Home ಜಿಲ್ಲೆ ಕಲಬುರಗಿ ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ

ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ

ಕರಜಗಿ,ಸೆ 3: ಸ್ವಂತ ಜಮೀನಿನಲ್ಲಿ ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣ್ಣೂರ ಗ್ರಾಮದಲ್ಲಿ ನಡೆದಿದೆ.ಹೊನ್ನಪ್ಪ ಹೀರಗಪ್ಪ ರೋಡಗಿ ( 40) ಆತ್ಮಹತ್ಯೆ ಮಾಡಿಕೊಂಡ ರೈತ.
ಆಗಸ್ಟ್ 27 ರಂದು ಸ್ವಂತ ಜಮೀನಿನಲ್ಲಿ ಕೀಟನಾಶಕ ಸೇವಿಸಿದ್ದ ರೈತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಸೋಲಾಪುರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು ಚಿಕಿತ್ಸೆ ಫಲಿಸದೇ ರೈತ ನಿಧನನಾಗಿದ್ದಾನೆ.ಅತಿಯಾದ ಸಾಲ ಬಾಧೆಯಿಂದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಮಣ್ಣೂರ್ ಗ್ರಾಮದ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ದಲ್ಲಿ 3 ಲಕ್ಷ ಸಾಲ, ಹಾಗೂ ಇತರ ಕಡೆ 8 ಲಕ್ಷ ರೂಪಾಯಿ ಸಾಲ ಹೊಂದಿದ್ದು ಒಟ್ಟಾರೆ 11 ಲಕ್ಷ ರೂಪಾಯಿ ಸಾಲವಿದ್ದು, ಸಾಲ ತೀರಿಸದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮೃತರಿಗೆ ಇಬ್ಬರು ಗಂಡು ಹಾಗೂ ನಾಲ್ಕು ಹೆಣ್ಣು ಮಕ್ಕಳಿದ್ದಾರೆ.