31) ಎಂದು ಗುರುತಿಸಲಾಗಿದೆ.
ಕೊಲೆ ಯತ್ನ ಪ್ರಕರಣದಲ್ಲೂ ಆರೋಪ
2014ರಲ್ಲಿ ವಿಜಯಪುರದ ಎಪಿಎಂಸಿ ಪೆÇಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಪ್ರಕಾರ, ಆರೋಪಿಯು ಕಾಖಂಡಕಿ ಮೂಲದ ವಿಠ್ಠಲ ಛಾಯಾಗೋಳ ಅವರ ಸಂಬಂಧಿಕನಿಗೆ ಪೆÇಲೀಸ್ ಉದ್ಯೋಗ ಕೊಡಿಸುವುದಾಗಿ ಹೇಳಿ ?1.20 ಲಕ್ಷ ಪಡೆದುಕೊಂಡಿದ್ದ. ಬಳಿಕ ಹಣವನ್ನು ಮರಳಿಸುವಂತೆ ಒತ್ತಾಯಿಸಿದಾಗ, ಸಹಚರರೊಂದಿಗೆ ಸೇರಿ ದೂರುದಾರರನ್ನು ಅಪಹರಿಸಿ ಕೊಪ್ಪಳ ಜಿಲ್ಲೆಯ ಹುಲಗಿ ಸಮೀಪದ ಕಾಲುವೆಗೆ ಕೈಕಾಲು ಕಟ್ಟಿ ಗೋಣಿಚೀಲದಲ್ಲಿ ಹಾಕಿ ಕೊಲೆ ಮಾಡಲು ಯತ್ನಿಸಿದ್ದಾನೆ ಎಂಬ ಆರೋಪವಿದೆ.
ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ಪ್ರಕರಣವನ್ನು ಲಾಂಗ್ ಪೆಂಡಿಂಗ್ ರಿಜಿಸ್ಟರ್ (ಐPಖ) ಎಂದು ಪರಿಗಣಿಸಲಾಗಿತ್ತು.
ಮತ್ತೆ ವಂಚನೆ ಪ್ರಕರಣ
ತಲೆಮರೆಸಿಕೊಂಡಿದ್ದ ಅವಧಿಯಲ್ಲಿಯೇ 2026ರಲ್ಲಿ ತಾಳಿಕೋಟೆ ಪೆÇಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದ್ದು, ತಾನು ಡಿಎಸ್‍ಪಿ ಎಂದು ನಂಬಿಸಿ ಜೈಲರ್ ಹುದ್ದೆ ಕೊಡಿಸುವುದಾಗಿ ಹೇಳಿ ಮುದ್ದೇಬಿಹಾಳ ತಾಲ್ಲೂಕಿನ ವ್ಯಕ್ತಿಯಿಂದ ?8 ಲಕ್ಷ ಪಡೆದು ವಂಚನೆ ಮಾಡಿದ ಆರೋಪವೂ ಎದುರಿಸುತ್ತಿದ್ದಾನೆ.
ತಾಂತ್ರಿಕ ತನಿಖೆಯಿಂದ ಬಂಧನ
ಎಪಿಎಂಸಿ ಠಾಣೆಯ ಪಿಎಸ್‍ಐ ಬಸವರಾಜ ತಿಪ್ಪರೆಡ್ಡಿ ನೇತೃತ್ವದ ತಂಡವು ಆರೋಪಿಯ ವಿವಿಧ ಮೊಬೈಲ್ ಸಂಖ್ಯೆಗಳ ಸ್ಥಳ ಮಾಹಿತಿ ಹಾಗೂ ಇತರೆ ತಾಂತ್ರಿಕ ಮಾಹಿತಿಯ ಆಧಾರದ ಮೇಲೆ ಬೆಂಗಳೂರಿನಲ್ಲಿ ಆತನನ್ನು ಪತ್ತೆಹಚ್ಚಿ ಜುಲೈ 6ರಂದು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
ಹಲವು ಪ್ರಕರಣಗಳು ದಾಖಲು
ಆರೋಪಿಯ ವಿರುದ್ಧ 2012ರಿಂದ ಮುದ್ದೇಬಿಹಾಳ, ಎಪಿಎಂಸಿ, ಆದರ್ಶನಗರ ಹಾಗೂ ತಾಳಿಕೋಟೆ ಪೆÇಲೀಸ್ ಠಾಣೆಗಳಲ್ಲಿ ವಂಚನೆ, ಕೊಲೆ ಯತ್ನ, ಶಸ್ತ್ರಾಸ್ತ್ರ ಕಾಯ್ದೆ ಸೇರಿದಂತೆ ವಿವಿಧ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.
12 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ ತನಿಖಾ ತಂಡದ ಕಾರ್ಯವನ್ನು ಜಿಲ್ಲಾ ಪೆÇಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಶ್ಲಾಘಿಸಿದ್ದಾರೆ.



























