
ಕುಂದಗೋಳ ಜೂ.೭: ತಾಲೂಕಿನ ಸಂಶಿ ಗ್ರಾಮದ ಕೆಎಲ್‌ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಅಂತಿಮ ವರ್ಷದ ಬಿಕಾಂ ಪದವಿ ವಿದ್ಯಾರ್ಥಿಗಳ ಬಿಳ್ಕೊಡುವ ಸಮಾರಂಭ-ವಾರ್ಷಿಕ ಸ್ನೇಹ ಸಮ್ಮೇಳನ ಜರುಗಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾಲೇಜಿನ ಹಳೇ ವಿದ್ಯಾರ್ಥಿನಿ, ಧಾರವಾಡ ಕೆಎಸ್‌ಆಯ್‌ಎಸ್‌ಎಪ್ ಕೇಂದ್ರದ ಪಿಎಸೈ ವನಮಾಲಾ ದಾನಣ್ಣವರ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳುವ ಜತೆಗೆ ಸತತ ಪ್ರಯತ್ನದಿಂದ ಉನ್ನತ ಗುರಿ ಸಾಧಿಸಿ, ತಂದೆ-ತಾಯಿ ಹಾಗೂ ಗುರುಗಳಿಗೆ ಕೀರ್ತಿ ತರಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜು ಅಧ್ಯಕ್ಷ ಎ ಬಿ ಉಪ್ಪಿನ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳುವುದು ರೊಂದಿಗೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ಕಳೆದ ವರ್ಷ ಬಿಕಾಂ ಪದವಿ ೬ ನೆ ಸೆಮಿಸ್ಟರ್ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳುಹಾಗೂ ಪಿಎಸೈ ವನಮಾಲಾ ಅವರನ್ನು ಸನ್ಮಾನಿಸಿ-ಗೌರವಿಸಿ, ವಿವಿಧ ಸಾಂಸ್ಕöÈತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಸಭೆಯಲ್ಲಿ ಬಿ ಬಿ ಬೂದಿಹಾಳ, ಬಿ ಎಂ ಕಜ್ಜಿ ಉಪಸ್ಥಿತರಿದ್ದರು. ಪ್ರಾಚಾರ್ಯ ಪ್ರೊ ರಮೇಶ ಅತ್ತಿಗೇರಿ ಸ್ವಾಗತಿಸಿದರು, ಯಶೋದಾ ಆಲೂರ, ಕಾವ್ಯ ಕಬ್ಬೆರ ಕಾರ್ಯಕ್ರಮ ನಿರೂಪಿಸಿದರು, ಡಾ ಎಂ ಸಿ ಅಂಗಡಿ ಮತ್ತು ಕಾವ್ಯ ಬುಕನಟ್ಟಿ ಐಶ್ವರ್ಯ ಪ್ರಾರ್ಥಿಸಿದರು, ಬಾಲೆಹೊಸೂರ ವಂದಿಸಿದರು


























